Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಎಸ್ಎಲ್ಎಲ್ಸಿ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಸೋರಿಕೆ : ತನಿಖೆಗೆ ಸರ್ಕಾರ ಆದೇಶ

---Advertisement---

ಬೆಂಗಳೂರು: ಎಸ್ಎಸ್ಎಲ್ಸಿ ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಿದ್ದು, ಶಿಕ್ಷಣ ಇಲಾಖೆ ಕೂಡ ಎಲ್ಲಾ ಸಿದ್ಧತೆಯನ್ನು ನಡೆಸಿಕೊಂಡಿದೆ. ಪರೀಕ್ಷೆ ಆರಂಭಕ್ಕೂ ಮುನ್ನವೇ ಸಮಾಜ ವಿಜ್ಞಾನ ಪ್ರಶ್ನೆ ಪತ್ರಿಕೆ ಲೀಕ್ ಆಗಿರುವ ವಿಚಾರವೊಂದು ಇದೀಗ ಟೆನ್ಶನ್ ತಂದೊಡ್ಡಿದೆ. ಕಲಬುರಗಿ ಜಿಲ್ಲೆಯಲ್ಲಿ ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪ ಕೇಳಿ ಬಂದಿದೆ. ಈ ಸಂಬಂಧ ರಾಜ್ಯ ಸರ್ಕಾರ ಕೂಡ ತನಿಖೆಗೆ ಆಗ್ರಹಿಸಿದ್ದಾರೆ. ಪ್ರಶ್ನೆ ಪತ್ರಿಕೆ ಸೋರಿಕೆಯಾದ ವಿಚಾರವನ್ನ ಶಿಕ್ಷಣ ಇಲಾಖೆ ಅಧಿಕಾರಿಗಳು ವದಂತಿಯನ್ನು ತಳ್ಳಿ ಹಾಕಿದ್ದಾರೆ.

ಇದು ಸುಳ್ಳು ಸುದ್ದಿ. ಈ ಆರೋಪದಲ್ಲಿ ಹುರುಳಿಲ್ಲ. ಈ ಸಂಬಂಧ ತನಿಖೆ ನಡೆಯಲಿದೆ. ಶಿಕ್ಷಣ ಇಲಾಖೆ ಕೂಡ ಪರಿಶೀಲಿಸಲಿದೆ. ವರದಿ ಬಂದ ಬಳಿಕ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಸಾರ್ವಜನಿಕ ಶಿಕ್ಷಣ ಆಯುಕ್ತ ತ್ರಿಲೋಕ್ ಚಂದ್ರ ಕೆ.ವಿ ಅವರು ತಿಳಿಸಿದ್ದಾರೆ.

ಹತ್ತನೇ ತರಗತಿಗಳ ಪರೀಕ್ಷೆಗಾಗಿ ಪ್ರತಿಯೊಬ್ಬ ವಿದ್ಯಾರ್ಥಿಗೆ ₹50 ಶುಲ್ಕ ವಿಧಿಸಲಾಗುತ್ತದೆ. ಹೀಗಿದ್ದರು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (KSEAB) ಪಾರದರ್ಶಕ ಮತ್ತು ಸುರಕ್ಷಿತವಾಗಿ ನಡೆಸುವಲ್ಲಿ ವಿಫಲವಾಗುತ್ತಿದೆ. ಖಾಸಗಿ ಶಾಲೆಗಳು ಪರೀಕ್ಷೆಗಳನ್ನು ಹೆಚ್ಚು ಪರಿಣಾಮಕಾರಿಯಾಗಿ ನಡೆಸುತ್ತಿವೆ ಎಂದು ರಾಜ್ಯ ಪ್ರಾಥಮಿಕ ಮತ್ತು ಮಾಧ್ಯಮಿಕ ಶಾಲೆಗಳ (KAMS) ಅಧ್ಯಕ್ಷರು ಟೀಕಿಸಿದ್ದಾರೆ. ಶಿಕ್ಷಣ ವ್ಯವಸ್ಥೆಯು ಸುಸೂತ್ರವಾಗಿದ್ದರೆ ಭವಿಷ್ಯ ಸುರಕ್ಷಿತವಾಗಿರುತ್ತದೆ. ಶಿಕ್ಷಕರೇ ಶಿಕ್ಷಣ ವ್ಯವಸ್ಥೆಯ ಬೆನ್ನೆಲುಬು. ಈ ಆರೋಪ ವಿಚಾರದಲ್ಲಿ ಅವರೇ ಮೌನವಾಗಿದ್ದಾರೆ ಎಂದರೆ ಏನರ್ಥ. ಈ ವ್ಯವಸ್ಥೆ ಸರಿಪಡಿಸುವುದು ಅವರ ಅದ್ಯ ಕರ್ತವ್ಯ ಎಂದು ಬೇಸರ ವ್ಯಕ್ತಪಡಿಸಿದರು. ಸದ್ಯ ಮಕ್ಕಳು ಪರೀಕ್ಷೆಗಾಗಿ ಎಲ್ಲಾ ಪ್ರಿಪರೇಷನ್ ಮಾಡಿಕೊಳ್ಳುತ್ತಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ

Leave a Comment