ಸುದ್ದಿಒನ್

ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು ಸಂಜೆ 7.10ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ.
ರೈಲು ಸಂಖ್ಯೆ 06568 ವಿಜಯಪುರ – ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.31ರಂದು ಸಂಜೆ 7.00 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.20ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ.

ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಬೀರೂರು, ಚಿಕ್ಕಜಾಜೂರು, ಚಿತ್ರದುರ್ಗ, ರಾಯದುರ್ಗ, ಬಳ್ಳಾರಿ ಕಂಟೋನ್ಮೆಂಟ್, ತೋರಣಗಲ್ಲು, ಹೊಸಪೇಟೆ, ಕೊಪ್ಪಳ, ಗದಗ, ಬದಾಮಿ, ಬಾಗಲಕೋಟೆ ಮತ್ತು ಆಲಮಟ್ಟಿ ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.
ಈ ರೈಲು 3 ಎಸಿ ಟು ಟೈರ್, 6 ಎಸಿ ತ್ರಿ ಟೈರ್, 10 ಸ್ಲೀಪರ್ ಕ್ಲಾಸ್, 2 ಜನರಲ್ ಸೆಕೆಂಡ್ ಕ್ಲಾಸ್ ಮತ್ತು 2 ಎಸ್ಎಲ್ಆರ್ / ಡಿ ಬೋಗಿಗಳನ್ನು ಒಳಗೊಂಡಿರುತ್ತದೆ.
ಕಾಯ್ದಿರಿಸುವಿಕೆ, ಆಗಮನ ಮತ್ತು ನಿರ್ಗಮನ ಸಮಯ ಮತ್ತು ಹೆಚ್ಚಿನ ವಿವರಗಳಿಗಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್ ಸೈಟ್ ಗೆ ಭೇಟಿ ನೀಡಿ ಅಥವಾ ಹತ್ತಿರದ ರೈಲ್ವೆ ಬುಕಿಂಗ್ ಕೌಂಟರುಗಳನ್ನು ಸಂಪರ್ಕಿಸಿ ಮಾಹಿತಿ ಪಡೆಯಬಹುದು ಎಂದು ರೈಲ್ವೆ ಇಲಾಖೆಯ ಪ್ರಕಟಣೆ ತಿಳಿಸಿದೆ.

