ಬೆಂಗಳೂರು: ಸಮಗ್ರ ವಿದ್ಯುತ್ ಅಭಿವೃದ್ದಿ ಯೋಜನೆಯ (ಐಪಿಡಿಎಸ್) ಹಂತ-2 ರ ಅಡಿಯಲ್ಲಿ ಬೆಸ್ಕಾಂ ವ್ಯಾಪ್ತಿಯ ನಗರ ಪ್ರದೇಶದಲ್ಲಿ ಪ್ರಸ್ತುತ ಜಾರಿಯಲ್ಲಿರುವ ಐಪಿಡಿಎಸ್ ಐಟಿ ಅಪ್ಲಿಕೇಶನ್ ಅನ್ನು ಬೆಸ್ಕಾಂ ವ್ಯಾಪ್ತಿಯ 20 ಐಪಿಡಿಎಸ್ ಪಟ್ಟಣ ಪ್ರದೇಶಗಳಲ್ಲಿ ಅಳವಡಿಸಿಕೊಳ್ಳಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ಈ ಕೆಳಕಂಡ ಪಟ್ಟಣ ಪ್ರದೇಶಗಳಲ್ಲಿ ದಿನಾಂಕ 10.06.2026 ರಿಂದ 30.06.2026ರವರೆಗೆ ಬೆಸ್ಕಾಂನ ಆನ್ ಲೈನ್ ಸೇವೆಗಳು ಲಭ್ಯ ವಿರುವುದಿಲ್ಲ.
ಪ್ರಸ್ತುತ ಚಾಲ್ತಿಯಲ್ಲಿರುವ ಟಿಆರ್ಎಮ್ ಸಾಫ್ಟ್ವೇರ್ ಬದಲಿಗೆ ಐಪಿಡಿಎಸ್ ಐಟಿ ಅಪ್ಲಿಕೇಶನ್ ಅಳವಡಿಸಿಕೊಳ್ಳುವುದರಿಂದ ದತ್ತಾಂಶ ವರ್ಗಾವಣೆ ಮಾಡುವ ಸಲುವಾಗಿ 21 ದಿನಗಳ ಕಾಲ ಆನ್ ಲೈನ್ ಸೇವೆಗಳಾದ ಹೊಸ ಸಂಪರ್ಕ, ಹೆಸರು ವರ್ಗಾವಣೆ, ಲೋಡ್ ಹೆಚ್ಚಳ, ಬಿಲ್ ಪಾವತಿ, ಸೇರಿದಂತೆ ಆನ್ಲೈನ್ ಸೇವೆಗಳು ಸ್ಥಗಿತಗೊಳ್ಳಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.
ಗ್ರಾಹಕರು ಥರ್ಡ್ ಪಾರ್ಟಿ ಬಿಲ್ ಪಾವತಿ ವ್ಯವಸ್ಥೆಗಳಾದ ಗೂಗಲ್ ಪೇ, ಫೋನ್ ಪೇ ಮೂಲಕ ಬಿಲ್ ಪಾವತಿ ಮಾಡಲು ಅವಕಾಶವಿರುತ್ತದೆ.
ಆನ್ ಲೈನ್ ಸೇವೆ ಸ್ಥಗಿತಗೊಳ್ಳುವ ಪಟ್ಟಣಗಳು: ಬಾಗೇಪಲ್ಲಿ, ದೇವನಹಳ್ಳಿ, ಗುಡಿಬಂಡೆ, ಮಾಗಡಿ, ಮಾಲೂರು, ನೆಲಮಂಗಲ, ಶ್ರೀನಿವಾಸಪುರ, ವಿಜಯಪುರ, ಚನ್ನಗಿರಿ, ಚಿಕ್ಕನಾಯಕನಹಳ್ಳಿ, ಗುಬ್ಬಿ, ಹೊಳಲ್ಕೆರೆ, ಹೊನ್ನಾಳಿ, ಹೊಸದುರ್ಗ, ಜಗಳೂರು, ಕೊರಟಗೆರೆ, ಮಧುಗಿರಿ, ಮೊಳಕಾಲ್ಮೂರು, ಪಾವಗಡ ಹಾಗೂ ತುರುವೇಕೆರೆ,
ಐಪಿಡಿಎಸ್ ಪಟ್ಟಣ ಪ್ರದೇಶಗಳಿಗೆ ಹೊಸ ಐಟಿ ಅಪ್ಲಿಕೇಶನ್ಅನ್ನು ವಿಸ್ತರಿಸುವ ಸಲುವಾಗಿ ಮೆಲ್ಕಂಡ ಪಟ್ಟಣ ಪ್ರದೇಶಗಳ ಉಪ ವಿಭಾಗಗಳಲ್ಲಿ ಸದ್ಯ ಚಾಲ್ತಿಯಲ್ಲಿರುವ ಟಿಆರ್ಎಮ್ ಅಪ್ಲಿಕೇಶನ್ ಅನ್ನು ಸ್ಥಗಿತಗೊಳಿಸುವುದು ಅನಿವಾರ್ಯವಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಐಪಿಡಿಎಸ್ ಸಾಫ್ಟ್ ವೇರ್ ಅಳವಡಿಕೆ ಹಿನ್ನೆಲೆಯಲ್ಲಿಆನ್ಲೈನ್ ಸೇವೆ ಅಲಭ್ಯವಿರುವುದರಿಂದ ಈ ಮೇಲಿನ 20 ಪಟ್ಟಣ ಪ್ರದೇಶಗಳ ಗ್ರಾಹಕರು ಸಹಕರಿಸಬೇಕಾಗಿ ಬೆಸ್ಕಾಂ ಕೋರಿದೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















