Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

🔴 ಅಡ್ಮಿಷನ್ ಓಪನ್

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್, ಚಿತ್ರದುರ್ಗ

2026-27ನೇ ಸಾಲಿನ ದಾಖಲಾತಿಗಳು ಪ್ರಾರಂಭ! (ಪ್ಲೇ ಗ್ರೂಪ್‌ನಿಂದ 12ನೇ ತರಗತಿವರೆಗೆ)

ಸಂಪೂರ್ಣ ಮಾಹಿತಿ & ದಾಖಲಾತಿಗಾಗಿ ಕ್ಲಿಕ್ ಮಾಡಿ ➔
---Advertisement---

ಚಿತ್ರದುರ್ಗ ಜಿಲ್ಲೆಯಲ್ಲಿ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಮಾದರಿ ಅಧ್ಯಯನ : ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್ ಹೇಳಿಕೆ

---Advertisement---

ಚಿತ್ರದುರ್ಗ. ಜುಲೈ17: ನವಜಾತ ಶಿಶುಗಳ ಜನನದ ನಂತರದ ಕಠಿಣ ಸಂದರ್ಭಗಳಿಂದ ಹಿಡಿದು, ಆರಂಭದ ಸಾವಿರ ದಿನಗಳು ಮಗುವಿನ ಭೌತಿಕ ಹಾಗೂ ಬೌದ್ಧಿಕ ಬೆಳವಣಿಗೆಯನ್ನು ವೃದ್ಧಿಸಲು ಉತ್ತಮ ಸಮಯವಾಗಿದೆ. ಚಿತ್ರದುರ್ಗ ಜಿಲ್ಲೆಯಲ್ಲಿ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಎನ್ನುವ ಸಂಶೋಧನಾ ಯೋಜನೆಗೆ ಐದು ತಿಂಗಳ ಹಿಂದೆಯೇ ಚಾಲನೆ ನೀಡಲಾಗಿದ್ದು, ಜಿಲ್ಲೆಯ ಮಾದರಿ ಅಧ್ಯಯನ ನಡೆಸಲಾಗುತ್ತಿದೆ ಎಂದು ನವದೆಹಲಿಯ ಐಸಿಎಂಆರ್ ಹೆರಿಗೆ ವಿಭಾಗದ ಮುಖ್ಯಸ್ಥೆ ಡಾ.ಅಶೂ ಗ್ರೋವರ್ ಹೇಳಿದರು.

 

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆರೋಗ್ಯ ಮತ್ತು ಕುಟುಂಬ ಇಲಾಖೆ, ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ (ಐ.ಸಿ.ಎಂ.ಆರ್), ಕರ್ನಾಟಕ ಆರೋಗ್ಯ ಸಂವರ್ಧನ ಟ್ರಸ್ಟ್ (ಕೆ.ಹೆಚ್.ಪಿ.ಟಿ), ಹಾಗೂ ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆ (ಎಸ್.ಜೆ.ಆರ್.ಐ) ವತಿಯಿಂದ ಆಯೋಜಿಸಲಾದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

 

ಐಸಿಎಂಆರ್ ಸಂಶೋಧನಾ ಕೇಂದ್ರದಿಂದ ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆ ಅನುಷ್ಠಾನದ ಬಗ್ಗೆ ಕೂಲಂಕೂಷವಾಗಿ ಅಧ್ಯಯನ ನಡೆಸಲಾಗುತ್ತಿದೆ. ಮಗುವಿನ ಜನನದಿಂದ ಸಾವಿರ ದಿನಗಳವರೆಗೆ ಉತ್ತಮ ಆರೋಗ್ಯ ವೃದ್ಧಿಪಡಿಸಲು ಹಲವು ರೀತಿಯ ಕಾರ್ಯತಂತ್ರಗಳನ್ನು ರೂಪಿಸಲಾಗಿದೆ. ದೇಶದಾದ್ಯಂತ ಯೋಜನೆಯನ್ನು ಜಾರಿಗೊಳಿಸಲಾಗಿದ್ದು, ಯೋಜನೆಯ ಅನುಷ್ಠಾನಕ್ಕೆ ತರಲು ರಾಜ್ಯ ಮಟ್ಟದ ಹಾಗೂ ಸ್ಥಳೀಯ ಆರೋಗ್ಯ ಸಂಸ್ಥೆಗಳ ಜೊತೆ ಕೈ ಜೋಡಿಸಲಾಗಿದೆ. ಆಯುಷ್ಮಾನ್ ಭಾರತ ಯೋಜನೆಯಡಿ ಜಿಲ್ಲಾ ಆಸ್ಪತ್ರೆಗಳು ಉತ್ತಮ ಸೌಲಭ್ಯಗಳನ್ನು ಜನರಿಗೆ ನೀಡುತ್ತಿವೆ. ನವದೆಹಲಿ ಅಥವಾ ಬೆಂಗಳೂರಿನಲ್ಲಿ ಕುಳಿತು ಯೋಜನೆಯನ್ನು ರೂಪಿಸಿ, ಸುಮ್ಮನೆ ಕುಳಿತರೆ ಯಶಸ್ವಿ ಅನುಷ್ಠಾನ ಮಾಡಲು ಸಾಧ್ಯವಿಲ್ಲ. ಜಿಲ್ಲಾ ಆಸ್ಪತ್ರೆಗಳು ವಾಸ್ತವಿಕವಾಗಿ ಎದುರಿಸುತ್ತಿರುವ ತೊಂದರೆ ಹಾಗೂ ಸವಾಲುಗಳ ಕುರಿತು ಮಾಹಿತಿ ನೀಡಬೇಕು. ಇದರಿಂದ ಅಗತ್ಯ ಯಂತ್ರೋಪಕರಣ, ಔಷಧೋಪಚಾರ ಹಾಗೂ ಸವಲತ್ತುಗಳನ್ನು ಉನ್ನತೀಕರಿಸಲು ಸಾಧ್ಯವಾಗುತ್ತದೆ. ಈ ನಿಟ್ಟಿನಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಸಹಜ ಹೆರಿಗೆ, ಅವಧಿಗೆ ಮುನ್ನ ಹೆರಿಗೆ, ಕಡಿಮೆ ತೂಕ ಮಕ್ಕಳ ಜನನವಾದ ಸಂದರ್ಭದಲ್ಲಿ ಕೈಗೊಳ್ಳಬೇಕಾದ ಕಾರ್ಯವಿಧಾನಗಳ ಬಗ್ಗೆ ಮಾರ್ಗಸೂಚಿಗಳನ್ನು ರಚಿಸಲಾಗಿದೆ. ಚಿತ್ರದುರ್ಗ ಜಿಲ್ಲೆಯ ಮಾದರಿ ಅಧ್ಯಯನಲ್ಲಿ ಕಂಡುಬರುವ ಅಂಶಗಳನ್ನು ಪರಿಗಣಿಸಿ ಹೆಚ್ಚು ಪರಿಣಾಮ ಬೀರುವ ಕಾರ್ಯತಂತ್ರಗಳನ್ನು ಐಸಿಎಂಆರ್ ರೂಪಿಸಲಿದೆ. ಇದು ದೇಶದ ಬೇರೆ ಜಿಲ್ಲೆ ಹಾಗೂ ಭಾಗಗಳ ಸಮಸ್ಯೆಗಳಿಗೆ ಪರಿಹಾರ ದೊರಕಿಸಿ ಕೊಡಬಹುದು ಎಂದು ಡಾ.ಅಶೂ ಗ್ರೋವರ್ ಹೇಳಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ರೇಣುಪ್ರಸಾದ್ ಮಾತನಾಡಿ, ‘ಸ್ಪರ್ಶ್-ದಿ ಫಸ್ಟ್-1000 ಡೇಸ್ ಆಫ್ ಲೈಫ್’ ಯೋಜನೆಯನ್ನು ಜಿಲ್ಲೆಯಲ್ಲಿ ಜಾರಿ ಮಾಡಿ ಐದು ತಿಂಗಳಾಗಿದೆ. ಈ ಅವಧಿಯಲ್ಲಾದ ಉತ್ತಮ ಕಾರ್ಯಗಳು ಹಾಗೂ ಎದುರಿಸಿದ ಅಡಚಣೆಗಳು ಬಗ್ಗೆ ಅವಲೋಕನ ನಡೆಸಲು ಕಾರ್ಯಗಾರ ನೆರವಾಗಲಿದೆ. ಇದರಿಂದ ಮುಂದಿನ ದಿನಗಳಿಗೆ ಹೇಗೆ ಕಾರ್ಯತಂತ್ರಗಳನ್ನು ರೂಪಿಸಬಹುದು ಎಂಬುದು ತಿಳಿದು ಬರಲಿದೆ ಎಂದರು.
ಯೋಜನೆಯಡಿ ಕಡಿಮೆ ತೂಕದೊಂದಿಗೆ ಜನಿಸಿದ ಮಗುವಿಗೆ ಜಿಲ್ಲಾ ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ನೀಡಿ ಆರೋಗ್ಯ ಸುಧಾರಿಸುವಂತೆ ಮಾಡಲಾಗಿದೆ. ಈ ಕುರಿತು ಮಗುವಿನ ತಾಯಿ ಪ್ರಶಾಂತನಗರದ ಚಂದನ ತನ್ನ ಅನಿಸಿಕೆಗಳನ್ನು ತಿಳಿಸಿದರು.

ಕಾರ್ಯಾಗಾರದಲ್ಲಿ ನವಜಾತ ಹಾಗೂ 2 ವರ್ಷದ ಒಳಗಿನ ಮಕ್ಕಳ ಚಿಕಿತ್ಸಾ ವಿಧಾನ ಕುರಿತು ವೈದ್ಯರಿಗೆ ತರಬೇತಿ ನೀಡಲಾಯಿತು. ಐಸಿಎಂಆರ್‍ನ ಡಾ.ಆಮ್ಲಿನ್ ಶುಕ್ಲಾ, ಕೆ.ಹೆಚ್.ಟಿ.ಪಿ ಯೋಜನಾ ಮುಖ್ಯಸ್ಥೆ ಡಾ.ಪ್ರಾರ್ಥನಾ, ಹಿರಿಯ ವ್ಯವಸ್ಥಾಪಕಿ ಡಾ.ಆಯಿಷಾ, ಜಿಲ್ಲಾ ಆರ್‍ಸಿಹೆಚ್‍ಓ ಡಾ.ಅಭಿನವ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಪನಿರ್ದೇಶಕ ವಿಜಯ್‍ಕುಮಾರ್, ಸೆಂಟ್ ಜಾನ್ಸ್ ಸಂಶೋಧನಾ ಸಂಸ್ಥೆಯ ಡಾ.ಪ್ರೇಮ್ ಮೌನಿ, ಡಾ.ಸುಮನ್ ರಾವ್, ಜಿಲ್ಲಾ ಸಂಯೋಜಕಿ ಬಿ.ವೀಣಾ, ತಾಲ್ಲೂಕು ಸಂಯೋಜಕಿ ಮೇಘಾ ಉಪಸ್ಥಿತರಿದ್ದರು.

ನಿಮ್ಮೂರಿನ ಸುದ್ದಿ, ಈಗ 'ಸುದ್ದಿ ಒನ್' ನಲ್ಲಿ!

ನಿಮ್ಮ ಊರಿನ ಅದ್ಧೂರಿ ಜಾತ್ರೆ, ವಿಶೇಷ ಆಚರಣೆಗಳು, ಅಥವಾ ನಿಮ್ಮ ಗಮನಕ್ಕೆ ಬಂದ ಸ್ಥಳೀಯ ಸಮಸ್ಯೆಗಳೇ? ಚಿತ್ರದುರ್ಗ ಹಾಗೂ ಸುತ್ತಮುತ್ತಲಿನ ಯಾವುದೇ ಸುದ್ದಿಯಾದರೂ ನಮಗೆ ತಿಳಿಸಿ. ನಿಮ್ಮ ಧ್ವನಿಯಾಗಿ ನಾವು ನಾಡಿಗೆ ತಲುಪಿಸುತ್ತೇವೆ. ಛಾಯಾಚಿತ್ರ ಮತ್ತು ವಿವರಗಳೊಂದಿಗೆ ನಮಗೆ ಇಮೇಲ್ ಮಾಡಿ.

✉️ suddionenews@gmail.com

🛡️ ನಿಮ್ಮ ಮಾಹಿತಿಯನ್ನು ಗೌಪ್ಯವಾಗಿಡಲಾಗುವುದು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...