Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಚಿತ್ರದುರ್ಗ ಜೆಎಂಐಟಿ ಬಳಿ ಸ್ಕೈವಾಕ್

---Advertisement---

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 17 : ಜೆಎಂಐಟಿ ಬಳಿ ಸ್ಕೈವಾಕ್ ಅಗತ್ಯವಿದ್ದು, ಈ ತಿಂಗಳಲ್ಲಿಯೇ ಟೆಂಡರ್ ಪ್ರಕ್ರಿಯೆ ನಡೆಸಿ, ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್ ಅವರು ಅಧಿಕಾರಿಗಳಿಗೆ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ರಸ್ತೆ ಸುರಕ್ಷತಾ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಚಂದ್ರಪ್ಪ ಅವರು ಮಾತನಾಡಿ, ನಗರದ ಜೆಎಂಐಟಿ ಬಳಿ ವಿದ್ಯಾರ್ಥಿಗಳು ಹೆದ್ದಾರಿ ಇಕ್ಕೆಲಗಳ ಮೆಶ್ ಅನ್ನು ಡ್ಯಾಮೇಜ್ ಮಾಡಿ, ಆ ಮೂಲಕ ರಸ್ತೆ ದಾಟಿ ಓಡಾಡುತ್ತಿದ್ದಾರೆ. ಹಲವು ಬಾರಿ ಇಲ್ಲಿ ಅಪಘಾತಗಳಾಗುತ್ತಿವೆ.  ಹಾಗಾಗಿ ಇಲ್ಲಿ ಸ್ಕೈವಾಕ್ ಅಗತ್ಯವಿದ್ದು, ಸ್ಕೈವಾಕ್‍ಗೆ ಅನುಮತಿ ನೀಡಬೇಕು ಎಂದು ಸಭೆಗೆ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯೆಯಾಗಿ ಮಾತನಾಡಿದ ಜಿಲ್ಲಾಧಿಕಾರಿಗಳು
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು, ಪೊಲೀಸ್ ಅಧಿಕಾರಿಗಳೊಂದಿಗೆ ಚರ್ಚಿಸಿ, ಕೆಳಗೋಟೆಯ ರಾಷ್ಟ್ರೀಯ ಹೆದ್ದಾರಿ ಬಳಿ ವೇಗ ಕಡಿತಗೊಳಿಸಲು ರಂಬಲ್ ಸ್ಟ್ರಿಪ್ಸ್, ಬ್ಲಿಂಕರ್ಸ್, ಲೈಟಿಂಗ್ ವ್ಯವಸ್ಥೆ ಮಾಡಬೇಕು.  ಗಾಂಧಿ ವೃತ್ತದಿಂದ ಕೆಎಸ್‍ಆರ್‍ಟಿಸಿ ಮಾರ್ಗದ ರಸ್ತೆಯಲ್ಲಿ ಡಿವೈಡರ್ ತೆರವುಗೊಳಿಸಿದ ಬಳಿಕ ರಸ್ತೆಯನ್ನು ಸರಿಯಾದ ರೀತಿಯಲ್ಲಿ ದುರಸ್ತಿ ಮಾಡಿಲ್ಲ,  ಕಬ್ಬಿಣದ ಸರಳುಗಳು ರಸ್ತೆಯ ಮೇಲೆಯೇ ಕಾಣುತ್ತಿದ್ದು, ಅಪಾಯಕಾರಿಯಾಗಿವೆ, ರಸ್ತೆ ಒಂದು ಕಡೆ ಎತ್ತರ, ಇನ್ನೊಂದೆಡೆ ತಗ್ಗಾಗಿದ್ದು, ವಾಹನ ಚಾಲನೆಗೆ ತೊಂದರೆಯಾಗಿ ಅಪಘಾತವಾಗುವ ಸಂಭವವಿದೆ.  ಕೂಡಲೆ ನಗರದಲ್ಲಿ ಎಲ್ಲೆಲ್ಲಿ ಡಿವೈಡರ್‍ಗಳನ್ನು ತೆರವುಗೊಳಿಸಲಾಗಿದೆಯೇ ಅಲ್ಲಿ, ರಸ್ತೆ ಹಾಗೂ ಡಿವೈಡರ್ ಸರಿಪಡಿಸುವ ಕಾರ್ಯ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

ಚಿತ್ರದುರ್ಗ ಜಿಲ್ಲಾ ಸರ್ಕಾರಿ ಹೊರಗುತ್ತಿಗೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿನಯ್. ಎಸ್ ನೇಮಕ

ಚಿತ್ರದುರ್ಗ : ವೀರ ರಾಣಿ ಚೆನ್ನಮ್ಮ ಮಹಿಳಾ ಸಂಘದಿಂದ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ ಆಚರಣೆ

ಒಂದು ಪಕ್ಷಿಯ ನೋವಿನಿಂದ ಹುಟ್ಟಿದ ಮಹಾಕಾವ್ಯ; ವಾಲ್ಮೀಕಿ ರಾಮಾಯಣದ ರೋಚಕ ಕಥೆ ಇಲ್ಲಿದೆ

ಚಿತ್ರದುರ್ಗ ಜಿಲ್ಲಾಸ್ಪತ್ರೆಯ ಆಂತರಿಕ ಕಿತ್ತಾಟ ಮತ್ತೆ ಮುನ್ನೆಲೆಗೆ: ವೈದ್ಯರ ನಡುವಿನ ಸಮನ್ವಯ ಕೊರತೆಗೆ ಶಾಸಕ ವೀರೇಂದ್ರ ಪಪ್ಪಿ ಕ್ಲಾಸ್

ಬಡ ಕುಟುಂಬಗಳಿಗೆ ಆರ್ಥಿಕ ಸಂಕಷ್ಟ ತರಬೇಡಿ: ಚಿತ್ರದುರ್ಗ ಆಸ್ಪತ್ರೆಯಲ್ಲಿ ಅಕ್ರಮ ಹಣ ವಸೂಲಿ ಆರೋಪಕ್ಕೆ ಶಾಸಕ ವೀರೇಂದ್ರ ಪಪ್ಪಿ ಗರಂ

ಬಡ ರೋಗಿಗಳಿಂದ ಹಣ ವಸೂಲಿ, ಕಳಪೆ ಊಟದ ದೂರು: ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ಶಾಸಕ ವೀರೇಂದ್ರ ಪಪ್ಪಿ ಸರ್ಪ್ರೈಸ್ ವಿಸಿಟ್!

Leave a Comment