ಮೈಸೂರು: ರಾಹುಲ್ ಗಾಂಧಿ ಜೊತೆಗೆ ಚರ್ಚೆ ನಡೆಸಲು ಸೋನಿಯಾ ಗಾಂಧಿ ರಾಜ್ಯಕ್ಕೆ ಆಗಮಿಸಿದ್ದರು. ಹವಮಾನ ವೈಪರೀತ್ಯದಿಂದ ಕೊಡಗಿನ ಪ್ರಯಾಣ ಕ್ಯಾನ್ಸಲ್ ಆಗಿತ್ತು. ಹೀಗಾಗಿ ಮೈಸೂರಿನ ಕಬಿನಿಯಲ್ಲೇ ವಾಸ್ತವ್ಯ ಹೂಡಿದ್ದರು. ಇಂದು ನಾಡಹಬ್ಬ ದಸರಾ ಸಂಭ್ರಮ ಎಲ್ಲೆಡೆ ಮನೆ ಮಾಡಿದೆ. ಇಂದು ಸೋನಿಯಾ ಗಾಂಧಿ ಕೂಡ ದೇವಸ್ಥಾನಕ್ಕೆ ತೆರಳಿ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಹೆಚ್ ಡಿ ಕೋಟೆ ತಾಲೂಕಿನಲ್ಲಿರುವ ಭೀಮನಕೊಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ, ಮಹದೇಶ್ವರನ ದರ್ಶನ ಪಡೆದಿದ್ದಾರೆ. ಕಬಿನಿ ದೇವಸ್ಥಾನದ ಹಿನ್ನೀರಿನಲ್ಲಿರುವ ಮಹದೇಶ್ವರನಿಗೆ 500 ವರ್ಷಗಳ ಇತಿಹಾಸವಿದೆ. ಇಲ್ಲಿ ದೇವರ ಮೂರ್ತಿ ಉದ್ಭವವಾಗಿರುವ ನಂಬಿಕೆ ಇದೆ. ಇಂಥ ಐತಿಹಾಸಿಕ ದೇವಸ್ಥಾನಕ್ಕೆ ಭೇಟಿ ನೀಡಿದ ಸೋನಿಯಾ ಗಾಂಧಿ ಅವರಿಗೆ ಅಲ್ಲಿನ ಸ್ಥಳೀಯರೊಬ್ಬರು ದೇವಸ್ಥಾನದ ಪ್ರತೀತಿ ಬಗ್ಗೆ ವಿವರಿಸಿದ್ದಾರೆ.
ಶುಕ್ರವಾರದಿಂದ ಮಂಡ್ಯ ಜಿಲ್ಲೆಯಲ್ಲಿ ಪಾದಯಾತ್ರೆಯಲ್ಲಿ ನಡೆಸಲಾಗುತ್ತದೆ. ಈ ಪಾದಯಾತ್ರೆಯಲ್ಲಿ ಸೋನಿಯಾಗಾಂಧಿ ಕೂಡ ಪಾಲ್ಗೊಳ್ಳಲಿದ್ದಾರೆ.