ಬೆಂಗಳೂರು: ಸಚಿವ ಈಶ್ವರಪ್ಪ ವಿರುದ್ಧ ಪರ್ಸೆಂಟೇಜ್ ಆರೋಪ ಕೇಳಿ ಬಂದಿದೆ. ಈ ಸಂಬಂಧ ಗುತ್ತಿಗೆದಾರ ಸಂತೋಷ್ ಪಾಟೀಲ್ ಪ್ರಧಾನಿ ಮೋದಿಗೆ ಪತ್ರವನ್ನು ಬರೆದಿದ್ದಾರೆ. ಇದೀಗ ಈ ಪರ್ಸೆಂಟೇಜ್ ವಿಚಾರ ವಿಧಾನಸಭೆಯಲ್ಲೂ ಚರ್ಚೆಗೆ ಗ್ರಾಸವಾಗಿದೆ. ಕಾಂಗ್ರೆಸ್ ನಾಯಕರು ಮತ್ತು ಮಾಧುಸ್ವಾಮಿ ನಡುವೆ ಮಾತಿನ ಚಕಮಕಿ ನಡೆದಿದೆ.
ವಿಧಾನಸಭೆಯಲ್ಲಿ ಪರ್ಸೆಂಟೇಜ್ ಆರೋಪದ ಬಗ್ಗೆ ಚರ್ಚೆ ಶುರುವಾಗಿದೆ. ಯಾರು 40 ಪರ್ಸಂಟೇಜ್ ಪಡೆದಿದ್ದಾರೆ ಸ್ಪಷ್ಟವಾಗಿ ಹೇಳಲಿ. ಎಲ್ಲೋ ವಿಚಾರ ಬಂದ ಕೂಡಲೇ ಉತ್ತರಿಸಲು ಆಗಲ್ಲ. ಯಾವ ಸಚಿವರು ಪರ್ಸಂಟೇಜ್ ಪಡೆದಿದ್ದಾರೆಂದು ಹೇಳಲಿ ಎಂದು ಕಾನೂನು ಸಚಿವ ಮಾಧುಸ್ವಾಮಿ ಗರಂ ಆಗಿದ್ದಾರೆ.
ಸಚಿವ ಮಾಧುಸ್ವಾಮಿ ಹೇಳಿಕೆಗೆ ಕಾಂಗ್ರೆಸ್ ನಾಯಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಪ್ರಕರಣವನ್ನ ಹೈಕೋರ್ಟ್ ನ್ಯಾಯಾಧೀಶರ ನೇತೃತ್ವದಲ್ಲಿ ತನಿಖೆ ಮಾಡಿಸಿ. ಪರ್ಸಂಟೇಜ್ ವಿಚಾರವಾಗಿ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದಾರೆ. ಈ ಬಗ್ಗೆ ತನಿಖೆಯಾಗಬೇಕು ಎಂದು ಕಾಂಗ್ರೆಸ್ ನಾಯಕರು ಒತ್ತಾಯಿಸಿದ್ದಾರೆ.
ರಾಜಕೀಯ ಪ್ರಚಾರಕ್ಕೆ ಸದನ ಬಳಸಿಕೊಳ್ಳುತ್ತಾ ಇದ್ದೀರಾ ಎಂದು ಮಾಧುಸ್ವಾಮಿ ಕಿಡಿಕಾರಿದ್ದಾರೆ. ಅವನ್ಯಾರೋ ಪತ್ರ ಬರೆದರೆ ಅದಕ್ಕೆ ತಲೆ ಕೆಡಿಸಿಕೊಳ್ಳಲ್ಲ ಎಂದು ಮಾಧುಸ್ವಾಮಿ ಖಡಕ್ ಆಗಿ ಉತ್ತರಿಸಿದ್ದಾರೆ.