ಚಿತ್ರದುರ್ಗ : ನಗರ ಪೊಲೀಸ್ ಠಾಣೆ ಆವರಣದಲ್ಲಿರುವ ಕಣಿವೆಮಾರಮ್ಮ ದೇವಸ್ಥಾನದಲ್ಲಿ ಮಂಗಳವಾರ ನಡೆದ ಕಾರ್ತಿಕೋತ್ಸವದ ಪ್ರಯುಕ್ತ ಕಣಿವೆಮಾರಮ್ಮನನ್ನು ಬಗೆ ಬಗೆಯ ಹೂವು, ಹಾರ ಹಾಗೂ ಬೆಳ್ಳಿಯ ಆಭರಣಗಳಿಂದ ವಿಶೇಷವಾಗಿ ಅಲಂಕರಿಸಲಾಗಿತ್ತು.
ನೂರಾರು ಭಕ್ತರು ಕಾರ್ತಿಕೋತ್ಸವದಲ್ಲಿ ಪಾಲ್ಗೊಂಡು ದೀಪ ಬೆಳಗುವ ಮೂಲಕ ಕಣಿವೆಮಾರಮ್ಮನಿಗೆ ಭಕ್ತಿ ಸಮರ್ಪಿಸಿದರು.