Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ: ಮೊದಲ ದಿನವೇ 32,797 ಗಣತಿ ನಮೂನೆಗಳ ವಿತರಣೆ

---Advertisement---

 

ಚಿತ್ರದುರ್ಗ, ಜೂನ್. 30 : ಜಿಲ್ಲೆಯಲ್ಲಿ ಮಂಗಳವಾರದಿಂದ ಆರಂಭವಾಗಿರುವ ‘ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ (ಎಸ್ ಐ ಆರ್)-2026’ ಮನೆ-ಮನೆ ಭೇಟಿ ಅಭಿಯಾನದ ಮೊದಲ ದಿನವೇ ಜಿಲ್ಲೆಯಾದ್ಯಂತ 32,797 ಗಣತಿ ನಮೂನೆಗಳನ್ನು ವಿತರಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಮತದಾರರ ಪಟ್ಟಿಗಳ ವಿಶೇಷ ಸಮಗ್ರ ಪರಿಷ್ಕರಣೆ -2026ರ ಅಂಗವಾಗಿ ಮನೆ ಮನೆ ಭೇಟಿ ಕಾರ್ಯವು 2026ರ ಜೂನ್ 30 ರಿಂದ ಆರಂಭವಾಗಿದ್ದು, ಜುಲೈ 29 ರವರೆಗೆ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಮತಗಟ್ಟೆ ಮಟ್ಟದ ಅಧಿಕಾರಿಗಳು ಮನೆ ಮನೆಗೆ ತೆರಳಿ ಗಣತಿ ನಮೂನೆಗಳನ್ನು ವಿತರಿಸುವ ಕಾರ್ಯ ಪ್ರಾರಂಭಿಸಿದ್ದಾರೆ.

2026ರ ಜೂನ್ 16 ರಂತೆ ಚಿತ್ರದುರ್ಗ ಜಿಲ್ಲೆಯಲ್ಲಿ ಒಟ್ಟು 14,40,534 ಮತದಾರರಿದ್ದು, ಒಟ್ಟು 1,661 ಮತಗಟ್ಟೆ ಭಾಗಗಳಿವೆ. ಅಭಿಯಾನದ ಮೊದಲ ದಿನವಾದ ಜೂನ್ 30 ರಂದು ಜಿಲ್ಲೆಯಾದ್ಯಂತ ಒಟ್ಟು 32,797 ಗಣತಿ ನಮೂನೆಗಳನ್ನು ವಿತರಿಸಲಾಗಿದ್ದು, ಈ ಪೈಕಿ 2,525 ನಮೂನೆಗಳನ್ನು ಈಗಾಗಲೇ ಗಣಕೀಕರಣ ಮಾಡಲಾಗಿದೆ.

*ವಿಧಾನಸಭಾ ಕ್ಷೇತ್ರವಾರು ಗಣತಿ ನಮೂನೆಗಳ ವಿತರಣೆ:* ಮೊಳಕಾಲ್ಮೂರು ಕ್ಷೇತ್ರದಲ್ಲಿ 285 ಮತಗಟ್ಟೆ ಭಾಗಗಳಿದ್ದು, 2,51,685 ಮತದಾರರಿದ್ದಾರೆ. ಇಲ್ಲಿ ಮೊದಲ ದಿನ 17,558 ನಮೂನೆಗಳನ್ನು ವಿತರಿಸಿ, 716 ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ. ಚಳ್ಳಕೆರೆ ಕ್ಷೇತ್ರದಲ್ಲಿ 260 ಭಾಗಗಳು ಹಾಗೂ 2,25,619 ಮತದಾರರಿದ್ದು, 1,645 ನಮೂನೆಗಳನ್ನು ವಿತರಿಸಲಾಗಿದ್ದು, 182 ನಮೂನೆಗಳು ಗಣಕೀಕರಣಗೊಂಡಿವೆ. ಚಿತ್ರದುರ್ಗ ಕ್ಷೇತ್ರದಲ್ಲಿ 288 ಭಾಗಗಳು ಮತ್ತು 2,69,332 ಮತದಾರರಿದ್ದು, 2,223 ನಮೂನೆಗಳನ್ನು ವಿತರಿಸಿ, 350 ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಹಿರಿಯೂರು ಕ್ಷೇತ್ರದಲ್ಲಿ 287 ಭಾಗಗಳು ಹಾಗೂ 2,51,482 ಮತದಾರರಿದ್ದು, 3,579 ನಮೂನೆಗಳನ್ನು ವಿತರಿಸಲಾಗಿದ್ದು, 671 ನಮೂನೆಗಳು ಗಣಕೀಕರಣಗೊಂಡಿವೆ. ಹೊಸದುರ್ಗ ಕ್ಷೇತ್ರದಲ್ಲಿ 242 ಭಾಗಗಳು ಮತ್ತು 2,03,481 ಮತದಾರರಿದ್ದು, 3,882 ನಮೂನೆಗಳನ್ನು ವಿತರಿಸಿ, 379 ನಮೂನೆಗಳನ್ನು ಗಣಕೀಕರಣ ಮಾಡಲಾಗಿದೆ. ಕೊನೆಯದಾಗಿ ಹೊಳಲ್ಕೆರೆ ಕ್ಷೇತ್ರದಲ್ಲಿ 299 ಭಾಗಗಳು ಹಾಗೂ 2,38,935 ಮತದಾರರಿದ್ದು, 3,910 ನಮೂನೆಗಳನ್ನು ವಿತರಿಸಲಾಗಿದ್ದು, 227 ನಮೂನೆಗಳನ್ನು ಗಣಕೀಕರಣಗೊಳಿಸಲಾಗಿದೆ ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಟಿ.ವೆಂಕಟೇಶ್ ತಿಳಿಸಿದ್ದಾರೆ.

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now