Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಯುವ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು ವಿಶೇಷ ಜಾಗೃತಿ ಅಭಿಯಾನ : ಜಿಲ್ಲಾಧಿಕಾರಿ ದಿವ್ಯಪ್ರಭು

Facebook
Twitter
Telegram
WhatsApp

 

ಮಾಹಿತಿ ಮತ್ತು ಫೋಟೋ ಕೃಪೆ : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಚಿತ್ರದುರ್ಗ

ಚಿತ್ರದುರ್ಗ (ನ.09):  ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಕರಡು ಪಟ್ಟಿಯನ್ನು ಬುಧವಾರದಂದು ಪ್ರಕಟಿಸಲಾಗಿದ್ದು,  ಜಿಲ್ಲೆಯಲ್ಲಿ ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ಅರ್ಹರಿರುವ ಯುವ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಲು ಒಂದು ತಿಂಗಳ ಕಾಲ ಸ್ವೀಪ್ ಕಾರ್ಯಕ್ರಮದಡಿ ವಿಶೇಷ ಅಭಿಯಾನವನ್ನು ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ.ಆರ್.ಜೆ. ಅವರು ಹೇಳಿದರು.

ಮತದಾರರ ಪಟ್ಟಿ ಪರಿಷ್ಕರಣೆ ಹಾಗೂ ಕರಡು ಮತದಾರರ ಪಟ್ಟಿ ಪ್ರಕಟಿಸುವ ಕುರಿತಂತೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ವಿವಿಧ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ನಡೆಸಿದ ಸಭೆಯ ಬಳಿಕ ಮಾಧ್ಯಮದವರೊಂದಿಗೆ ಅವರು ಮಾತನಾಡಿದರು.

ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆ ಕಾರ್ಯ ಜಿಲ್ಲೆಯಾದ್ಯಂತ ಆರಂಭವಾಗಿದ್ದು, ಮತದಾರರ ಕರಡು ಪಟ್ಟಿಯನ್ನು ಬುಧವಾರದಂದು ಪ್ರಕಟಿಸಲಾಗಿದೆ.  ಕರಡು ಪಟ್ಟಿ ಜಿಲ್ಲೆಯ ಎಲ್ಲ ತಾಲ್ಲೂಕು ಕಚೇರಿಗಳಲ್ಲಿ, ಉಪವಿಭಾಗಾದಿಕಾರಿಗಳ ಕಚೇರಿ, ಆಯಾ ಮತಗಟ್ಟೆಗಳು, ಗ್ರಾ.ಪಂ., ನಗರಸಭೆ, ಪುರಸಭೆ, ಪಟ್ಟಣ  www.ceokarnataka.kar.nic.in ಮತ್ತು  https://chitradurga.nic.in ನಲ್ಲಿಯೂ ಲಭ್ಯವಿದ್ದು, ಪರಿಶೀಲಿಸಬಹುದಾಗಿದೆ.

18 ವರ್ಷ ವಯಸ್ಸು ಪೂರ್ಣಗೊಂಡವರು ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಬಹುದಾಗಿದ್ದು, ಹೆಸರು ಸೇರ್ಪಡೆ, ತಿದ್ದುಪಡಿ, ಸ್ಥಳಾಂತರ, ಫೋಟೋ ಬದಲಾವಣೆ ಹೀಗೆ ವಿವಿಧ ಪರಿಷ್ಕರಣೆ ಕಾರ್ಯವನ್ನು ಕೈಗೊಳ್ಳಲು ಸಾರ್ವಜನಿಕರು ಹಾಗೂ ಮತದಾರರಿಗೆ ಡಿ. 08 ರವರೆಗೂ ಕಾಲಾವಕಾಶ ನೀಡಲಾಗಿದೆ.  ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನ. 12, ನ. 20, ಡಿ. 03 ಹಾಗೂ ಡಿ. 04 ರಂದು ಮಿಂಚಿನ ನೊಂದಣಿ ಕಾರ್ಯಾಚರಣೆ ಹಮ್ಮಿಕೊಳ್ಳಲಾಗುವುದು.

ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆ ಭೇಟಿ ನೀಡಿ, ಅರ್ಹರನ್ನು ಮತದಾರರ ಪಟ್ಟಿಗೆ ಸೇರ್ಪಡೆಗೊಳಿಸಲು ಕ್ರಮ ಕೈಗೊಳ್ಳುವರು.  ಸಾರ್ವಜನಿಕರು ಆನ್‍ಲೈನ್ ಮೂಲಕವೂ ವೋಟರ್ ಹೆಲ್ಪ್‍ಲೈನ್ ಆ್ಯಪ್  (VHA App)  ಮೊಬೈಲ್‍ನಲ್ಲಿ ಡೌನ್‍ಲೋಡ್ ಮಾಡಿಕೊಂಡು ಹೆಸರು ಸೇರ್ಪಡೆ, ತಿದ್ದುಪಡಿ ಮುಂತಾದ ಪರಿಷ್ಕರಣೆ ಕಾರ್ಯ ಕೈಗೊಳ್ಳಬಹುದು.  ಯಾವುದೇ ಗೊಂದಲ ಅಥವಾ ಸಂದೇಹಗಳ ನಿವಾರಣೆಗಾಗಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ 08194-222176 ಸಹಾಯವಾಣಿ ಸ್ಥಾಪಿಸಲಾಗಿದೆ. ಅಥವಾ ಟೋಲ್ ಫ್ರೀ ಸಂಖ್ಯೆ 1950 ಕ್ಕೆ ಕರೆ ಮಾಡಿ ಮಾಹಿತಿ ಪಡೆಯಬಹುದಾಗಿದೆ.  ಸಲ್ಲಿಕೆಯಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಡಿ. 26 ರ ಒಳಗಾಗಿ ತೀರ್ಮಾನ ಕೈಗೊಳ್ಳಲಾಗುವುದು.  ಮತದಾರರ ಅಂತಿಮ ಪಟ್ಟಿಯನ್ನು 2023 ರ ಜನವರಿ 05 ರಂದು ಪ್ರಕಟಿಸಲಾಗುವುದು ಎಂದರು.

ವಿವಿಧ ರಾಜಕೀಯ ಪಕ್ಷದವರು ಪ್ರತಿಯೊಂದು ಮತಗಟ್ಟೆಗೂ ಮತಗಟ್ಟೆ ಮಟ್ಟದ ಏಜೆಂಟರನ್ನು ನೇಮಕ ಮಾಡಿ, ಬೂತ್ ಮಟ್ಟದ ಅಧಿಕಾರಿಗಳ ಸಮನ್ವಯದೊಂದಿಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯಕ್ಕೆ ಸಹಕಾರ ನೀಡುವಂತೆ ಜಿಲ್ಲಾಧಿಕಾರಿಗಳು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.

ಅರ್ಹತಾ ದಿನಾಂಕಗಳು ಈಗ ನಾಲ್ಕು :
*********** ಈ ಹಿಂದೆ ಆಯಾ ವರ್ಷದ ಜ. 01 ದಿನಾಂಕವನ್ನು ಅರ್ಹತಾ ದಿನಾಂಕವನ್ನಾಗಿಸಿ ಪಟ್ಟಿ ಪರಿಷ್ಕರಣೆ ಮಾಡಲಾಗುತ್ತಿತ್ತು.  ಆದರೆ ಈಗ ನಿಯಮಗಳಲ್ಲಿ ತಿದ್ದುಪಡಿ ಮಾಡಲಾಗಿದ್ದು, ಜ. 01 ರ ಜೊತೆಗೆ 01ನೇ ಏಪ್ರಿಲ್, 01ನೇ ಜುಲೈ ಹಾಗೂ 01 ನೇ ಅಕ್ಟೋಬರ್ ದಿನಾಂಕವನ್ನು ಅರ್ಹತಾ ದಿನಾಂಕವನ್ನಾಗಿ ನಿಗದಿಪಡಿಸಲಾಗಿದೆ.  ಹೀಗಾಗಿ ನಿಗದಿತ ದಿನಾಂಕಕ್ಕೆ 18 ವರ್ಷ ಪೂರ್ಣಗೊಂಡವರು, ಮತದಾರರ ಪಟ್ಟಿಗೆ ಹೆಸರು ಸೇರ್ಪಡೆಗೊಳಿಸಲು ನಮೂನೆ-06, ಹೆಸರು ಕೈಬಿಡಲು ಅಥವಾ ಆಕ್ಷೇಪಣೆಗೆ ನಮೂನೆ-07, ತಿದ್ದುಪಡಿಗೆ ನಮೂನೆ-08, ಮತದಾರರ ಗುರುತಿನ ಚೀಟಿಗೆ ಆಧಾರ್ ಲಿಂಕ್ ಮಾಡಿಸಲು ನಮೂನೆ 6ಬಿ ಸಲ್ಲಿಸಬಹುದು. ಅನ್ನು ಭರ್ತಿ ಮಾಡಿ ಆಯಾ ಮತಗಟ್ಟೆ ಅಧಿಕಾರಿಗೆ ಸಲ್ಲಿಸಬಹುದು.  ಅಥವಾ ಆನ್‍ಲೈನ್ ನಲ್ಲಿಯೂ ಭರ್ತಿ ಮಾಡಿ ಸಲ್ಲಿಸಬಹುದಾಗಿದೆ ಎಂದರು.

13,48,457 ಮತದಾರರು :
ಪ್ರಕಟಿಸಲಾಗಿರುವ ಮತದಾರರ ಕರಡು ಪಟ್ಟಿಯನ್ವಯ ಜಿಲ್ಲೆಯಲ್ಲಿ ಒಟ್ಟು 1648 ಮತದಾನ ಕೇಂದ್ರಗಳಿದ್ದು, 13,48,457 ಮತದಾರರಿದ್ದಾರೆ.  ಇದರಲ್ಲಿ ಪುರುಷ-6,77,105, ಮಹಿಳೆ-6,71,277, ಇತರೆ-75 ಮತದಾರರಿದ್ದಾರೆ.

ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ 284 ಮತಗಟ್ಟೆಗಳಿದ್ದು, ಪುರುಷ-118412, ಮಹಿಳೆ-115329, ಇತರೆ-03, ಒಟ್ಟು-233744 ಮತದಾರರಿದ್ದಾರೆ.  ಚಳ್ಳಕೆರೆ ಕ್ಷೇತ್ರದಲ್ಲಿ 259 ಮತಗಟ್ಟೆ, ಪುರುಷ-106045, ಮಹಿಳೆ-105927, ಇತರೆ-06, ಒಟ್ಟು-211978 ಮತದಾರರಿದ್ದಾರೆ.  ಚಿತ್ರದುರ್ಗ ಕ್ಷೇತ್ರದಲ್ಲಿ 283 ಮತಗಟ್ಟೆ, ಪುರುಷ-123699, ಮಹಿಳೆ-125020, ಇತರೆ-31, ಒಟ್ಟು-248750 ಮತದಾರರಿದ್ದಾರೆ.  ಹಿರಿಯೂರು ಕ್ಷೇತ್ರದಲ್ಲಿ 285 ಮತಗಟ್ಟೆಗಳಿದ್ದು, ಪುರುಷ-116259, ಮಹಿಳೆ-116898, ಇತರೆ-32, ಒಟ್ಟು-233189 ಮತದಾರರಿದ್ದಾರೆ.  ಹೊಸದುರ್ಗ ಕ್ಷೇತ್ರದಲ್ಲಿ 240 ಮತಗಟ್ಟೆಗಳಿದ್ದು, ಪುರುಷ-97455, ಮಹಿಳೆ-94971, ಒಟ್ಟು-192426 ಮತದಾರರಿದ್ದಾರೆ.  ಹೊಳಲ್ಕೆರೆ ಕ್ಷೇತ್ರದಲ್ಲಿ 297 ಮತಗಟ್ಟೆಗಳು, ಪುರುಷ-115235, ಮಹಿಳೆ-113132, ಇತರೆ-03, ಒಟ್ಟು-228370 ಮತದಾರರಿದ್ದಾರೆ.  ಮತದಾರರ ಪಟ್ಟಿ ಪರಿಷ್ಕರಣೆ ಸಂದರ್ಭದಲ್ಲಿ ಒಟ್ಟಾರೆ 20378 ಅರ್ಹ ಮತದಾರರನ್ನು ಪಟ್ಟಿಗೆ ಸೇರ್ಪಡೆಗೊಳಿಸಿದ್ದು, ಸ್ಥಳಾಂತರಗೊಂಡವರು, ಮೃತರು ಸೇರಿದಂತೆ ವಿವಿಧ ಕಾರಣಗಳಿಗಾಗಿ 55101 ಮತದಾರರ ಹೆಸರು ಪಟ್ಟಿಯಿಂದ ತೆಗೆದುಹಾಕಲಾಗಿದೆ ಎಂದರು.

ಯುವ ಮತದಾರರ ಸೇರ್ಪಡೆಗೆ ಆದ್ಯತೆ :

ಮತದಾರರ ವಿಶೇಷ ಪರಿಷ್ಕರಣೆಯಲ್ಲಿ ಅರ್ಹ ಯುವ ಮತದಾರರನ್ನು ಪಟ್ಟಿಯಲ್ಲಿ ಸೇರ್ಪಡೆಗೊಳಿಸಲು, ಹಾಗೂ ಅರ್ಹರು ಯಾರೂ ಕೂಡ ಮತದಾನದಿಂದ ಹೊರಗುಳಿಯಬಾರದು ಎಂಬ ಸದುದ್ದೇಶದಿಂದ ಸಾಮಾಜಿಕವಾಗಿ ಹಿಂದುಳಿದ ಸಮುದಾಯಗಳು, ಪ.ಪಂಗಡ, ಅಲೆಮಾರಿ ಜನಾಂಗ, ಲಿಂಗ ಪರಿವರ್ತಿತರು, ತೃತೀಯ ಲಿಂಗಿಗಳು, ದಮನಿತ ಮಹಿಳೆಯರು, ವಿಶೇಷ ಚೇತನರು, ಅಲ್ಲದೆ ಸಮಾಜದ ಮುಖ್ಯವಾಹಿನಿಯಿಂದ ಹೊರಗಿರುವವರನ್ನು ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆಗೊಳಿಸಲು ಆಯಾ ಕಾಲೇಜುಗಳಲ್ಲಿನ ಮತದಾರರ ಸಾಕ್ಷರತಾ ಸಂಘ, ಸ್ವಯಂ ಸೇವಕರು, ಎನ್‍ಎಸ್‍ಎಸ್, ಎನ್‍ಸಿಸಿ ಸದಸ್ಯರುಗಳ ಮೂಲಕ ಜಾಥಾ, ಬೈಕ್, ಸೈಕಲ್ ರ್ಯಾಲಿಗಳನ್ನು ಆಯೋಜಿಸುವ ಮೂಲಕ ವಿಶೇಷ ಜಾಗೃತಿ ಮೂಡಿಸಲಾಗುವುದು ಎಂದರು.

ದಾಖಲೆಗಳೇನು ಬೇಕು ?  ವಯಸ್ಸು ದೃಢೀಕರಣಕ್ಕೆ ಸಕ್ಷಮ ಸ್ಥಳೀಯ ಸಂಸ್ಥೆ, ಪ್ರಾಧಿಕಾರ ನೀಡುವ ಜನನ ಪ್ರಮಾಣಪತ್ರ, ಆಧಾರ್ ಕಾರ್ಡ್, ಪಾನ್ ಕಾರ್ಡ್, ಡ್ರೈವಿಂಗ್ ಲೈಸೆನ್ಸ್, ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಭಾರತೀಯ ಪಾಸ್‍ಪೋರ್ಟ್ ಇವಿಷ್ಟು ದಾಖಲೆಗಳು ಸಾಕು.  ವಿಳಾಸ ದೃಢೀಕರಣಕ್ಕೆ ನೀರು, ವಿದ್ಯುತ್, ಗ್ಯಾಸ್ ಸಂಪರ್ಕದ ಬಿಲ್, ಆಧಾರ್ ಕಾರ್ಡ್, ಬ್ಯಾಂಕ್ ಅಥವಾ ಅಂಚೆ ಪಾಸ್‍ಬುಕ್, ಪಾಸ್‍ಪೋರ್ಟ್, ಕಿಸಾನ್ ವಹಿ ಒಳಗೊಂಡ ಕಂದಾಯ ಇಲಾಖೆಯ ಭೂ ಮಾಲೀಕತ್ವದ ದಾಖಲೆಗಳು, ಬಾಡಿಗೆದಾರರಿದ್ದಲ್ಲಿ ನೊಂದಾಯಿತ ಬಾಡಿಗೆ ಭೋಗ್ಯ ಪತ್ರ, ಸ್ವಂತ ಮನೆಯಿದ್ದಲ್ಲಿ ನೊಂದಾಯಿತ ಕ್ರಯ ಪತ್ರ. ಇವಿಷ್ಟು ದಾಖಲೆಗಳ ಪೈಕಿ ಯಾವುದಾದರೂ ದಾಖಲೆ ಸಲ್ಲಿಸಬಹುದಾಗಿದೆ.

ವಿವಿಧ ರಾಜಕೀಯ ಪಕ್ಷಗಳು ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಸಕ್ರಿಯವಾಗಿ ತೊಡಗಿಸಿಕೊಂಡು, ಕಾರ್ಯಕ್ರಮ ಯಶಸ್ವಿಗೊಳಿಸಲು ಸಹಕಾರ ನೀಡಬೇಕು ಎಂದು ಜಿಲ್ಲಾಧಿಕಾರಿಗಳು ಈ ಸಂದರ್ಭದಲ್ಲಿ ಮನವಿ ಮಾಡಿಕೊಂಡರು.
ವಿವಿಧ ರಾಜಕೀಯ ಪಕ್ಷಗಳೊಂದಿಗೆ ನಡೆದ ಸಭೆಯಲ್ಲಿ ವಿವಿಧ ಪಕ್ಷಗಳ ಪ್ರತಿನಿಧಿಗಳಾದ ಡಿ.ಎನ್. ಮೈಲಾರಪ್ಪ, ಸುರೇಶ್ ಬಾಬು, ಪ್ರತಾಪ್‍ಜೋಗಿ, ರವಿ ಸೇರಿದಂತೆ  ಉಪವಿಭಾಗಾಧಿಕಾರಿ ಚಂದ್ರಯ್ಯ, ಚುನಾವಣಾ ತಹಸಿಲ್ದಾರ್ ಕೃಷ್ಣಕುಮಾರ್ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ದಾವಣಗೆರೆ, ಶಿರಸಿಯಲ್ಲಿ ಮೋದಿ ಮತಬೇಟೆ : ಬೆಳಗಾವಿಯಿಂದ ಆರಂಭ

ಬೆಳಗಾವಿ: ಈಗಾಗಲೇ ಕರ್ನಾಟಕದಲ್ಲಿ ಮೊದಲ ಹಂತದ ಚುನಾವಣೆ ಮುಗಿದಿದ್ದು, ಎರಡನೇ ಹಂತದ ಚುನಾವಣೆಗೆ ಜನತೆ ರೆಡಿಯಾಗಿದ್ದಾರೆ. ಈಗಾಗಲೇ ಪಕ್ಷಗಳು ಸಹ ಪ್ರಚಾರ ಕಾರ್ಯದಲ್ಲಿ ತೊಡಗಿಕೊಂಡಿವೆ. ಇಂದು ಪ್ರಧಾನಿ ಮೋದಿ ರಾಜ್ಯಕ್ಕೆ ಆಗಮಿಸಿದ್ದು, ನಾಳೆಯೂ ರಾಜ್ಯ

ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ಕೇಸ್ : ವಿಶೇಷ ತನಿಖಾ ತಂಡ ರಚನೆಗೆ ಸಿಎಂ ನಿರ್ಧಾರ

ಬೆಂಗಳೂರು: ಹಾಸನದಲ್ಲಿ ಕಳೆದ ಕೆಲವು ದಿನಗಳಿಂದ ಪೆನ್ ಡ್ರೈವ್ ವಿಚಾರ ಸಾಕಷ್ಟು ಸದ್ದು ಮಾಡುತ್ತಿದೆ. ಆ ಪೆನ್ ಡ್ರೈವ್ ನಲ್ಲಿ ಮಹಿಳೆಯರ ಅಶ್ಲೀಲ ವಿಡಿಯೋ ಇರುವುದು ಬೆಳಕಿಗೆ ಬಂದಿದೆ. ಅದು ಒಂದಲ್ಲ ಎರಡಲ್ಲ ಸಾವಿರಾರು

ಶೇಂಗಾವನ್ನು ರಾತ್ರಿ ನೆನೆಸಿಟ್ಟು ಬೆಳಗ್ಗೆ ತಿಂದರೆ ಏನೆಲ್ಲಾ ಲಾಭ ಸಿಗುತ್ತೆ..?

ಕಡಲೆಕಾಯಿಯನ್ನು ಬಡವರ ಬಾದಾಮಿ ಅಂತಾನೇ ಎನ್ನುತ್ತಾರೆ. ಕಡಲೆಕಾಯಿ ಬೀಜದಲ್ಲಿ ಸಿಕ್ಕಾಪಟ್ಟೆ ಪ್ರೋಟೀನ್ ಅಂಶಗಳು ಇರುತ್ತೆ. ಹಸಿ ಕಡಲೆಕಾಯಿ ಬೀಜವನ್ನು ಹಾಗೇ ತಿನ್ನುವುದರಿಂದ ದೇಹಕ್ಕೆ ಬೇಕಾಗುವ ಪ್ರೋಟೀನ್ ಅಂಶ ಅತ್ಯಧಿಕವಾಗಿಯೇ ಸಿಗಲಿದೆ. ಇನ್ನು ಅಡುಗೆ ಮನೆಯಲ್ಲಂತು

error: Content is protected !!