Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಇಫ್ತಿಯಾರ್ ಕೂಟದಲ್ಲಿ ಭಾಗವಹಿಸಿ ಶುಭಕೋರಿದ ಎಸ್.ಪಿ. ರಂಜಿತ್‍ಕುಮಾರ್ ಬಂಡಾರು

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ. ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

 

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 15 : ಒಂದು ತಿಂಗಳ ಕಾಲ ಒಂದೊತ್ತು ಉಪವಾಸ ಆಚರಿಸಿ ಪರಮ ಪವಿತ್ರವಾದ ರಂಜಾನ್ ಹಬ್ಬದ ಇಫ್ತಿಯಾರ್ ಕೂಟದಲ್ಲಿ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್‍ಕುಮಾರ್ ಬಂಡಾರು ಭಾಗವಹಿಸಿದ್ದರು.

ಪ್ರಸನ್ನ ಟಾಕೀಸ್ ರಸ್ತೆಯಲ್ಲಿರುವ ಉಮರ್ ಸರ್ಕಲ್‍ನಲ್ಲಿ ಶುಕ್ರವಾರ ಸಂಜೆ ಇಫ್ತಿಯಾರ್ ಕೂಟದಲ್ಲಿ ಪಾಲ್ಗೊಂಡು ಸಮಸ್ತ ಮುಸ್ಲಿಂ ಬಾಂಧವರಿಗೆ ರಂಜಾನ್ ಹಬ್ಬದ ಶುಭಾಷಯ ಕೋರಿದ ಜಿಲ್ಲಾ ರಕ್ಷಣಾಧಿಕಾರಿ ಈ ತಿಂಗಳಲ್ಲಿ ಯುಗಾದಿ ಹಾಗೂ ರಂಜಾನ್ ಹಬ್ಬ ಜೊತೆಯಾಗಿ ಆಚರಿಸುತ್ತಿರುವುದರಿಂದ ಹಿಂದೂ-ಮುಸ್ಲಿಂರು ಪರಸ್ಪರ ಶಾಂತಿ ಹಾಗೂ ಸಹಬಾಳ್ವೆಯಿಂದ ಹಬ್ಬವನ್ನು ಆಚರಿಸುವಂತೆ ಕರೆ ನೀಡಿದರು.

ನಗರಸಭೆ ಮಾಜಿ ಅಧ್ಯಕ್ಷ ಮಹಮದ್ ಅಹಮದ್ ಪಾಷ, ಉಪ ವಿಭಾಗಾಧಿಕಾರಿ ಮೆಹಬೂಬ್ ಜಿಲಾನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ರವೀಂದ್ರ, ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ವಿಭಾಗದ ಅಧ್ಯಕ್ಷ ಸೈಯದ್ ಖುದ್ದೂಸ್, ನಗರಸಭೆ ಮಾಜಿ ಸದಸ್ಯ ಫಕೃದ್ದಿನ್, ನಗರ ಯುವ ಕಾಂಗ್ರೆಸ್‍ನ ಆಜಾಂ, ಜಮೀರ್, ಹಣ್ಣಿನ ವ್ಯಾಪಾರಿಗಳ ಸಂಘದ ಅಧ್ಯಕ್ಷ ಸಮೀವುಲ್ಲಾ, ರಫಿ, ಶಾರೂಖ್, ಸಾಧಿಕ್ ಸೇರಿದಂತೆ ಮುಸ್ಲಿಂ ಸಮಾಜದ ಅನೇಕ ಮುಖಂಡರುಗಳು ಈ ಸಂದರ್ಭದಲ್ಲಿ ಹಾಜರಿದ್ದರು.

 

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...