Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ತಂದೆ- ತಾಯಿಯನ್ನು ಚಾಕುವಿನಿಂದ ಇರಿದು ಕೊಂದ ಮಗ! 

---Advertisement---

ಮಗನೇ ತನ್ನ ತಂದೆ, ತಾಯಿಯನ್ನು ಭೀಕರವಾಗಿ ಕೊಲೆಗೈದ ಘಟನೆ ಬೆಂಗಳೂರಿನಲ್ಲಿ  ನಡೆದಿದೆ. ಹೆಚ್‌ಎಎಲ್‌ನ  ವಿಜ್ಞಾನ ನಗರದ ಅಪಾರ್ಟ್‌ಮೆಂಟ್‌ನಲ್ಲಿ ಈ ಘಟನೆ ನಡೆದಿದೆ. ಚಾಕುವಿನಿಂದ ತಂದೆ ತಾಯಿ ಇಬ್ಬರಿಗೂ ಇರಿದ ಮಗ, ಬಳಿಕ ಇಬ್ಬರನ್ನು ಖಾಸಗಿ ಆಸ್ಪತ್ರೆಗೆ ದಾಖಲು ಮಾಡಿದ್ದಾನೆ. ಆದರೆ ಚಿಕಿತ್ಸೆ ಫಲಿಸದೇ ಇಬ್ಬರೂ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಬಳಿಕ ಆಸ್ಪತ್ರೆ ವೈದ್ಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.

ನವೀನ್ ಚಂದ್ರ ಭಟ್(60) ಹಾಗೂ ಅವರ ಪತ್ನಿ, ಶ್ಯಾಮಲಾ ಭಟ್(55) ಇವರನ್ನು ಸ್ವಂತ ಮಗ ರೋಹನ್ ಭಟ್(33)  ಹತ್ಯೆ ಮಾಡಿದ್ದಾನೆ. ಕೌಟುಂಬಿಕ ಕಲಹದಿಂದಾಗಿ ರೋಹನ್ ಭಟ್ ಎಂಬಾತ ತನ್ನ ತಂದೆ ನವೀನ್ ಚಂದ್ರ ಭಟ್ ಹಾಗೂ ತಾಯಿ ಶ್ಯಾಮಲಾ ಭಟ್ ಎಂಬುವರನ್ನು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಬೆಳಗ್ಗೆ 7.30ರ ಸುಮಾರಿಗೆ ಘಟನೆ ನಡೆದಿದ್ದು, ಮಗ ರೋಷನ್ ಭಟ್ ತಂದೆ, ತಾಯಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿರೋದಾಗಿ ತಿಳಿದು ಬಂದಿದೆ.

ಕೊಲೆಯಾದ ನವೀನ್ ಚಂದ್ರ ಭಟ್ ನಿವೃತ್ತ ನೇವಿ ಕ್ಯಾಪ್ಟನ್ ಆಗಿದ್ದರು. ಅವರ ಪತ್ನಿ ಶ್ಯಾಮಲಾ ಭಟ್ ದಂತ ವೈದ್ಯೆಯಾಗಿದ್ದರು. ಅವರಿಗೆ ಪುತ್ರ ರೋಷನ್ ಭಟ್ ಅಲ್ಲದೇ, ಮಗಳೂ ಇದ್ದು ಅವರು ಸದ್ಯ ಅಮೆರಿಕದಲ್ಲಿ ಇದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಇದೀಗ ಪ್ರಕರಣ ದಾಖಲಿಸಿಕೊಂಡಿರುವ ಹೆಚ್‌ಎಎಲ್ ಠಾಣೆ ಪೊಲೀಸರು ಆರೋಪಿ ಪುತ್ರ ರಾಕೇಶ್‌ ಭಟ್‌ನನ್ನು ಬಂಧಿಸಿ ವಿಚಾರಣೆ ಕೈಗೊಂಡಿದ್ದಾರೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now