Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಗ್ರಾಮೀಣ ಭಾಗದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು: ಶಾಸಕ ಕೆ.ಸಿ ವೀರೇಂದ್ರ ಪಪ್ಪಿ

---Advertisement---

 

ಚಿತ್ರದುರ್ಗ ನಂ, 24: ಕ್ಷೇತ್ರದ ಪ್ರತಿಯೊಂದು ಹಳ್ಳಿಗಳಲ್ಲಿಯೂ ಅಭಿವೃದ್ಧಿ ಕೆಲಸಗಳನ್ನು ಕೈಗೆತ್ತಿಕೊಳ್ಳಲು ಬದ್ಧನಾಗಿದ್ದು, ಗ್ರಾಮೀಣ ಭಾಗದ ಜನರ ಅಗತ್ಯಗಳಿಗೆ ಅನುಗುಣವಾಗಿ ಹಂತ ಹಂತವಾಗಿ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲಾಗುವುದು. ಸರ್ಕಾರದಿಂದ ಬಿಡುಗಡೆಯಾಗುವ ಅನುದಾನವನ್ನು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಂಡು ಕ್ಷೇತ್ರದ ಎಲ್ಲಾ ಗ್ರಾಮಗಳ ಸಮಗ್ರ ಅಭಿವೃದ್ಧಿಗೆ ಪ್ರಾಮಾಣಿಕವಾಗಿ ಶ್ರಮಿಸಲಾಗುವುದು ಎಂದು ಶಾಸಕ ಕೆ.ಸಿ. ವೀರೇಂದ್ರ ಪಪ್ಪಿ ತಿಳಿಸಿದರು.

ತಾಲೂಕಿನ ಲಕ್ಷ್ಮಿಸಾಗರ, ಬೊಮ್ಮೇನಹಳ್ಳಿ ಹಾಗೂ ಹೊಸೂರು ಗ್ರಾಮಗಳಲ್ಲಿ ಮಂಗಳವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು. ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೇ ಕ್ಷೇತ್ರದ ಪ್ರಗತಿಗೆ ಪ್ರಮುಖ ಆಧಾರವಾಗಿದೆ. ಹಳ್ಳಿಗಳಲ್ಲಿ ಉತ್ತಮ ರಸ್ತೆ, ಚರಂಡಿ ವ್ಯವಸ್ಥೆ, ಕುಡಿಯುವ ನೀರು ಸೇರಿದಂತೆ ಅಗತ್ಯ ಮೂಲಸೌಕರ್ಯಗಳನ್ನು ಕಲ್ಪಿಸುವುದು ನಮ್ಮ ಆದ್ಯತೆಯಾಗಿದೆ. ಗ್ರಾಮಸ್ಥರು ತಮ್ಮ ಊರಿನ ಸಮಸ್ಯೆಗಳನ್ನು ಗಮನಕ್ಕೆ ತಂದಾಗ ಅವುಗಳಿಗೆ ಹಂತ ಹಂತವಾಗಿ ಪರಿಹಾರ ಕಂಡುಕೊಳ್ಳುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದರು.

ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಗುಣಮಟ್ಟಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸರ್ಕಾರದ ಅನುದಾನ ಜನರ ತೆರಿಗೆ ಹಣವಾಗಿದ್ದು, ಪ್ರತಿಯೊಂದು ರೂಪಾಯಿಯೂ ಜನರ ಕಲ್ಯಾಣಕ್ಕೆ ಬಳಕೆಯಾಗಬೇಕು. ಕಾಮಗಾರಿಗಳನ್ನು ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸುವ ಮೂಲಕ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಕ್ಷೇತ್ರದ ನಗರ ಪ್ರದೇಶಗಳ ಜೊತೆಗೆ ಗ್ರಾಮೀಣ ಭಾಗಕ್ಕೂ ಸಮಾನ ಆದ್ಯತೆ ನೀಡಲಾಗುತ್ತಿದೆ. ಯಾವುದೇ ಗ್ರಾಮವನ್ನು ಅಭಿವೃದ್ಧಿಯಿಂದ ವಂಚಿತಗೊಳಿಸದೆ, ಜನರ ಬೇಡಿಕೆ ಹಾಗೂ ಅವಶ್ಯಕತೆಗಳನ್ನು ಪರಿಗಣಿಸಿ ಅಭಿವೃದ್ಧಿ ಯೋಜನೆಗಳನ್ನು ರೂಪಿಸಲಾಗುವುದು. ಜನಪ್ರತಿನಿಧಿಯಾಗಿ ಕ್ಷೇತ್ರದ ಜನರ ವಿಶ್ವಾಸಕ್ಕೆ ಧಕ್ಕೆಯಾಗದಂತೆ ನಿರಂತರವಾಗಿ ಜನರ ಸೇವೆಯಲ್ಲಿ ತೊಡಗಿಸಿಕೊಳ್ಳುವುದಾಗಿ ತಿಳಿಸಿದರು.

ಕಾಂಗ್ರೆಸ್ ಮುಖಂಡ ಕೊಕೊನಟ್ ಬಸವರಾಜ್ ಮಾತನಾಡಿ ಹಿರೇಗುಂಟನೂರು ಗ್ರಾಮದ ಸಮೀಪದಲ್ಲಿರುವ ಹೊಸೂರು ಗ್ರಾಮವು ಹುಟ್ಟಿನಿಂದಲೂ ಸಹಾ ಅಭಿವೃದ್ಧಿ ಕಾಣದೆ ಮರೀಚಿಕೆಯಾಗಿ ಉಳಿದಿತ್ತು, ಶಾಸಕರು ಚುನಾವಣಾ ಸಂದರ್ಭದಲ್ಲಿ ನೀಡಿದಂತಹ ಭರವಸೆಗಳನ್ನ ಪ್ರಾಮಾಣಿಕವಾಗಿ ನಿರ್ವಹಿಸಿದ್ದಾರೆ, ಹೊಸೂರು ಗ್ರಾಮಕ್ಕೆ ಅಗತ್ಯವಾಗಿ ಬೇಕಾಗಿರುವಂತ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರಲ್ಲಿ ಶಾಸಕರು ಮೊದಲಿಗರಾಗಿದ್ದಾರೆ, ಸುವ್ಯವಸ್ಥಿತ ಸಿಸಿ ರಸ್ತೆ, ಐ ಮಸ್ ಲೈಟ್, ಕುಡಿಯುವ ನೀರಿನ ಸಂಪರ್ಕವನ್ನ ಕಲ್ಪಿಸಿಕೊಟ್ಟಿದ್ದಾರೆ, ಅದರೊಟ್ಟಿಗೆ ಇತರೆ ಅಭಿವೃದ್ಧಿ ಕಾರ್ಯಗಳಿಗೆ ಮುಂದಿನ ಹಂತಗಳಲ್ಲಿ ಗ್ರಾಮಕ್ಕೆ ಮಾಡಿಕೊಡಲಾಗುವುದು ಎಂದು ಭರವಸೆಯನ್ನು ನೀಡಿದ್ದಾರೆ ಎಂದು ತಿಳಿಸಿದರು.

ಹಿರೇಗುಂಟನೂರು ಗ್ರಾಮದ ಬಳಿಯ ಹೊಸೂರು ಹಟ್ಟಿಗೆ ಅಭಿವೃದ್ಧಿಗೆ ಸುಮಾರು 40 ಲಕ್ಷ, ಲಕ್ಷ್ಮಿಸಾಗರ ಗ್ರಾಮದಿಂದ ರಾಷ್ಟ್ರೀಯ ಹೆದ್ದಾರಿ ವರೆಗೆ 80 ಲಕ್ಷ ವೆಚ್ಚದ ಸಿಸಿ ರಸ್ತೆ ಕಾಮಗಾರಿ, ಬೊಮ್ಮನಹಳ್ಳಿ ಗ್ರಾಮದ ಬಳಿ ಹೈಟೆಕ್ ಬಸ್ ನಿಲ್ದಾಣ 10 ಅನುದಾನದ ಭೂಮಿ ಪೂಜೆಯನ್ನು ನೆರವೇರಿಸಲಾಯಿತು.

ಈ ಸಂದರ್ಭದಲ್ಲಿ ತಹಶೀಲ್ದಾರ್ ಫಾತಿಮಾ, ತಾಲೂಕ್ ಕಾರ್ಯನಿರ್ವಹಣಾಧಿಕಾರಿ ಪ್ರಮೋದ್, ಇಂಜಿನಿಯರ್ ಶರತ್ ಹಾಗೂ ಮುಖಂಡರಾದ ಮುನ್ನ, ಮಂಜುನಾಥ, ನಾಗಣ್ಣ, ರಾಜುಕುಮಾರ್, ಪುನೀತ್, ದೇವರಾಜ್, ನಾಗೇಶ್, ಹನುಮಂತಪ್ಪ, ರೇವಣ್ಣಸಿದ್ದಪ್ಪ, ರಂಗಪ್ಪ ಮತ್ತು ಇತರರು ಉಪಸ್ಥಿತರಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

ಮಿಸ್ ಮಾಡ್ದೆ ಓದಿ