ಮಾಹಿತಿ ಮತ್ತು ಫೋಟೋ ಕೃಪೆ
ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ
ಚಿತ್ರದುರ್ಗ, ಆ.4 : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯಲ್ಲಿ ವಾಹನ ಚಾಲಕರಾಗಿ ಸೇವೆ ಸಲ್ಲಿಸಿ ವಯೋನಿವೃತ್ತಿ ಹೊಂದಿ, ವಿಶ್ರಾಂತ ಜೀವನ ನೆಡೆಸುತ್ತಿದ್ದ ಎಸ್ ಸೋಮಶೇಖರಪ್ಪ(83) ಅವರು ನಗರದ ಕೆಳಗೋಟೆಯ ನಿವಾಸದಲ್ಲಿ ಆಗಸ್ಟ್ 3 ರಂದು ರಾತ್ರಿ ನಿಧನರಾಗಿದ್ದಾರೆ.
ಮೃತರು ಪತ್ನಿ, ಪುತ್ರಿ, ಪುತ್ರ ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಚಿತ್ರದುರ್ಗ ವಾರ್ತಾಧಿಕಾರಿ ತುಕಾರಾಂರಾವ್ ಹಾಗೂ ದಾವಣಗೆರೆ ವಾರ್ತಾಧಿಕಾರಿ ಧನಂಜಯಪ್ಪ ಅವರು ಮೃತರ ಮನೆಗೆ ತೆರಳಿ, ಕುಟುಂಬಕ್ಕೆ ಸಾಂತ್ವನ ಹೇಳಿ ಪಾರ್ಥೀವ ಶರೀರಕ್ಕೆ ಪುಷ್ಪನಮನ ಅರ್ಪಿಸಿ, ಅಂತಿಮ ನಮನ ಸಲ್ಲಿಸಿದರು. ಈ ಸಂದರ್ಭದಲ್ಲಿ ಕಚೇರಿ ಸಿಬ್ಬಂದಿ ಪಾಲ್ಗೊಂಡಿದ್ದರು. ನಗರದ ಜೋಗಿಮಟ್ಟಿ ರಸ್ತೆಯ ರುದ್ರಭೂಮಿಯಲ್ಲಿ ಮೃತರ ಅಂತ್ಯಕ್ರಿಯೆ ಇಂದು (ಶುಕ್ರವಾರ) ನೆರವೇರಿತು.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










