Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಪ್ಲಾಸ್ಟಿಕ್ ಮಾಲಿನ್ಯ ಕೊನೆಗೊಳಿಸುವ ನಿಟ್ಟಿನಲ್ಲಿ ವಿಶೇಷ ಆಂದೋಲನ : ಜಿ.ಪಂ ಸಿಇಒ ಎಸ್.ಜೆ.ಸೋಮಶೇಖರ್

---Advertisement---

 

ಚಿತ್ರದುರ್ಗ. ಜೂ.03: ಪ್ರತಿ ವರ್ಷ ಜೂನ್ 05 ರಂದು ವಿಶ್ವ ಪರಿಸರ ದಿನ ಆಚರಿಸಲಾಗುತ್ತದೆ. “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ಎಂಬ ಘೋಷವಾಕ್ಯದೊಂದಿಗೆ ಪ್ಲಾಸ್ಟಿಕ್ ಮಾಲಿನ್ಯವನ್ನು ಸಂಪೂರ್ಣ ತಡೆಗಟ್ಟಬೇಕಾದ ಮಹತ್ವ ತಿಳಿಸುವ ಉದ್ದೇಶದೊಂದಿಗೆ ಈಗಾಗಲೇ ಕಳೆದ ಮೇ 22 ರಿಂದ ವಿಶೇಷ ಆಂದೋಲನ ಪ್ರಾರಂಭವಾಗಿದ್ದು, ಜೂನ್ 05 ರವರೆಗೆ ಎಲ್ಲ ಗ್ರಾಮ ಪಂಚಾಯಿತಿಗಳಲ್ಲಿ  ನಡೆಯಲಿದೆ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ತಿಳಿಸಿದ್ದಾರೆ.

ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆಯು ಸ್ವಚ್ಛ ಭಾರತ್ ಮಿಷನ್  (ಗ್ರಾ) ಯೋಜನೆಯ ಘನ ತ್ಯಾಜ್ಯ  ನಿರ್ವಹಣಾ ಪ್ರಯತ್ನಗಳ ಪ್ರಮುಖ ಭಾಗವಾಗಿದ್ದು, ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜಾಗೃತಿ ಅಭಿಯಾನದಲ್ಲಿ ಪ್ಲಾಸ್ಟಿಕ್ ತ್ಯಾಜ್ಯದಿಂದ ಆಗುವ ದುಷ್ಪಾರಿಣಾಮಗಳು ಹಾಗೂ ಪ್ಲಾಸ್ಟಿಕ್ ನಿರ್ಮೂಲನೆ ಮಾಡುವ ಸಂಬಂಧ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ವಿವಿಧ ಕಾರ್ಯಕ್ರಮ, ಚಟುವಟಿಕೆ, ಶ್ರಮದಾನ, ಸಂವಾದ ಸಭೆಗಳನ್ನು ಆಯೋಜನೆ ಮಾಡಿ ಜನರಲ್ಲಿ ಜಾಗೃತಿ ಮೂಡಿಸುವುದಾಗಿದೆ.
ಈ ವಿಶೇಷ ಆಂದೋಲನದಲ್ಲಿ ಜಲಮೂಲಗಳ ಸುತ್ತಮುತ್ತ ಸ್ವಚ್ಛಗೊಳಿಸುವುದು, ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳಲ್ಲಿ ಬ್ಲಾಕ್ ಸ್ಪಾಟ್ ಕಸ ಎಸೆಯುವ ಸ್ಥಳಗಳನ್ನು ಅದರಲ್ಲಿ ಪ್ಲಾಸ್ಟಿಕ್ ಮತ್ತು ಇತರೆ ವಸ್ತುಗಳನ್ನು ಎಸೆಯದಂತೆ ತಿಳಿಸುವುದು. ಏಕ ಬಳಕೆಯ ಪ್ಲಾಸ್ಟಿಕ್ ವಸ್ತುಗಳು, ಥರ್ಮಕೋಲ್, ಕ್ಯಾರಿ ಬ್ಯಾಗ್‍ಗಳು, ಪಾಲಿಥಿನ್ ಬ್ಯಾಗ್‍ಗಳು, ಶ್ಯಾಂಪು ಬಾಟಲಿಗಳು, ಇಯರ್ ಬಡ್ಸ್, ಪ್ಲಾಸ್ಟಿಕ್ ತಟ್ಟೆ, ಪ್ಲಾಸ್ಟಿಕ್ ರೂಪದ ಗಾಜುಗಳು, ಐಸ್‍ಕ್ರೀಂ ಕಡ್ಡಿಗಳು, ಆಹ್ವಾನ ಪತ್ರಿಕೆಗಳು ಸಿಗರೇಟ್ ಪ್ಯಾಕ್‍ಗಳು ಸೇರಿದಂತೆ ಇತ್ಯಾದಿಗಳು ಪ್ಲಾಸ್ಟಿಕ್ ವಸ್ತು ಮತ್ತು ಕವರ್‍ಗಳನ್ನು ಉತ್ಪಾದಿಸುವ, ಮಾರಾಟ ಮಾಡುವ ಗ್ರಾಹಕರಿಗೆ ನೀಡುವ  ಅಂಗಡಿ, ಹೋಟೆಲ್, ಬೇಕರಿ ಇತರೆ ವಾಣಿಜ್ಯ ಮಳಿಗೆಗಳಿಗೆ ತಪಾಸಣೆ ಮಾಡುವುದು. ಬಳಕೆಯಾದ ಪ್ಲಾಸ್ಟಿಕ್ ವಸ್ತುಗಳನ್ನು ಸೂಕ್ತ ವಿಲೇವಾರಿ ಮಾಡುವಂತೆ ಪ್ರೇರೆಪಿಸುವುದು. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಣೆ ಮಾಡಿ, ವಿಂಗಡಿಸಿ, ವೈಜ್ಞಾನಿಕ ವಿಲೇವಾರಿಗೆ ಕ್ರಮವಹಿಸಬೇಕು.

ಮಂಜೂರಾದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳ ಬಗ್ಗೆ ಗಮನಹರಿಸುವುದು, ಜಲಮೂಲಗಳನ್ನು ಪ್ಲಾಸ್ಟಿಕ್ ಹಾವಳಿಯಿಂದ ರಕ್ಷಣೆ ಮಾಡುವುದು, ಪ್ಲಾಸ್ಟಿಕ್ ವೈಜ್ಞಾನಿಕ ವಿಲೇವಾರಿಗೆ ಕ್ರಮವಹಿಸುವುದು ಹಾಗೂ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣಾ ಘಟಕಗಳ ಸ್ಥಾಪನೆಗೆ ಸ್ಥಳ ಗುರುತಿಸುವುದು ವಿಶೇಷ ಆಂದೋಲನ ಪ್ರಮುಖ ಹೆಜ್ಜೆಯಾಗಿದೆ.
ಜಾಗೃತಿ ಅಭಿಯಾನದಲ್ಲಿ ಗ್ರಾಮ ಪಂಚಾಯಿತಿಯ ಚುನಾಯಿತ ಪ್ರತಿನಿದಿಗಳು, ಯುವಕರು, ಮಹಿಳಾ ಸ್ವ ಸಹಾಯ ಸಂಘದ ಸದಸ್ಯರು, ಗ್ರಾಮ ನೀರು ಮತ್ತು ನೈರ್ಮಲ್ಯ ಸಮಿತಿ ಸದಸ್ಯರು ಮತ್ತು ಸ್ವಯಂ ಸೇವಕರು, ಗ್ರಾಮದ ಮುಖಂಡರು ಅಭಿಯಾನದಲ್ಲಿ ಭಾಗವಹಿಸಿ, ಪ್ಲಾಸ್ಟಿಕ್ ಮುಕ್ತ ಗ್ರಾಮಗಳನ್ನಾಗಿ ರೂಪಿಸಲು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಎಸ್.ಜೆ.ಸೋಮಶೇಖರ್ ಮನವಿ ಮಾಡಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment