ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ರಾಜೀನಾಮೆ….? ನಾಳೆ ಅಧಿಕೃತ ಪ್ರಕಟಣೆ ಸಾಧ್ಯತೆ…!

ಸುದ್ದಿಒನ್ ಪೊಲಿಟಿಕಲ್ ಡೆಸ್ಕ್

ನವದೆಹಲಿ : ಕಾಂಗ್ರೆಸ್ ಸತತ ಸೋಲುಗಳಿಂದ ತತ್ತರಿಸಿ ಹೋಗಿದೆ. ಇತ್ತೀಚೆಗಷ್ಟೇ ನಡೆದ ಐದು ರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋತಿದ್ದು ತೀವ್ರ ನಿರಾಸೆ ಅನುಭವಿಸಿದೆ.

ನಾಳೆ ನಡೆಯಲಿರುವ ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯಲ್ಲಿ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ಅವರ ಪುತ್ರ ರಾಹುಲ್ ಗಾಂಧಿ ಮತ್ತು ಪುತ್ರಿ ಪ್ರಿಯಾಂಕಾ ಗಾಂಧಿ ವಾದ್ರಾ ರಾಜೀನಾಮೆ ನೀಡುವ ನಿರೀಕ್ಷೆಯಿದೆ ಎಂದು ಖಾಸಗಿ ವಾಹಿನಿ ವರದಿ ಮಾಡಿದೆ.

ಆದಾಗ್ಯೂ, ಸೋನಿಯಾ ಗಾಂಧಿ ಮತ್ತು ಅವರ ಮಗ ರಾಹುಲ್ ಗಾಂಧಿ ಹುದ್ದೆ ತೊರೆಯಲು ಮುಂದಾಗುತ್ತಿರುವುದು ಇದೇ ಮೊದಲಲ್ಲ.

ಐದು ರಾಜ್ಯಗಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಕುರಿತು ಚರ್ಚಿಸಲು ಸಿಡಬ್ಲ್ಯೂಸಿ ಸಭೆ ನಾಳೆ (ಭಾನುವಾರ) ಸಂಜೆ 4 ಗಂಟೆಗೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ನಡೆಯಲಿದ್ದು, ಪಕ್ಷದ ಪ್ರಧಾನ ಕಚೇರಿಯಲ್ಲಿ ಪಕ್ಷದ ಉನ್ನತ ನಿರ್ಧಾರ ತೆಗೆದುಕೊಳ್ಳುವ ಮಂಡಳಿಯ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ.

ಐದು ರಾಜ್ಯಗಳ ಚುನಾವಣೆಯ ಹೀನಾಯ ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲಿದ್ದಾರೆ ಎಂದು ಮಾಹಿತಿ. ಸಿಡಬ್ಲ್ಯುಸಿ ಸಭೆಯಲ್ಲಿ ಅವರು ತಮ್ಮ ರಾಜೀನಾಮೆಯನ್ನು ಬಹಿರಂಗಪಡಿಸುವ ಸಾಧ್ಯತೆಯಿದೆ ಎಂದು ಮೂಲಗಳು ತಿಳಿಸಿವೆ.

ಈ ಹಿನ್ನೆಲೆಯಲ್ಲಿ ಸಿಡಬ್ಲ್ಯುಸಿ ನಾಯಕರು ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಸಭೆ ನಡೆಸಲಿದ್ದು, ಅಧಿಕಾರ ಉಳಿಸಿಕೊಳ್ಳುವ ಇನ್ನೆರಡು ರಾಜ್ಯಗಳಲ್ಲಿ ಮುಂದಿನ ಕಾರ್ಯತಂತ್ರಗಳ ಕುರಿತು ಚರ್ಚಿಸಲಿದ್ದಾರೆ.

ವರ್ಚುವಲ್ CWC ಸಭೆಯಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ದಿಗ್ವಿಜಯ್ ಸಿಂಗ್, ಎಕೆ ಆಂಟನಿ ಮತ್ತು ಇತರ ನಾಯಕರು ಭಾಗವಹಿಸಲಿದ್ದಾರೆ. CWC ಯಲ್ಲಿನ G23 ನಾಯಕರು ಸಭೆಯಲ್ಲಿ ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸುವ ನಿರೀಕ್ಷೆಯಿದೆ.

ಈಗಾಗಲೇ ಈ ಕುರಿತು ಕಾಂಗ್ರೆಸ್ ನ ಹಿರಿಯ ನಾಯಕರಾದ ಕಪಿಲ್ ಸಿಬಲ್ ಹಾಗೂ ಮನೀಶ್ ತಿವಾರಿ ಯವರು ದೆಹಲಿಯಲ್ಲಿರುವ ಗುಲಾಂ ನಬಿ ಆಜಾದ್ ನಿವಾಸದಲ್ಲಿ ಮಾತುಕತೆ ನಡೆಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *