ಬೆಂಗಳೂರು: ನಟಿ ಅನುಷ್ಕಾ ಶೆಟ್ಟಿ ಅಣ್ಣನಿಗೆ ಕೊಲೆ ಮಾಡಲು ಸ್ಕೆಚ್ ಹಾಕಿದ್ದಾರಂತೆ. ಈ ವಿಚಾರವಾಗಿ ಜಯಕರ್ನಾಟಕ ಸಂಘಟನೆ ಸದಸ್ಯರು ಇಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರನ್ನು ಭೇಟಿ ಮಾಡಿ, ದೂರು ನೀಡಿದ್ದಾರೆ. ದೂರಿನಲ್ಲಿ ಮನ್ಮಿತ್ ರೈ ಹೆಸರನ್ನು ಉಲ್ಲೇಖಿಸಲಾಗಿದೆ.
ಮುತ್ತಪ್ಪ ರೈ ಸಂಬಂಧಿ ಮನ್ಮಿತ್ ರೈ ಮತ್ತು ಗುಣರಂಜನ್ ಇಬ್ಬರು ಮುತ್ತಪ್ಪ ರೈ ಜೊತೆ ಇದ್ದವರು. ಬಳಿಕ ಮನ್ಮಿತ್ ದೂರಾಗಿದ್ದರು. ಈ ಆರೋಪವನ್ನು ಮನ್ಮಿತ್ ರೈ ತಳ್ಳಿಹಾಕಿದ್ದಾರೆ. ಬಿಸಿನೆಸ್ ವಿಚಾರವಾಗಿ ನಾನು ವಿದೇಶದಲ್ಲಿದ್ದೇನೆಂದು ತಿಳಿಸಿದ್ದಾರೆ. ಈ ಹಿಂದೆಯೂ ಇಬ್ಬರ ನಡುವೆ ಗಲಾಟೆ ನಡೆದಿತ್ತು. ಇದೀಗ ಮತ್ತೆ ಇದೇ ವಿಚಾರ ಸದ್ದು ಮಾಡುತ್ತಿದೆ.
ಈ ಬಗ್ಗೆ ಸ್ಪಷ್ಟನೆ ಕೊಟ್ಟಿರುವ ಮನ್ಮಿತ್ ರೈ, ಅವರು ದೂರು ನೀಡಿದ್ದಾರೆ. ಪೊಲೀಸರು ತನಿಖೆ ನಡೆಸುತ್ತಾರೆ. ಆದ್ರೆ ಈ ವಿಚಾರದಲ್ಲಿ ನನ್ನ ಹೆಸರು ಯಾಕೆ ಕೇಳಿ ಬರುತ್ತಿದೆ ಎಂಬುದು ಗೊತ್ತಾಗುತ್ತಿಲ್ಲ. ಇದಕ್ಕೂ ನನಗೂ ಸಂಬಂಧವಿಲ್ಲ. ಕೆಲಸದ ವಿಚಾರವಾಗಿ ನಾನು ವಿದೇಶಕ್ಕೆ ಬಂದಿದ್ದೇನೆ ಎಂದಿದ್ದಾರೆ.