Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಬೆಲೆ ಏರಿಕೆ ನೀತಿ ವಿರೋಧಿಸಿ ಸ್ಲಂ ಜನಾಂದೋಲನ-ಕರ್ನಾಟಕದಿಂದ ಪ್ರತಿಭಟನೆ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 16 : ರಾಜ್ಯ ಸರ್ಕಾರದ ಬೆಲೆ ಏರಿಕೆ ನೀತಿ ವಿರುದ್ದ ಸ್ಲಂ ಜನಾಂದೋಲನ-ಕರ್ನಾಟಕ, ಸಾವಿತ್ರಿಬಾಪುಲೆ ಮಹಿಳಾ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ಜಿಲ್ಲಾಧಿಕಾರಿ ಕಚೇರಿ ಎದುರು ಬುಧವಾರ ಪ್ರತಿಭಟನೆ ನಡೆಸಿ ಕಚೇರಿಯ ಸಹಾಯಕರಿಗೆ ಮನವಿ ಸಲ್ಲಿಸಲಾಯಿತು.

ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಐದು ಉಚಿತ ಗ್ಯಾರೆಂಟಿಗಳನ್ನು ಘೋಷಿಸಿ ಅಧಿಕಾರಕ್ಕೆ ಬಂದ ನಂತರ ಕೊಟ್ಟ ಭರವಸೆಯನ್ನು ಉಳಿಸಿಕೊಳ್ಳಲು ಮುಖ್ಯಮಂತ್ರಿ ಸಿದ್ದರಾಮಯ್ಯನವರು ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಏರಿಸಿ ಜನಸಾಮಾನ್ಯರು ತತ್ತರಿಸುವಂತೆ ಮಾಡಿದ್ದಾರೆ. ಹಾಲು, ವಿದ್ಯುತ್, ಡೀಸೆಲ್ ಬೆಲೆ ಏರಿಸಿರುವುದಲ್ಲದೆ ತ್ಯಾಜ್ಯ ಸಂಗ್ರಹ, ಟೋಲ್ ಶುಲ್ಕ, ಆಸ್ತಿ ಮೇಲಿನ ತೆರಿಗೆಗಳನ್ನು ಹೆಚ್ಚಿಸಿದೆ. ಮೆಟ್ರೋ ದರ ಕೂಡ ಜಾಸ್ತಿಯಾಗಿದೆ. ಬಡವರ ಹಿತ ಕಾಪಾಡುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರ ಅಧಿಕಾರದಿಂದ ಕೆಳಗಿಳಿಯಲಿ ಎಂದು ಪ್ರತಿಭಟನೆ ನೇತೃತ್ವ ವಹಿಸಿದ್ದ ಸ್ಲಂ ಜನಾಂದೋಲನ-ಕರ್ನಾಟಕದ ಜಿಲ್ಲಾ ಸಂಚಾಲಕಿ ಡಿ.ಸುಧಾ ಒತ್ತಾಯಿಸಿದರು.

ಲೀಲಾವತಿ, ರತ್ನಮ್ಮ, ತೇಜೇಶ್ವರಿ, ಪಿ.ಉಮಾದೇವಿ, ಎಂ.ಮಂಜುಳ, ರೇಷ್ಮ ಜಿ. ವಸಂತಮ್ಮ, ಜಯಮ್ಮ, ಶಾಂತಮ್ಮ, ಮಂಜಮ್ಮ, ಶಾಂತಮ್ಮ, ಪಾಪಮ್ಮ, ಕವಿತ, ಶಿಲ್ಪ, ಗಂಗಮ್ಮ, ಸರಿತ ದೇವಮ್ಮ, ಶ್ರೀಲಕ್ಷ್ಮಿ, ಮಹೇಶ, ಹೊನ್ನೂರು ಇವರುಗಳು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

 

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment