Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ: ಹೆಚ್ಡಿಕೆ ತಿರುಗೇಟು

Facebook
Twitter
Telegram
WhatsApp

 

ಬೆಂಗಳೂರು: ಸಿದ್ದರಾಮಯ್ಯ ಅವರಿಗೆ ಜೆಡಿಎಸ್ ಪಕ್ಷವನ್ನು ಟೀಕೆ ಮಾಡದಿದ್ದರೆ ನಿದ್ದೆ ಬರಲ್ಲ ಅಂತ ಕಾಣತ್ತೆ ಎಂದು ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.

ಟ್ವೀಟರ್ ಮೂಲಕ ಕಿಡಿಕಾರುದ ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ, ಸಿಂದಗಿ ಕ್ಷೇತ್ರದಲ್ಲಿ ಅವರ ಪಕ್ಷ 3ನೇ ಸ್ಥಾನದಲ್ಲಿತ್ತು. ಇಲ್ಲಿ ಕಾಂಗ್ರೆಸ್ 2ನೇ ಸ್ಥಾನಕ್ಕೆ ಬಂದ ಇತಿಹಾಸವೇ ಇಲ್ಲ. ಈಗ ನೋಡಿದರೇ ರಾಜಕೀಯ ಬದುಕು ಕೊಟ್ಟ ಪಕ್ಷವನ್ನೆ ನಿಂದಿಸುತ್ತಿದ್ದಾರೆ.

ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತಿರುಗೇಟು ನೀಡಿದ್ದಾರೆ.

ಈಗ ಎಂಸಿ ಮನಗೂಳಿ ನಿಧನದ ಅನುಕಂಪದಲ್ಲಿ ತೇಲುವ ವ್ಯರ್ಥ ಪ್ರಯತ್ನ ಮಾಡುತ್ತಿದ್ದಾರೆ. ನಮ್ಮ ಪಕ್ಷದಲ್ಲಿ ಇದ್ದ ಅವರ ಪುತ್ರನನ್ನು ಹೈಜಾಕ್ ಮಾಡಿ, ಜನರಿಗೆ ತಮ್ಮ ʼಸಿದ್ದಕಲೆʼ ದರ್ಶನ ಆಗುತ್ತಿದ್ದಂತೆಯೇ ಈಗ ಅನುಕಂಪ ಗಿಟ್ಟಿಸುವ ನಾಟಕ ಮಾಡುತ್ತಿದ್ದಾರೆ. ಬುದ್ಧಿವಂತ ಮತದಾರರು ಜೆಡಿಎಸ್ ಪಕ್ಷಕ್ಕೆ ಮತ ಹಾಕಲ್ಲ ಎಂದು ʼಸಿದ್ಧಹಸ್ತರುʼ ಫರ್ಮಾನು ಹೊರಡಿಸಿದ್ದಾರೆ. ಜನರು ಇವರ ಜೇಬಿನಲ್ಲಿ ಇದ್ದಾರಾ? ಇದು ಸಿಂದಗಿ ಜನರಿಗೆ ಅಪಮಾನ ಮಾಡುವ ಅಹಂಕಾರದ ಹೇಳಿಕೆ. ಅವರೇ ತಕ್ಕ ಉತ್ತರ ನೀಡಲಿದ್ದಾರೆ ಎಂದಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

ಚಿತ್ರದುರ್ಗದಲ್ಲಿ‌ ಆರಂಭಗೊಂಡ ಮತದಾನ ಪ್ರಕ್ರಿಯೆ : ಬೆಳ್ಳಂಬೆಳಿಗ್ಗೆಯೇ ಸಾಲುಗಟ್ಟಿ ನಿಂತ ಮತದಾರರು

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ದೇಶದಾದ್ಯಂತ ನಡೆಯುತ್ತಿರುವ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಇಂದು ಆರಂಭವಾಗಿದೆ. ರಾಜ್ಯದ 14 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭವಾಗಿದೆ. ಚಿತ್ರದುರ್ಗ ನಗರದ ವಿಪಿ ಬಡಾವಣೆಯ

ಮತ ಚಲಾಯಿಸಲು ಯಾವ ದಾಖಲೆಗಳು ಬೇಕು ? ಇಲ್ಲಿದೆ ಮಾಹಿತಿ…!

ಸುದ್ದಿಒನ್, ಚಿತ್ರದುರ್ಗ :  ಮತದಾನ ಮಾಡಲು ಮತದಾರನು ಎಪಿಕ್ (ಆಧಾರ್) ಕಾರ್ಡ್ ಇಲ್ಲವೆಂದು ಚಿಂತಿಸಬೇಕಿಲ್ಲಾ. ಪ್ರಜಾಪ್ರಭುತ್ವದ ಹಬ್ಬದಲ್ಲಿ ಯಾವೊಬ್ಬ ಮತದಾರನು ಮತದಾನದಿಂದ ವಂಚಿತರಾಗಬಾರದು ಎಂಬ ದೃಷ್ಠಿಯಿಂದ ಚುನಾವಣಾ ಆಯೋಗವು ಎಪಿಕ್ ಕಾರ್ಡ್ ಹೊರತುಪಡಿಸಿ 12

error: Content is protected !!