ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 18 : ಒಳ ಮೀಸಲಾತಿ ಜಾರಿಗೊಳಿಸುವಲ್ಲಿ ವಿಫಲವಾಗಿರುವ ರಾಜ್ಯ ಸರ್ಕಾರದ ವಿರುದ್ದ ಸಾಮಾಜಿಕ ಸಂಘರ್ಷ ಸಮಿತಿಯಿಂದ ಒನಕ್ಕೆ ಓಬವ್ವ ವೃತ್ತದ ಸಮೀಪ ಮಂಗಳವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತದ ಮೂಲಕ ನಾಗಮೋಹನ್‍ದಾಸ್‍ರವರಿಗೆ ಮನವಿ ಸಲ್ಲಿಸಲಾಯಿತು.
ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕøತಿಕ ಸಂಘದ ಅಧ್ಯಕ್ಷ ಪ್ರೊ.ಸಿ.ಕೆ.ಮಹೇಶ್ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡುತ್ತ ನ್ಯಾಯಮೂರ್ತಿ ನಾಗಮೋಹನ್‍ದಾಸ್ ಅವಧಿ ಮೀರಿದ್ದರೂ ಒಳ ಮೀಸಲಾತಿ ಬಗ್ಗೆ ಸಂಗ್ರಹಿಸಿರುವ ವರದಿ ಇನ್ನು ಸಲ್ಲಿಕೆಯಾಗದಿರುವುದರಿಂದ ಮಾದಿಗರಿಗೆ ದೊಡ್ಡ ಪೆಟ್ಟು ನೀಡಿದೆ. ಇಷ್ಟೊತ್ತಿಗಾಗಲೆ ಸರ್ವೆ ಮುಗಿಸಬಹುದಿತ್ತು. 30 ದಿನಗಳ ಕಾಲ ಮಾದಿಗರಿಂದ ಅಹವಾಲುಗಳನ್ನು ಸ್ವೀಕರಿಸಿದ್ದಾರೆ. ನಾವುಗಳು 69 ಪುಟಗಳ ವರದಿ ಕೊಟ್ಟಿದ್ದೇವೆ. ಒಳ ಮೀಸಲಾತಿ ಹೋರಾಟದ ಜೊತೆಯಲ್ಲಿಯೇ ಕೆಲವು ಮಾದಿಗ ಸಂಘಟನೆಗಳು ಬಿಜೆಪಿ. ಆರ್‍ಎಸ್‍ಎಸ್. ಜೊತೆ ಹೋಗುತ್ತಿರುವುದು ಅಪಾಯಕಾರಿ. ಇದರಿಂದ ಮುಂದೊಂದು ದಿನ ಸಾಂಸ್ಕøತಿಕ ಬೇರುಗಳನ್ನು ಕಳೆದುಕೊಳ್ಳಬೇಕಾಗುತ್ತದೆಂದು ಎಚ್ಚರಿಸಿದರು.
ಒಲೆಯ ಜನಾಂಗ ನಮ್ಮಲ್ಲಿ ಪ್ರತಿಭೆಯಿರುವುದರಿಂದ ಮೀಸಲಾತಿಯನ್ನು ಹೆಚ್ಚು ಬಳಸಿಕೊಂಡಿದ್ದೇವೆ. ಅದೇ ಮಾದಿಗರು ಮೀಸಲಾತಿಯನ್ನು ಬಳಸಿಕೊಳ್ಳುತ್ತಿರುವುದು ಕಡಿಮೆ ಎಂದು ಹೇಳುತ್ತಿರುವುದು ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಸಿದ್ದಾಂತಕ್ಕೆ ವಿರುದ್ದವಾಗಿದೆ. ಒಳ ಮೀಸಲಾತಿ ವಿಳಂಭವಾಗಲು ಮಾದಿಗ ರಾಜಕಾರಣಿಗಳ ಜೊತೆ ಕೆಲವು ಮಾದಿಗ ಸಂಘಟನೆಗಳು ನಿಂತಿರುವುದೇ ಮೂಲ ಕಾರಣ ಎಂದು ಪ್ರೊ.ಸಿ.ಕೆ.ಮಹೇಶ್ ಆಪಾದಿಸಿದರು.
ಕರ್ನಾಟಕ ರಾಜ್ಯ ಮಾದಿಗರ ಸಾಂಸ್ಕøತಿಕ ಸಂಘದ ಪ್ರಧಾನ ಕಾರ್ಯದರ್ಶಿ ಮಲ್ಲಿಕಾರ್ಜುನ್ ಹಿರೇಹಳ್ಳಿ ಮಾತನಾಡಿ ಇಲ್ಲಿಯವರೆಗೂ ಆಡಳಿತ ನಡೆಸಿದ ಜೆಡಿಎಸ್. ಬಿಜೆಪಿ. ಈಗಿನ ಕಾಂಗ್ರೆಸ್ ಸರ್ಕಾರ ಕಳೆದ ಮೂವತ್ತು ವರ್ಷಗಳಿಂದಲೂ ಒಳ ಮೀಸಲಾತಿಯನ್ನು ಅನುಷ್ಟಾನಗೊಳಿಸದೆ ದಲಿತರನ್ನು ವಂಚಿಸುತ್ತಲೆ ಬರುತ್ತಿವೆ. ಅಧಿಕಾರದಲ್ಲಿದ್ದಾಗ ಒಳ ಮೀಸಲಾತಿಗೆ ಪೂರಕವಾಗಿ ಕೆಲಸ ಮಾಡದವರು ಅಧಿಕಾರ ಕಳೆದುಕೊಂಡಾಗ ಒಳ ಮೀಸಲಾತಿ ಪರ ಮಾತನಾಡುವುದು ಯಾವ ನ್ಯಾಯ? ರಾಜಕೀಯ ಪಕ್ಷಗಳನ್ನು ಓಲೈಕೆ ಮಾಡುವ ಹೋರಾಟಗಾರರನ್ನು, ಸಂಘಟನೆಗಳನ್ನು ತಿರಸ್ಕರಿಸಿ ಸ್ವತಂತ್ರವಾಗಿ ಒಳ ಮೀಸಲಾತಿಗೆ ಹೋರಾಡುವುದು ನಮ್ಮ ಗುರಿ ಎಂದು ಎಚ್ಚರಿಸಿದರು.
ಸಾಮಾಜಿಕ ಸಂಘರ್ಷ ಸಮಿತಿ ಗೌರವಾಧ್ಯಕ್ಷ ಡಿ.ದುರುಗೇಶಪ್ಪ, ಜಿಲ್ಲಾಧ್ಯಕ್ಷ ಕೆ.ಕುಮಾರ್, ಪ್ರಧಾನ ಕಾರ್ಯದರ್ಶಿ ಸಿ.ಎ.ಚಿಕ್ಕಣ್ಣ, ಉಪಾಧ್ಯಕ್ಷ ಎಂ.ಡಿ.ರವಿ, ಆರ್.ರಾಮಲಿಂಗಪ್ಪ, ಪ್ರಭಾಕರ್, ಸುಧಾಕರ್, ತಮ್ಮಣ್ಣ, ಹನುಮಂತರಾಯ, ರಾಜಣ್ಣ ಇನ್ನು ಅನೇಕರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
ಸುದ್ದಿಒನ್, ಹಿರಿಯೂರು, ಮಾರ್ಚ್. 19 : ಚಿತ್ರದುರ್ಗ ಜಿಲ್ಲಾ ಉಸ್ತುವಾರಿ ಸಚಿವ ಡಿ. ಸುಧಾಕರ್ ಬೆಂಬಲಿಗರಿಬ್ಬರು ಸೋಮವಾರ ರಾತ್ರಿ ಟೆಂಡರ್…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಬ್ಯಾಂಕ್ ಕಾಲೋನಿ ನಿವಾಸಿ ಜಿ.ಪಿ.ಉಮೇಶ್(63) ಬುಧವಾರ ಬೆಳಿಗ್ಗೆ 11-30 ಕ್ಕೆ ಹೃದಯಾಘಾತದಿಂದ ನಿಧನರಾದರು.…
ಚಿತ್ರದುರ್ಗ. ಮಾ. 19: ಸಾರ್ವಜನಿಕರೊಂದಿಗೆ ನೇರವಾಗಿ ವ್ಯವಹರಿಸುವ ಇಲಾಖೆಗಳಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅತಿ ಮುಖ್ಯವಾದದು.…
ವರದಿ ಮತ್ತು ಫೋಟೋ ಕೃಪೆ ಕೆ.ಎಂ. ಮುತ್ತುಸ್ವಾಮಿ ಕಣ್ಣನ್, ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಮಾರ್ಚ್.…
ಸುದ್ದಿಒನ್, ಹರಿಹರ, ಮಾರ್ಚ್. 19 : ಪವಿತ್ರ ರಂಜಾನ್ ತಿಂಗಳು ದಾನ, ಪರೋಪಕಾರಿ ಸೇವೆ ಮತ್ತು ಮಾನವೀಯತೆಯ ಸಮಯ. ಈ…
ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 19 : ಒಂಬತ್ತು ತಿಂಗಳು ಕಾಲ ಬಾಹ್ಯಾಕಾಶದಲ್ಲಿದ್ದು, ಕ್ಯಾಪ್ಸೂಲ್ ಮೂಲಕ ಭೂಮಿಯನ್ನು ತಲುಪಿದ ಗಗನಯಾನಿಗಳಾದ ಸುನಿತಾ…