ಚಿತ್ರದುರ್ಗ : ಅನೇಕ ವರ್ಷಗಳಿಂದಲೂ ಸಾಗುವಳಿ ಮಾಡಿ ಬದುಕುತ್ತಿರುವ ಬಡವರ ಭೂಮಿಯನ್ನು ಕಸಿಯುವ ಹುನ್ನಾರ ನಡೆಸುತ್ತಿರುವ ರಾಜ್ಯ ಸರ್ಕಾರದ ರೈತ ವಿರೋಧಿ, ದಲಿತ ವಿರೋಧಿ, ಬಡಜನರ ವಿರೋಧಿ ಕಾಯ್ದೆಗಳನ್ನು ಧಿಕ್ಕರಿಸಿ ಮಾರ್ಚ್ 21ರಿಂದ 23ರ ವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‍ನಲ್ಲಿ ಪರ್ಯಾಯ ಅಧಿವೇಶನ ನಡೆಸಿ ರಾಜ್ಯದ ಮುಖ್ಯಮಂತ್ರಿಗಳ ಗಮನ ಸೆಳೆಯಲಾಗುವುದೆಂದು ಭೂಮಿ-ವಸತಿ ಹೋರಾಟ ಸಮಿತಿ ರಾಜ್ಯ ಕಾರ್ಯದರ್ಶಿ ಮಂಡಳಿಯ ಸದಸ್ಯ ಕುಮಾರ್ ಸಮತಳ ತಿಳಿಸಿದರು.
ಪ್ರವಾಸಿ ಮಂದಿರದಲ್ಲಿ ಶನಿವಾರ ಸುದ್ಧಿಗೋಷ್ಠಿಯಲ್ಲಿ ಮಾತನಾಡಿದ ಅವರು ಕರ್ನಾಟಕ ಭೂ-ಸುಧಾರಣಾ ಕಾಯ್ದೆಯಡಿ ಬಡವರಿಗೆ ಹಾಗೂ ತುಂಡು ಭೂಮಿಗಳನ್ನು ಸಾಗುವಳಿ ಮಾಡುತ್ತಿರುವ ರೈತರಿಗೆ ಜಮೀನು ನೀಡುವುದನ್ನು ಬಿಟ್ಟು ಹಣಕ್ಕೆ ಖಾಸಗಿಯವರಿಗೆ ಮಾರಾಟ ಮಾಡಲು ಹೊರಟಿದೆ ಇದು ಬಡವರಿಗೆ ಬಲವಾದ ಪೆಟ್ಟು ಕೊಟ್ಟಂತಾಗಿದೆ. ಕಂದಾಯ ಮಂತ್ರಿ ಅಧ್ಯಕ್ಷತೆಯಲ್ಲಿ ಉಪಸಮಿತಿ ರಚಿಸಿದ್ದು, ಇದರಲ್ಲಿ ಐವರು ಮಂತ್ರಿಗಳಿದ್ದಾರೆ.
ಯಾವುದೇ ಕಾರಣಕ್ಕೂ ಸಾಗುವಳಿ ಮಾಡುವವರನ್ನು ಖಾಲಿ ಮಾಡಿಸಬಾರದೆಂದು ಸರ್ಕಾರದ ಮೇಲೆ ಒತ್ತಡ ಹೇರುವುದಕ್ಕಾಗಿ ಎಲ್ಲಾ ಸಂಘಟನೆಗಳವರು ಸೇರಿಕೊಂಡು ಪರ್ಯಾಯ ಅಧಿವೇಶನ ನಡೆಸಿ ಮುಖ್ಯಮಂತ್ರಿ ಹಾಗೂ ವಿರೋಧ ಪಕ್ಷದ ನಾಯಕರಿಗ ಮನವರಿಕೆ ಮಾಡಿಕೊಡಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಒಂದುವರೆ ಲಕ್ಷ ಅರ್ಜಿಗಳು ಬಾಕಿ ಇದ್ದು, ಭೂಮಿ ಇಲ್ಲದ ಹಾಗೂ ವಸತಿ ಹೀನರಿಗೆ ಮೂಲಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಆಯಾ ಕ್ಷೇತ್ರದ ಶಾಸಕರುಗಳು ವಿಶೇಷ ಗಮನ ನೀಡಬೇಕು ಎಂದು ಕುಮಾರ್ ಸಮತಳ ಮನವಿ ಮಾಡಿದರು.
ಕರ್ನಾಟಕ ಜನಶಕ್ತಿ ರಾಜ್ಯಸಮಿತಿಯ ಸದಸ್ಯ ಟಿ.ಶಫಿವುಲ್ಲಾ ಮಾತನಾಡಿ 2015ರಲ್ಲಿ ಹುಟ್ಟಿಕೊಂಡ ಭೂಮಿ-ವಸತಿ ಹೋರಾಟ ಸಮಿತಿ ಸತತವಾಗಿ ಹಲವಾರು ಹೋರಾಟ, ಚಳುವಳಿ, ಪ್ರತಿಭಟನೆಗಳನ್ನು ಮಾಡಿ ಬಡ ಸಾಗುವಳಿದಾರರಿಗೆ ಭೂಮಿ ಹಕ್ಕು ಪತ್ರಕೊಡಬೇಕೆಂದು ಸರ್ಕಾರವನ್ನು ಒತ್ತಾಯಿಸುತ್ತಲೇ ಬರುತ್ತಿದ್ದೇವೆ.
ಇಲ್ಲಿಯವರೆಗೂ ನಮ್ಮ ಹೋರಾಟಗಳಿಗೆ ರಾಜ್ಯ ಸರ್ಕಾರ ಸ್ಪಂಧಿಸದ ಕಾರಣ ಇದೇ ತಿಂಗಳ 21ರಿಂದ 3 ದಿನಗಳ ಕಾಲ ಬೆಂಗಳೂರಿನ ಸ್ವಾತಂತ್ರ್ಯ ಉದ್ಯನವನದಲ್ಲಿ ಜನರ ಪರ್ಯಾಯ ಅಧಿವೇಶನ ನಡೆಸಲಾಗುವುದು. ಚಿತ್ರದುರ್ಗದಿಂದ 250ಜನ ಭಾಗವಹಿಸಲಿದ್ದಾರೆ ಎಂದರು.
ಸತ್ಯಪ್ಪ ಮಲ್ಲಾಪುರ ಮಾತನಾಡಿ ಕಂದಾಯ ಇಲಾಖೆಯವರು ಮೊದಲು ಭೂಮಿಗಳನ್ನು ಸರ್ವೇ ಮಾಡಿಸಿ ಸಾಗುವಳಿ ಮಾಡುತ್ತಿರುವವರಿಗೆ ಹಕ್ಕು ಪತ್ರಗಳನ್ನು ನೀಡಬೇಕು. ಸರ್ಕಾರ ದಿನಕ್ಕೊಂದು ಕಾನೂನು ಜಾರಿಗೆ ತರುತ್ತಿರುವುದರಿಂದ ತುಂಡು ಭೂಮಿಗಳನ್ನೇ ನಂಬಿಕೊಂಡಿರುವ ರೈತರು ನೊಂದಿದ್ದಾರೆ. ಜಿಲ್ಲಾಧಿಕಾರಿ ತಹಶೀಲ್ದಾರ್ ಇವರುಗಳಿಗೆ ಸಾಕಷ್ಟು ಬಾರಿ ಮನವಿ ಮಾಡಿದರು ಪ್ರಯೋಜನವಾಗಿಲ್ಲ. ಆಯಾ ಕ್ಷೇತ್ರದ ಶಾಸಕರುಗಳು ಈ ಬಗ್ಗೆ ಗಮನ ಹರಿಸಲಿ ಎಂದು ವಿನಂತಿಸಿದರು.
ಈಚಗಟ್ಟ ಕರಿಯಣ್ಣ, ಹನುಮಂತಪ್ಪ ಗೋನೂರು, ಪುರುಷೋತ್ತಮ, ರಾಜಣ್ಣ ಇನ್ನು ಮುಂತಾದವರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದರು.
ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಬೆಳಗ್ಗೆ 11 ಗಂಟೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮಾ ಅವರು ಜಂಟಿ ಅಧಿವೇಶನ ಉದ್ದೇಶಿಸಿ…
ಸುದ್ದಿಒನ್ :ಮಕ್ಕಳಿಗೆ ಟೀ ಮತ್ತು ಕಾಫಿ ಕೊಡುವ ಮೊದಲು ತಿಳಿದುಕೊಳ್ಳಬೇಕಾದ ಕೆಲವು ವಿಷಯಗಳಿವೆ. ಚಿಕ್ಕ ವಯಸ್ಸಿನಲ್ಲಿ ಚಹಾ ಅಥವಾ ಕಾಫಿ…
ಈ ರಾಶಿಯ ದಂಪತಿಗಳಿಗೆ ಅತಿಯಾದ ಕಿರುಕುಳದಿಂದ ಜಿಗುಪ್ಸೆ, ಶುಕ್ರವಾರದ ರಾಶಿ ಭವಿಷ್ಯ 31 ಜನವರಿ 2025 - ಸೂರ್ಯೋದಯ -…
ದಾವಣಗೆರೆ: ಇತ್ತೀಚೆಗೆ ಮೈಕ್ರೋ ಫೈನಾನ್ಸ್ ಕಾಟಕ್ಕೆ ರಾಜ್ಯದಲ್ಲಿ ಜೀವ ಕಳೆದುಕೊಂಡವರು ಅದೆಷ್ಟೋ. ಇದಕ್ಕೆ ಕಡಿವಾಣ ಹಾಕುವುದಕ್ಕೆ ಸರ್ಕಾರ ಕೂಡ ಸಭೆಗಳನ್ನ…
ಚಿತ್ರದುರ್ಗ. ಜ.30: ಮಹಾತ್ಮಾ ಗಾಂಧೀಜಿಯವರು ಹುತಾತ್ಮರಾದ ದಿನವಾದ ಜ. 30 ರಂದು ಸರ್ವೋದಯ ದಿನವನ್ನಾಗಿ ಆಚರಿಸಲಾಗುತ್ತಿದ್ದು, ಈ ನಿಮಿತ್ತ ಅಪರ…
ಚಿತ್ರದುರ್ಗ. ಜ.30: ಚಿತ್ರದುರ್ಗ ತಾಲ್ಲೂಕಿನ ಕಾಲ್ಗೆರೆ ಹಾಗೂ ಇಸ್ಸಾಮುದ್ರ ಗ್ರಾಮ ಪಂಚಾಯಿತಿಗಳಿಗೆ ಗುರುವಾರ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ…