Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್.ಐ.ಆರ್. ಮ್ಯಾಪಿಂಗ್‍ ಅಪ್‍ಡೇಟ್ ಮಾಡಲು ಬಿಎಲ್‍ಓ ರವರಿಗೆ ಸೂಕ್ತ ನಿರ್ದೇಶನ ನೀಡಿ : ಬ್ಲಾಕ್ ಕಾಂಗ್ರೆಸ್ ಕಮಿಟಿ ಮನವಿ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 05 : ಚಿತ್ರದುರ್ಗ ವಿಧಾನಸಭಾ ಕ್ಷೇತ್ರದ ಎಸ್.ಐ.ಆರ್. ಮ್ಯಾಪಿಂಗ್‍ನ್ನು ಒಂದು ವಾರ್ಡ್‍ನಿಂದ ಮತ್ತೊಂದು ವಾರ್ಡ್‍ಗೆ ನಿಗಧಿಪಡಿಸಿದ ಸಮಯದಲ್ಲಿ ಬಿಎಲ್‍ಓ ಗಳ ಮುಖಾಂತರ ವರ್ಗಾವಣೆ ಮಾಡಿಸಿದ್ದು, ಹಳೆ ಮತದಾರರ ಪಟ್ಟಿಯಲ್ಲಿ ಕ್ರಮ ಸಂಖ್ಯೆಗಳು ರದ್ದಾಗಿವೆ. ಮತ್ತು ಬದಲಾವಣೆಯಾಗಿರುವ ಹೊಸ ಮತದಾರರ ಪಟ್ಟಿಯಲ್ಲಿ(ವಾರ್ಡ್ ಶಿಫ್ಟಿಂಗ್) ಆಗಿವೆ. ಆದರೂ ಮ್ಯಾಪಿಂಗ್ ಕ್ರಮ ಸಂಖ್ಯೆಯಲ್ಲಿ ಶಿಫ್ಟಿಂಗ್ ಆಗಿರುವ ಮತದಾರರ ಗುರುತಿನ ಚೀಟಿಯ ವಿವರ ಮತ್ತು ಮ್ಯಾಪಿಂಗ್ ಕ್ರಮ ಸಂಖ್ಯೆ ತೋರಿಸುತ್ತಿಲ್ಲ. ಈ ಸಂಬಂಧ ಸಾರ್ವಜನಿಕರು ನಗರಸಭೆ, ತಾಲ್ಲೂಕು ಕಚೇರಿ, ಉಪ ವಿಭಾಗಾಧಿಕಾರಿಗಳ ಕಚೇರಿ ಹಾಗೂ ಜಿಲ್ಲಾಧಿಕಾರಿಗಳ ಕಚೇರಿಗೆ ಎಡತಾಕಿ ನವೀಕರಣ ಮಾಡಿಕೊಡಲು ಕೋರಿರುವುದರಿಂದ ಮ್ಯಾಪಿಂಗ್ ಅಪ್‍ಡೇಟ್ ಮಾಡಲು ಎಲ್ಲಾ ಬಿಎಲ್‍ಓ ರವರಿಗೆ ಸೂಕ್ತ ನಿರ್ದೇಶನ ನೀಡುವಂತೆ ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಕಮಿಟಿ ತಾಲ್ಲೂಕು ಪ್ರಚಾರ ಸಮಿತಿಯಿಂದ ಅಪರ ಜಿಲ್ಲಾಧಿಕಾರಿಗೆ ಗುರುವಾರ ಮನವಿ ಸಲ್ಲಿಸಲಾಯಿತು.

 

ಚಿತ್ರದುರ್ಗ ಬ್ಲಾಕ್ ಕಾಂಗ್ರೆಸ್ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಡಿ.ಹಸನ್‍ತಾಹಿರ್, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಡಿ.ಎನ್.ಮೈಲಾರಪ್ಪ, ಉಪಾಧ್ಯಕ್ಷ
ಎಸ್.ಎನ್.ರವಿಕುಮಾರ್, ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷ ಎನ್.ಡಿ.ಕುಮಾರ್, ಮೆಹಬೂಬ್‍ಖಾನ್, ಸೈಯದ್ ಮುನಾವರ್, ನಾಗರಾಜ್ ಪೈಲೆಟ್ ಇವರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...