ಬೆಂಗಳೂರುಜುಲೈ.06: ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಎಸ್ಐಆರ್ (SIR) ಪ್ರಕ್ರಿಯೆಯಲ್ಲಿ ಗಂಭೀರ ಲೋಪದೋಷಗಳು ನಡೆದಿವೆ ಎಂದು ಆರೋಪಿಸಿ ಬಿಜೆಪಿ ಹಾಗೂ ಜೆಡಿಎಸ್ ಮೈತ್ರಿಕೂಟದ ಪ್ರಮುಖ ನಾಯಕರು ಜಂಟಿಯಾಗಿ ಮುಖ್ಯ ಚುನಾವಣಾಧಿಕಾರಿಗೆ ಅಧಿಕೃತ ದೂರು ಸಲ್ಲಿಸಿದ್ದಾರೆ.
ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಶಿ ಮತ್ತು ಶೋಭಾ ಕರಂದ್ಲಾಜೆ, ಹೆಚ್.ಡಿ. ಕುಮಾರಸ್ವಾಮಿ, ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ, ಹಿರಿಯ ಮುಖಂಡರಾದ ಸಿ.ಟಿ. ರವಿ, ಡಾ. ಸಿ.ಎನ್. ಅಶ್ವತ್ಥನಾರಾಯಣ ಹಾಗೂ ಸಂಸದ ಗೋವಿಂದ ಕಾರಜೋಳ ಅವರನ್ನೊಳಗೊಂಡ ಉನ್ನತ ಮಟ್ಟದ ನಿಯೋಗವು ಚುನಾವಣಾಧಿಕಾರಿಗಳನ್ನು ಖುದ್ದಾಗಿ ಭೇಟಿ ಮಾಡಿ ಮನವಿ ಪತ್ರ ಹಸ್ತಾಂತರಿಸಿತು.
ರಾಜ್ಯದಲ್ಲಿ ಎಸ್ಐಆರ್ ಪ್ರಕ್ರಿಯೆಯಲ್ಲಿ ಆಗುತ್ತಿರುವ ಅಕ್ರಮಗಳ ಕುರಿತು ಕೇಂದ್ರ ಸಚಿವರಾದ ಶ್ರೀ @JoshiPralhad ಮತ್ತು ಶ್ರೀ @hd_kumaraswamy ಅವರ ನೇತೃತ್ವದ ಬಿಜೆಪಿ ಮತ್ತು ಜೆಡಿಎಸ್ ನಿಯೋಗ ಇಂದು ಕೇಂದ್ರ ಚುನಾವಣಾ ಆಯೋಗದ ಕಚೇರಿಗೆ ಭೇಟಿ ನೀಡಿ ಆಯುಕ್ತರಿಗೆ ಮನವಿ ಸಲ್ಲಿಸಿತು.
ನಿಯೋಗದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಶ್ರೀ… pic.twitter.com/P9QskYoSoZ
— BJP Karnataka (@BJP4Karnataka) July 6, 2026
ರಾಜ್ಯದಲ್ಲಿ ಸದ್ಯ ಜಾರಿಯಲ್ಲಿರುವ ಎಸ್ಐಆರ್ ಪ್ರಕ್ರಿಯೆಯು ಪಾರದರ್ಶಕವಾಗಿ ನಡೆಯುತ್ತಿಲ್ಲ ಮತ್ತು ಇದರಲ್ಲಿ ಹಲವು ನಿಯಮಾವಳಿಗಳ ಉಲ್ಲಂಘನೆಯಾಗಿದೆ ಎಂದು ದೂರಿನಲ್ಲಿ ಪ್ರಮುಖವಾಗಿ ಪ್ರಶ್ನಿಸಲಾಗಿದೆ. ಈ ಕೂಡಲೇ ಚುನಾವಣಾ ಆಯೋಗವು ಮಧ್ಯಪ್ರವೇಶಿಸಿ ಲೋಪಗಳನ್ನು ಸರಿಪಡಿಸಬೇಕು ಎಂದು ಮೈತ್ರಿ ನಾಯಕರು ಒತ್ತಾಯಿಸಿದ್ದಾರೆ.


















