ನವದೆಹಲಿ: ಜೂನ್ 12 ರಂದು ಗಂಗಾರಾಮ್ ಆಸ್ಪತ್ರೆಗೆ ದಾಖಲಾಗಿದ್ದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರು ಫಂಗಲ್ ಸೋಂಕಿಗೆ ಒಳಗಾಗಿದ್ದಾರೆ. ದೆಹಲಿಯ ಗಂಗಾ ರಾಮ್ ಆಸ್ಪತ್ರೆಗೆ ದಾಖಲಾದ ನಂತರ ಸೋನಿಯಾ ಗಾಂಧಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದಾರೆ ಮತ್ತು ವೈದ್ಯರು ಅವರ ಆರೋಗ್ಯ ಸ್ಥಿತಿಯನ್ನು ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ ಎಂದು ಕಾಂಗ್ರೆಸ್ ಪಕ್ಷವು ತಿಳಿಸಿದೆ.
ಇತ್ತೀಚೆಗೆ ಕೋವಿಡ್ ಸೋಂಕಿನಿಂದಾಗಿ ಮೂಗಿನಿಂದ ರಕ್ತಸ್ರಾವವಾದ ನಂತರ ಸೋನಿಯಾ ಗಾಂಧಿ ಅವರನ್ನು ಜೂನ್ 12 ರಂದು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅನಾರೋಗ್ಯದಿಂದ ಬಳಲುತ್ತಿರುವ ತಮ್ಮ ತಾಯಿಯನ್ನು ಭೇಟಿಯಾಗಲು ಅವರ ಪುತ್ರ ರಾಹುಲ್ ಗಾಂಧಿ ಶುಕ್ರವಾರ ಗಂಗಾರಾಮ್ ಆಸ್ಪತ್ರೆಗೆ ಬಂದಿದ್ದಾರೆ.
ಮನಿ ಲಾಂಡರಿಂಗ್ ಪ್ರಕರಣದಲ್ಲಿ ಸೋನಿಯಾ ಗಾಂಧಿ ಅವರಿಗೆ ಜಾರಿ ನಿರ್ದೇಶನಾಲಯ ಜೂನ್ 23 ರಂದು ಸಮನ್ಸ್ ನೀಡಿದೆ. ಆಕೆಯ ಪುತ್ರ ಮತ್ತು ಮಾಜಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರನ್ನು ಈಗಾಗಲೇ ತನಿಖಾ ಸಂಸ್ಥೆಯು ಪ್ರಶ್ನಿಸುತ್ತಿದೆ ಮತ್ತು ಇಡಿ ಮುಂದೆ ಅವರ ಮುಂದಿನ ವಿಚಾರಣೆಯನ್ನು ಸೋಮವಾರ, ಜೂನ್ 20 ರಂದು ನಿಗದಿಪಡಿಸಲಾಗಿದೆ. ವಯನಾಡ್ ಸಂಸದ ರಾಹುಲ್ ಗಾಂಧಿಯನ್ನು ಇಡಿ ಸತತ ಮೂರು ದಿನಗಳ ಕಾಲ ಪ್ರಶ್ನಿಸಿದ್ದು, ದೇಶಾದ್ಯಂತ ಕಾಂಗ್ರೆಸ್ ನಾಯಕರ ಪ್ರತಿಭಟನೆಗೆ ಕಾರಣವಾಯಿತು. ತಮ್ಮ ವಿಚಾರಣೆಯನ್ನು ಸೋಮವಾರಕ್ಕೆ ಮುಂದೂಡುವಂತೆ ಕಾಂಗ್ರೆಸ್ ಸಂಸದರು ಇಡಿಗೆ ಪತ್ರ ಬರೆದಿದ್ದರು. ಅನಾರೋಗ್ಯದಿಂದ ಬಳಲುತ್ತಿರುವ ತನ್ನ ತಾಯಿಯನ್ನು ನೋಡಿಕೊಳ್ಳಲು ಅವರು ಆಸ್ಪತ್ರೆಯಲ್ಲಿ ಉಳಿಯಲು ನಿರ್ಧರಿಸಿದರಂತೆ.