ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಆಸ್ಪತ್ರೆಗೆ ದಾಖಲು

ನವದೆಹಲಿ : ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ (75) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದನ್ನು ಅಧಿಕೃತವಾಗಿ ಕಾಂಗ್ರೆಸ್ ವಕ್ತಾರ ರಣದೀಪ್ ಸಿಂಗ್ ಸುರ್ಜೇವಾಲಾ ಖಚಿತಪಡಿಸಿದ್ದಾರೆ. ಈ ನಡುವೆ ಅವರು ಕರೋನಾದಿಂದ ಬಳಲುತ್ತಿದ್ದಾರೆ.

ಕರೋನಾ ಸಂಬಂಧಿತ ಸಮಸ್ಯೆಗಳಿಂದ ಸೋನಿಯಾ ಅವರನ್ನು ಭಾನುವಾರ ದೆಹಲಿ ಗಂಗಾರಾಮ್ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ. ಸದ್ಯ ಆಕೆಯ ಸ್ಥಿತಿ ಸ್ಥಿರವಾಗಿದ್ದು, ನಿಗಾ ಘಟಕದಲ್ಲಿ ಇರಿಸಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಅವರು ಶೀಘ್ರ ಗುಣಮುಖರಾಗಲಿ ಎಂದು ಕಾಂಗ್ರೆಸ್ ಸೇರಿದಂತೆ ಹಲವು ರಾಜಕೀಯ ಪಕ್ಷದ ಪ್ರತಿನಿಧಿಗಳು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡುತ್ತಿದ್ದಾರೆ.

Leave a Reply

Your email address will not be published. Required fields are marked *

error: Content is protected !!