Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ನಾಳೆ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ

---Advertisement---

ಚಿತ್ರದುರ್ಗ ಜುಲೈ 11 :  ಕಾರ್ಮಿಕ ಇಲಾಖೆ, ಕರ್ನಾಟಕ ರಾಜ್ಯ ಅಸಂಘಟಿತ ಕಾರ್ಮಿಕ ಸಾಮಾಜಿಕ ಭದ್ರತಾ ಮಂಡಳಿ, ಸಾರಿಗೆ ಇಲಾಖೆ, ಜಿಲ್ಲಾಡಳಿತ ಮತ್ತು ಜಿಲ್ಲಾ ಪಂಚಾಯತ್ ಸಹಯೋಗದಲ್ಲಿ ನಾಳೆ  (ಜುಲೈ 12ರಂದು) ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಚಳ್ಳಕೆರೆ ರಸ್ತೆಯ ಎಸ್.ಜಿ.ಕಲ್ಯಾಣ ಮಂಟಪದಲ್ಲಿ “ಚಿತ್ರದುರ್ಗ ಜಿಲ್ಲೆಯ ವಿವಿಧ ವರ್ಗಗಳ ಅಸಂಘಟಿತ ಕಾರ್ಮಿಕರಿಗೆ ಸ್ಮಾರ್ಟ್ ಕಾರ್ಡ್ ವಿತರಣೆ ಹಾಗೂ ವಿವಿಧ ಯೋಜನೆಗಳ ಕುರಿತು ಅರಿವು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಘನ ಉಪಸ್ಥಿತಿವಹಿಸುವರು. ಕಾರ್ಮಿಕ ಸಚಿವ ಸಂತೋಷ ಎಸ್.ಲಾಡ್ ಉದ್ಘಾಟನೆ ನೆರವೇರಿಸುವರು.
ಚಿತ್ರದುರ್ಗ ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ಅವರು ಅಧ್ಯಕ್ಷತೆ ವಹಿಸುವರು.

ಲೋಕಸಭಾ ಸದಸ್ಯ ಗೋವಿಂದ ಎಂ.ಕಾರಜೋಳ ಅವರು ಗೌರವ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮುರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ, ಕರ್ನಾಟಕ ದ್ರಾಕ್ಷರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೀಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಎಂ.ಕೆ.ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಬಿ.ಎನ್.ಸುಮಿತಾ ರಾಘವೇಂದ್ರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಸೇರಿದಂತೆ ಅಧಿಕಾರಿಗಳು, ಚಿತ್ರದುರ್ಗ ಜಿಲ್ಲೆಯ ಎಲ್ಲ ನಗರ ಹಾಗೂ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಸದಸ್ಯರು, ಕಾರ್ಮಿಕ ಸಂಘ, ಸಂಸ್ಥೆಗಳ ಪದಾಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment