ಸುದ್ದಿಒನ್, ಚಿತ್ರದುರ್ಗ, ಡಿಸೆಂಬರ್.: ನಗರದ ವಿದ್ಯಾವಿಕಾಸ ಶಾಲೆಯ ಶ್ರೀಮತಿ ಜ್ಯೋತಿ ಹೆಚ್.ಪಿ ಇವರ ಸಂಗೀತ ಕ್ಷೇತ್ರದ ಸಾಧನೆಗೆ “ಶರಣ ಶ್ರೀ” ಪ್ರಶಸ್ತಿ ಲಭಿಸಿದೆ.
ಕಲಬುರ್ಗಿಯ ಬಾಪೂಜಿಗೌಡ ದರ್ಶನಪುರ ರಂಗಮಂದಿರದಲ್ಲಿ ಡಿಸೆಂಬರ್ 03 ರಂದು ನಡೆದ ಕನ್ನಡ ನುಡಿಮುತ್ತು ಸಾಹಿತ್ಯ ವೇದಿಕೆ ವತಿಯಿಂದ “ಶರಣರ ನಾಡಿನಲ್ಲಿ ಸಾಹಿತ್ಯ ಮತ್ತು ಸಾಂಸ್ಕøತಿಕ ಸಂಭ್ರಮ – 2023” ಕಾರ್ಯಕ್ರಮದಲ್ಲಿ ಜ್ಯೋತಿ ಅವರಿಗೆ ಶರಣಶ್ರೀ ಪ್ರಶಸ್ತಿ ಪ್ರದಾನ ಮಾಡಲಾಯಿತು.
ಈ ಕಾರ್ಯಕ್ರಮದಲ್ಲಿ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ, ಸಾಂಸ್ಕøತಿಕ, ಜಾನಪದ ಕೃಷಿ ಹಾಗೂ ಸಾಮಾಜಿಕ ಕ್ಷೇತ್ರಗಳಲ್ಲಿ ಸಾಧನೆಗೈದ ಹಲವು ಸಾಧಕರಿಗೆ ಗೌರವ ಸಮರ್ಪಣೆ ಹಾಗೂ ಪ್ರಶಸ್ತಿ ಪ್ರಧಾನ ಮಾಡಲಾಯಿತು.
ಶ್ರೀಮತಿ ಜ್ಯೋತಿ ಅವರ ಸಾಧನೆಗೆ ಮತ್ತು ಈ ಪ್ರಶಸ್ತಿ ಲಭಿಸಿದ ಹಿನ್ನೆಲೆಯಲ್ಲಿ ಸಂಸ್ಥೆಯ ಕಾರ್ಯದರ್ಶಿಗಳಾದ ಬಿ.ವಿಜಯ ಕುಮಾರ್, ನಿರ್ದೇಶಕರಾದ ಶ್ರೀಮತಿ ಸುನಿತಾ ವಿಜಯ ಕುಮಾರ್,ಎಸ್.ಎಂ.ಪೃಥ್ವೀಶ್, ಶಾಲೆಯ ಆಡಳಿತಾಧಿಕಾರಿ ಡಾ|| ಕೆ.ಎನ್.ಸ್ವಾಮಿ ಮತ್ತು ಮುಖ್ಯೋಪಾಧ್ಯಾಯರಾದ ಸಿ.ಡಿ.ಸಂಪತ್ ಕುಮಾರ್, ಐ.ಸಿ.ಎಸ್.ಸಿ.ವಿಭಾಗದ ಪ್ರಾಂಶುಪಾಲರಾದ ಶ್ರೀ ಪಿ. ಬಸವರಾಜಯ್ಯನವರು ಹಾಗೂ ಸಂಸ್ಥೆಯ ಬೋಧಕ / ಬೋಧಕೇತರ ವರ್ಗದವರು ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















