ಬೆಂಗಳೂರು, ಮೇ. 15 : ಆಗ್ನೇಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಗೆ ಸ್ವತಂತ್ರ್ಯ ಅಭ್ಯರ್ಥಿಯಾಗಿ ವಿನೋದ ಶಿವರಾಜ್ ಅವರು ಅಪಾರ ಬೆಂಬಲಿಗರೊಂದಿಗೆ ಶಾಂತಿನಗರದ ಪ್ರಾದೇಶಿಕ ಆಯುಕ್ತರ ಕಛೇರಿಗೆ ತೆರಳಿ ಬೆಳಿಗ್ಗೆ 11:30ಕ್ಕೆ ನಾಮಪತ್ರ ಸಲ್ಲಿಸಿದರು.

“ದೇಶದ ಭವಿಷ್ಯವು ತರಗತಿ ಕೊನೆಗಳಲ್ಲಿ ನಿರ್ಮಾಣವಾಗುತ್ತದೆ” ಎಂಬ ಎಂಬ ಮಾತಿನಂತೆ ದೇಶದ ಪ್ರಗತಿಯಲ್ಲಿ ಶಿಕ್ಷಕರ ಪಾತ್ರ ಅತಿ ಮಹತ್ವದ್ದಾಗಿದ್ದು, ಇಂತಹ ಶಿಕ್ಷಕರು ಅನೇಕ ಸಮಸ್ಯೆಗಳನ್ನು ಇಂದು ಎದುರಿಸುತ್ತಿದ್ದು ಅವುಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಹೊಸ ಬದಲಾವಣೆಗಳೊಂದಿಗೆ ಶಿಕ್ಷಣ ಮತ್ತು ಶಿಕ್ಷಕರ ಸಬಲೀಕರಣಕ್ಕಾಗಿ ಚುನಾವಣೆಗೆ ಸ್ಪರ್ಧಿಸಿದ್ದು ತಮ್ಮ ಅಮೂಲ್ಯವಾದ ಪ್ರಥಮ ಪ್ರಾಶಸ್ತ್ಯದ ಮತ ನೀಡುವಂತೆ ಮನವಿ ಮಾಡಿಕೊಂಡರು.


