ಪಂಚರಾಜ್ಯಗಳ ಸೋಲಿನ ಹೊಣೆ ಅಧ್ಯಕ್ಷರ ಮೇಲೆ : ನೈತಿಕ ಹೊಣೆ ಹೊತ್ತು ರಾಜೀನಾಮೆ ಕೊಡ್ತಾರಾ..?

ನವದೆಹಲಿ: ಪಂಚರಾಜ್ಯಗಳ ಚುನಾವಣೆಯಲ್ಲಿ ಕಾಂಗ್ರೆಸ್ ಹೀನಾಯವಾಗಿ ಸೋಲು ಅನುಭವಿಸಿದೆ. ಇದೀಗ ಈ ಸೋಲಿನ ಬಿಸಿ ಪಂಚರಾಜ್ಯಗಳ ಕಾಂಗ್ರೆಸ್ ಅಧ್ಯಕ್ಷರ ತಲೆ ಕೆಡಿಸಿದೆ. ಸೋಲಿನ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಲು ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ಸೂಚಿಸಿದ್ದಾರೆ.

ಈ ಸಂಬಂಧ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸಚಿವ ಸಂದೀಪ್ ಸುರ್ಜೆವಾಲ ಈ ಬಗ್ಗೆ ಮಾತನಾಡಿದ್ದಾರೆ. ಸೋನಿಯಾ ಗಾಂಧಿಯವರು ಪಂಚರಾಜ್ಯಗಳ ಅಧ್ಯಕ್ಷರ ರಾಜೀನಾಮೆ ಕೇಳಿದ್ದಾರೆ.

ಪಂಜಾಬ್, ಉತ್ತರಪ್ರದೇಶ, ಗೋವಾ, ಉತ್ತರಾಖಂಡ, ಮಣಿಪುರದಲ್ಲಿ ಕಾಂಗ್ರೆಸ್ ಸೋತಿದೆ. ಈ ಹಿನ್ನೆಲೆ ಐದು ರಾಜ್ಯಗಳ ಅಧ್ಯಕ್ಷರ ರಾಜೀನಾಮೆಯನ್ನ ಸೋನಿಯಾಗಾಂಧಿಯವರು ಕೇಳಿದ್ದಾರೆ. ಈ ಹಿನ್ನೆಲೆ ಆದಷ್ಟು ಬೇಗ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದ್ದಾರೆ.

Share This Article
Leave a Comment

Leave a Reply

Your email address will not be published. Required fields are marked *