Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ರಾಜ್ಯದಲ್ಲಿ SIR ವೇಳಾಪಟ್ಟಿ ಪರಿಷ್ಕರಣೆ: ಬಿಎಲ್‌ಒಗಳ ಮನೆಮನೆ ಭೇಟಿ ಅವಧಿ ಆಗಸ್ಟ್ 17ರವರೆಗೆ ವಿಸ್ತರಣೆ

---Advertisement---

ಬೆಂಗಳೂರು.ಆಗಸ್ಟ್8 : ಕರ್ನಾಟಕದಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗವು ಪರಿಷ್ಕರಿಸಿದೆ.

ಈ ಹಿಂದೆ ನಿಗದಿಯಾಗಿದ್ದ ವೇಳಾಪಟ್ಟಿಗೆ ಸಣ್ಣಪುಟ್ಟ ತಿದ್ದುಪಡಿಗಳನ್ನು ತರಲಾಗಿದ್ದು, ಪ್ರಮುಖವಾಗಿ ಬೂತ್ ಮಟ್ಟದ ಅಧಿಕಾರಿಗಳು (ಬಿಎಲ್‌ಒ) ಸಾರ್ವಜನಿಕರ ಮನೆಗಳಿಗೆ ತೆರಳಿ ಗಣತಿ ನಮೂನೆ ನೀಡುವುದು ಹಾಗೂ ಸ್ವೀಕರಿಸುವ ಗಡುವನ್ನು ವಿಸ್ತರಿಸಲಾಗಿದೆ.

ಹಳೆಯ ವೇಳಾಪಟ್ಟಿಯ ಪ್ರಕಾರ ಮನೆಮನೆ ಭೇಟಿ ಪ್ರಕ್ರಿಯೆಗೆ ಆಗಸ್ಟ್ 8 ಕೊನೆಯ ದಿನವಾಗಿತ್ತು. ಆದರೆ, ಆಯೋಗವು ಬಿಡುಗಡೆ ಮಾಡಿರುವ ನೂತನ ಅಧಿಸೂಚನೆಯಂತೆ ಈ ಗಡುವನ್ನು ಆಗಸ್ಟ್ 17ರವರೆಗೆ ಮುಂದುವರಿಸಲಾಗಿದೆ. 2026ರ ಅಕ್ಟೋಬರ್ 1ನ್ನು ಅರ್ಹತಾ ದಿನಾಂಕವನ್ನಾಗಿ ಇಟ್ಟುಕೊಂಡು ಅರ್ಹ ಹೊಸ ಮತದಾರರ ಸೇರ್ಪಡೆ ಮತ್ತು ತಿದ್ದುಪಡಿ ಕಾರ್ಯಗಳನ್ನು ನಿರ್ವಹಿಸಲಾಗುತ್ತಿದೆ.

ಪರಿಷ್ಕೃತ ದಿನಾಂಕಗಳ ವಿವರ:

ಜೂನ್ 30ರಿಂದ ಆರಂಭಗೊಂಡಿರುವ ಮನೆಮನೆ ಸಮೀಕ್ಷೆ ಆಗಸ್ಟ್ 17ರಂದು ಮುಕ್ತಾಯಗೊಳ್ಳಲಿದ್ದು, ಅದೇ ದಿನ ಮತಗಟ್ಟೆಗಳ ಮರುಹೊಂದಾಣಿಕೆ ಕಾರ್ಯವೂ ಪೂರ್ಣಗೊಳ್ಳಲಿದೆ. ತದನಂತರ ಆಗಸ್ಟ್ 24ರಂದು ಕರಡು ಮತದಾರರ ಪಟ್ಟಿಯನ್ನು ಅಧಿಕೃತವಾಗಿ ಹೊರಡಿಸಲಾಗುತ್ತದೆ.

ಕರಡು ಪಟ್ಟಿಯಲ್ಲಿನ ಹೆಸರು, ವಿಳಾಸ ಅಥವಾ ಇತರ ತಪ್ಪುಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆ ಸಲ್ಲಿಸಲು ಆಗಸ್ಟ್ 24ರಿಂದ ಸೆಪ್ಟೆಂಬರ್ 23ರವರೆಗೆ ಅವಕಾಶ ನೀಡಲಾಗಿದೆ. ಹೀಗೆ ಸಲ್ಲಿಕೆಯಾಗುವ ದೂರುಗಳನ್ನು ಆಯೋಗದ ಅಧಿಕಾರಿಗಳು ಆಗಸ್ಟ್ 24ರಿಂದ ಅಕ್ಟೋಬರ್ 22ರ ಅವಧಿಯಲ್ಲಿ ಪರಿಶೀಲಿಸಿ ಸೂಕ್ತ ನಿರ್ಧಾರ ಕೈಗೊಳ್ಳಲಿದ್ದಾರೆ. ಎಲ್ಲಾ ಪ್ರಕ್ರಿಯೆಗಳು ಮುಗಿದ ಬಳಿಕ ಅಂತಿಮ ಮತದಾರರ ಪಟ್ಟಿಯು ಅಕ್ಟೋಬರ್ 27ರಂದು ಪ್ರಕಟವಾಗಲಿದೆ.

Join WhatsApp

Join Now

Join Telegram

Join Now