Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಂದ್ರಯಾನ -3 ಯಶಸ್ವಿಯಾಗಲೆಂದು  ಚಿತ್ರದುರ್ಗದ ಹಲವೆಡೆ ವಿಶೇಷ ಪೂಜೆ

Facebook
Twitter
Telegram
WhatsApp

 

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಚಿತ್ರದುರ್ಗ,(ಆ. 23) : ಇಸ್ರೋದ ಮಹತ್ವಾಕಾಂಕ್ಷಿ ಯೋಜನೆ ‘ಚಂದ್ರಯಾನ 3 ಯಶಸ್ವಿಯಾಗಲೆಂದು ಪ್ರಾರ್ಥಿಸಿ, ನಗರದ ಹಲವೆಡೆ ದೇವಾಲಯಗಳಲ್ಲಿ ವಿಶೇಷ ಪೂಜೆಯನ್ನು ನೆರವೇರಿಸಿದರು.

ನಗರ ಬಿಜೆಪಿ ಘಟಕದಪದಾಧಿಕಾರಿಗಳು ನಗರದ ನೀಲಕಂಠೇಶ್ವರ ದೇವಾಲಯದಲ್ಲಿ ಈಶ್ವರನಿಗೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಚಂದ್ರಯಾನದ ಯಶಸ್ಸಿಗೆ ಪ್ರಾರ್ಥಿಸಿದರು.

ಚಂದ್ರನ ಮೇಲೆ ಕಾಲಿಡಲಿರುವ ವಿಕ್ರಂ ಲ್ಯಾಂಡರ್ ಯಾವುದೇ ತೊಂದರೆ ಇಲ್ಲದೆ ಇಳಿಯಲಿ. ಚಂದ್ರಯಾನ ಯಶಸ್ವಿಯಾಗಿ ದೇಶದ ಸಾಧನೆ ಮತ್ತಷ್ಟು ಮುಗಿಲೆತ್ತರಕ್ಕಿರಲಿ, ಎಂದು ಬೇಡಿಕೊಂಡರು.

ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷರಾದ ಎ.ಮುರಳಿಧರ್, ನಗರದಾಧ್ಯಕ್ಷರಾದ ನವೀನ್ ಚಾಲುಕ್ಯ, ವಕ್ತಾರರಾದ ನಾಗರಾಜ್ ಬೇದ್ರೇ, ಶಿವಪ್ರಕಾಶ್ ದಗ್ಗೆ, ಯಶವಂತ, ಸಂಪತ್, ಭರತ್, ರಾಮು ಚಂದ್ರು, ಮಂಜುಳಮ್ಮ ಸೇರಿದಂತೆ ಇತರರು ಉಪಸ್ಥಿತರಿದ್ದರು.

ಇದೇ ದೇವಾಲಯದಲ್ಲಿ ಜೋಗಿಮಟ್ಟಿ ಗೆಳೆಯರ ಬಳಗದವತಿಯಿಂದ ಈಶ್ವರನಿಗೆ ಪೂಜೆಯನ್ನು ಸಲ್ಲಿಸಿ, ಚಂದ್ರಯಾನ ಯಶಸ್ವಿಗೆ ಭಗವಂತನಲ್ಲಿ ಪ್ರಾರ್ಥಿಸಲಾಯಿತು. ಈ ಸಂದರ್ಬದಲ್ಲಿ ಈಶ್ವರನ ಮೇಲೆ ಭಾರತದ ಭಾವುಟವನ್ನು ಇಡುವುದರ ಮೂಲಕ ಮತ್ತು ಭಾರತಾಂಬೆಯ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸುವುದರ ಮೂಲಕ ಯಶಸ್ವಿಗೆ ಪ್ರಾರ್ಥನೆ ಮಾಡಲಾಯಿತು.

ಈ ಸಂಧರ್ಭದಲ್ಲಿ ಗೀರೀಶ್, ಬಾಬು, ಎಚ್.ಎಸ್.ಟಿ.ಸ್ವಾಮಿ, ರವಿಕುಮಾರ್, ಮಂಜುನಾಥ್, ರಾಘವೇಂಧ್ರ, ಹರೀಶ್, ಗಣೇಶ್ ಸೇರಿದಂತೆ ಇತರರು ಭಾಗವಹಿಸಿದ್ದರು.

ವಿಶ್ವ ಹಿಂದೂ ಪರಿಷದ್ ಬಜರಂಗದಳ ನೇತೃತ್ವದಲ್ಲಿ ಆನೆ ಬಾಗಿಲು ಶ್ರೀ ಬಾಲಾಜಿ ದೇವಸ್ಥಾನದಲ್ಲಿ ಚಂದ್ರಯಾನ ಯಶಸ್ವಿಯಾಗಲೆಂದು ವಿಶೇಷ ಪೂಜೆಯನ್ನು ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ, ಹಿಂದೂ ಮಹಾಗಣಪತಿಯ ಅಧ್ಯಕ್ಷರಾದ ಜಿ.ಎಂ. ಸುರೇಶ್. ಸಮಿತಿಯ ಮಾರ್ಗದರ್ಶಕ ರಾದ ಬದ್ರಿನಾಥ್,  ಪಿ.ರುದ್ರೇಶ್, ಜಿಲ್ಲಾ ಕಾರ್ಯದರ್ಶಿ ವಿಶ್ವ ಹಿಂದೂ ಪರಿಷದ್, ಕೇಶವ್ ಜಿಲ್ಲಾ ಸಹ ಕಾರ್ಯದರ್ಶಿ , ಸಂದೀಪ್ ಜಿಲ್ಲಾ ಸಂಯೋಜಕರು ಬಜರಂಗದಳ, ಶ್ರೀನಿವಾಸ್ ನಗರ ಅಧ್ಯಕ್ಷರು ವಿಶ್ವ ಹಿಂದೂ ಪರಿಷದ್, ರಂಗಸ್ವಾಮಿ ನಗರ ಸಹ ಕಾರ್ಯದರ್ಶಿ ,ಶಶಿಧರ್ ಗ್ರಾಮಾಂತರ  ಅಧ್ಯಕ್ಷರು ವಿಶ್ವ ಹಿಂದೂ ಪರಿಷದ್, ಬಜರಂಗದಳ ಪ್ರಮುಖರಾದ ವಿಠಲ್,ರಾಜೇಶ್, ಕಿಶೋರ್,ಪ್ರಮೋದ್, ಸಂಪತ್ ಇದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸರ್ಕಾರಕ್ಕೆ ಸೆಡ್ಡು ಹೊಡೆದು ಎಕ್ಸ್‌ಪ್ರೆಸ್ ಲಿಂಕ್ ಕೆನಾಲ್ ಕಾಮಗಾರಿ ನಿಲ್ಲಿಸಿದ್ದೇವೆ : ಶಾಸಕ ಎಂ ಟಿ ಕೃಷ್ಣಪ್ಪ

  ವರದಿ ಮತ್ತು ಫೋಟೋ ಕೃಪೆ ರಂಗಸ್ವಾಮಿ, ಗುಬ್ಬಿ ಮೊ : 99019 53364 ಸುದ್ದಿಒನ್, ಗುಬ್ಬಿ, ಸೆಪ್ಟೆಂಬರ್. 13 : ತಾಲೂಕಿನ ಕಲ್ಲೂರು ಗ್ರಾಮದ ಕೆರೆ ಕೋಡಿಬಿದ್ದ ಹಿನ್ನೆಲೆ ತುರುವೇಕೆರೆ ಶಾಸಕ ಎಂ

ನಂದಿನಿ ಹಾಲಿನ ದರ ಹೆಚ್ಚಳ ಮಾಡ್ತೇವೆ.. ಆ ಹಣ ರೈತರಿಗೆ ಹೋಗುತ್ತೆ : ಸಿದ್ದರಾಮಯ್ಯ ಘೋಷಣೆ

  ರಾಮನಗರ: ಕಳೆದ ಕೆಲ ತಿಂಗಳ ಹಿಂದಷ್ಟೇ ನಂದಿನಿ ಹಾಲನ್ನು ಹೆಚ್ಚು ಮಾಡಿ, ಹಾಲಿನ ದರವನ್ನು ಹೆಚ್ಚಳ ಮಾಡಲಾಗಿತ್ತು. ಆದರೆ ಈಗ ಮತ್ತೆ ನಂದಿನಿ ದರವನ್ನು ಹೆಚ್ಚಳ ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ಅವರು

ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು : ರಂಗಪ್ಪ ರೆಡ್ಡಿ

  ಚಿತ್ರದುರ್ಗ. ಸೆ.13: ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ, ಅಸಹ್ಯ ಮನೋಭಾವ ಸಲ್ಲದು ಎಂದು ಎಂದು ಹಿರಿಯ ನಾಗರಿಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಂಗಪ್ಪ ರೆಡ್ಡಿ ಹೇಳಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ

error: Content is protected !!