ಇಂದು ಸೂರ್ಯ ಗ್ರಹಣ : ಭಾರತದಲ್ಲಿ ಗೋಚರವಿಲ್ಲ, ಆತಂಕ, ಭಯ ಬೇಡ : ಎಚ್.ಎಸ್.ಟಿ ಸ್ವಾಮಿ ಸ್ಪಷ್ಟನೆ

1 Min Read

ಸುದ್ದಿಒನ್, ಚಿತ್ರದುರ್ಗ,ಅಕ್ಟೋಬರ್.14 : ಇಂದು (ಅಕ್ಟೋಬರ್ 14ರ ಶನಿವಾರ) ಸಂಭವಿಸಲಿರುವ ಸೂರ್ಯಗ್ರಹಣವು ಭಾರತದಲ್ಲಿ ಗೋಚರಿಸುವುದಿಲ್ಲವಾದ್ದರಿಂದ ಯಾವುದೇ ರೀತಿಯ ಗೊಂದಲ ಬೇಡ ಎಂದು ಹವ್ಯಾಸಿ ಖಗೋಳ ವೀಕ್ಷಕ ಎಚ್.ಎಸ್.ಟಿ. ಸ್ವಾಮಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಸೂರ್ಯಗ್ರಹಣ ಭಾರತದಲ್ಲಿ ಗೋಚರಿಸುವುದಿಲ್ಲ. ಇದು ಭಾರತದಲ್ಲಿ  ರಾತ್ರಿ 11.45 ರ ರಾತ್ರಿ ಉಂಟಾಗುವುದರಿಂದ ನಾವು ನೋಡಲು ಸಾಧ್ಯವೇ ಇಲ್ಲ. ಈ ಗ್ರಹಣವು ಪಾಶ್ಚಿಮಾತ್ಯ ರಾಷ್ಟ್ರಗಳಲ್ಲಿ ಅಂದರೆ, ಯುರೋಪ್ ಮತ್ತು ಅಮೆರಿಕಾ ಸಂಯುಕ್ತ ಸಂಸ್ಥಾನದ ಕೆಲವು ರಾಷ್ಟ್ರಗಳಲ್ಲಿ ಮಾತ್ರ ಗೋಚರಿಸುತ್ತದೆ. ಇದರಿಂದ ಆ ರಾಷ್ಟ್ರಗಳಲ್ಲಿ ಮತ್ತು  ಜಗತ್ತಿನ ಯಾವುದೇ ದೇಶಗಳಲ್ಲಿ ಯಾವುದೇ ರೀತಿಯ ಸಾವು ನೋವುಗಳಾಗಲೀ, ತೊಂದರೆಗಳು ಉಂಟಾಗುವುದಿಲ್ಲ. ಈ ಸೂರ್ಯಗ್ರಹಣದ ಬಗ್ಗೆ ಜನರು ಆತಂಕ, ಭಯ ಪಡುವ ಅಗತ್ಯವಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *