Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಮಾ.26 ರಂದು ಗುಬ್ಬಚ್ಚಿ ದಿನಾಚರಣೆ : ಪಕ್ಷಿಗಳಿಗಾಗಿ ಉಚಿತ ಮಣ್ಣಿನ ತಟ್ಟೆ ವಿವರಣಾ ಕಾರ್ಯಕ್ರಮ

Facebook
Twitter
Telegram
WhatsApp

 

ಚಿತ್ರದುರ್ಗ, (ಮಾ.23) : ಬಿರು ಬೇಸಿಗೆಯಲ್ಲಿ ಗುಟುಕು ನೀರು ದೊರೆಯದೇ, ಪರಿತಪಿಸಿ, ದಾಹದಿಂದ ಎಷ್ಟೋ ಪಕ್ಷಿಗಳು ಸಾವನ್ನಪ್ಪುತ್ತವೆ.  ಈ ಸುಡುವ ಬಿಸಿಲಿನಲ್ಲಿ ಪಕ್ಷಿಗಳ ದಾಹ ನೀಗಿಸಲು ಪ್ರತಿಯೊಬ್ಬರು ತಮ್ಮ ತಮ್ಮ ಮನೆಯ ಮುಂದೆ, ಬಾಲ್ಕನಿಯಲ್ಲಿ ಅಥವಾ ಮನೆಯ ಕಾಂಪೌಂಡ್ ಮೇಲೆ ಒಂದು ಮಣ್ಣಿನ ಪಾತ್ರೆ ಅಥವಾ ತಟ್ಟೆಯಲ್ಲಿ ನೀರನ್ನು ಇಟ್ಟು, ಅಸಹಾಯಕ ಪಕ್ಷಿಗಳಿಗೆ ನೀರುಣಿಸಿದರೆ ಹಲವಾರು ಪಕ್ಷಿಗಳ ಜೀವ ಉಳಿಸಿದ ಪುಣ್ಯ ಲಭಿಸುತ್ತದೆ.

ಇದೇ ನಿಟ್ಟಿನಲ್ಲಿ, ಸಮಾಜದಲ್ಲಿ ಜಾಗೃತಿ ಮೂಡಿಸುವ ಸಲುವಾಗಿ ಗುಬ್ಬಚ್ಚಿ ಬರ್ಡ್ ಟ್ರಸ್ಟ್ ಮತ್ತು ನಗರದ ಪ್ರತಿಷ್ಠಿತ ಸಂಘ-ಸಂಸ್ಥೆಗಳ ಸಹಯೋಗದೊಂದಿಗೆ ಪಕ್ಷಿಗಳಿಗಾಗಿಯೇ ಮನೆ-ಮನೆಗೂ ಮಣ್ಣಿನ ತಟ್ಟೆಯನ್ನು ಉಚಿತವಾಗಿ ನೀಡಿ, ಸಂಸ್ಥೆಯ ಲೋಕ ಕಲ್ಯಾಣ ಧ್ಯೇಯವನ್ನು ಅನುಷ್ಟಾನಗೊಳಿಸುವ ಮಹತ್ಕಾರ್ಯವನ್ನು ಹಮ್ಮಿಕೊಳ್ಳಲಾಗಿದೆ.

ವಿಶ್ವ ಗುಬ್ಬಚ್ಚಿ ದಿನಾಚರಣೆ-2023 ಅಂಗವಾಗಿ ಗುಬ್ಬಚ್ಚಿ ಪಕ್ಷಿ ಹಬ್ಬ-2023 ಆಚರಣೆಯನ್ನು ದಿನಾಂಕ: 26-03-2023ರ ಭಾನುವಾರದಂದು ಹಮ್ಮಿಕೊಳ್ಳಲಾಗಿದ್ದು, ವಿವರವಾದ ಕರಪತ್ರವನ್ನು ಈ ಪತ್ರದೊಂದಿಗೆ ಲಗತ್ತಿಸಿದೆ.

ಸಾರ್ವಜನಿಕರು ಈ ಕಾರ್ಯಕ್ರಮದಲ್ಲಿ ಭಾಗಿಗಳಾಗಿ ಹಲವಾರು ಮೂಕ ಜೀವಿಗಳನ್ನು ಕಾಪಾಡುವ ನಮ್ಮ ಪ್ರಯತ್ನವನ್ನು ಯಶಸ್ವಿಗೊಳಿಸುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಕುಡಿಯುವ ನೀರಿನ ಸಮಸ್ಯೆ : ಮತದಾನ ಬಹಿಷ್ಕರಿಸಿದ್ದವರಿಂದ ಸಂಜೆ ವೇಳೆಗೆ ಮತದಾನ..!

ಚಿತ್ರದುರ್ಗ : ಇಂದು ಕರ್ನಾಟಕದಲ್ಲಿ ಮೊದಲ ಲೋಕಸಭಾ ಚುನಾವಣೆಗೆ ನಡೆದಿದೆ. ಎಷ್ಟೇ ಜಾಗೃತಿ ಮೂಡಿಸಿದರು ಸಾಕಷ್ಟು ಮಂದಿ ಮತದಾನ ಮಾಡಿಲ್ಲ. ಪರಿಪೂರ್ಣ ಮತದಾನ ನಡೆದಿಲ್ಲ. ಚುನಾವಣೆ ಬಂದಾಗೆಲ್ಲಾ ಜಾಗೃತಿ ಕಾರ್ಯ ನಡೆದರು ಮತದಾನ ಪೂರ್ಣವಾಗುವುದರಲ್ಲಿ

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಸಂಜೆ 5 ರವೇಳೆಗೆ ಶೇಕಡಾವಾರು ಮತದಾನ ಎಷ್ಟು ? 

ಚಿತ್ರದುರ್ಗ.ಏ.26: ಚಿತ್ರದುರ್ಗ ಲೋಕಸಭಾ ಕ್ಷೇತ್ರಕ್ಕೆ ಏ.26 ರಂದು  ಜರುಗಿದ ಮತದಾನದಲ್ಲಿ ಸಂಜೆ 5 ಗಂಟೆ ವೇಳೆಗೆ  ಶೇ.67 ರಷ್ಟು ಮತದಾನ ದಾಖಲಾಗಿದೆ. ಸಂಜೆ 6 ಗಂಟೆಯವರೆಗೂ ಮತ ಚಲಾಯಿಸಲು ಅವಕಾಶವಿದ್ದು, ಮತದಾರರು ಉತ್ಸಾಹ ತೋರಿ

ಮತದಾನಕ್ಕೂ ಮುನ್ನ ದೇವಸ್ಥಾನಗಳಲ್ಲಿ ಪೂಜೆ ಸಲ್ಲಿಸಿದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳ

  ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,   ಮೊ : 78998 64552 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಗೋವಿಂದ ಕಾರಜೋಳರವರು ಮತದಾನಕ್ಕೂ ಮುನ್ನ

error: Content is protected !!