ಚಿತ್ರದುರ್ಗ : ವೈಕುಂಠ ಏಕಾದಶಿ ಪ್ರಯುಕ್ತ ಇಲ್ಲಿನ ತಿಪ್ಪಜ್ಜಿ ಸರ್ಕಲ್‌ನಲ್ಲಿರುವ ವೆಂಕಟೇಶ್ವರಸ್ವಾಮಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಏರ್ಪಡಿಸಲಾಗಿತ್ತು.
ಬೆಳಿಗ್ಗೆ ಆರು ಗಂಟೆಯಿಂದ ಸ್ವಾಮಿಗೆ ಪ್ರಾಕಾರೋತ್ಸವ, ಉತ್ತರ ಬಾಗಿಲು ಪೂಜೆ, ಅಲಂಕಾರ ಸೇವೆ ವಿಜೃಂಭಣೆಯಿಂದ ನಡೆಯಿತು. ಬಣ್ಣದ ಬಣ್ಣದ ಹೂಗಳಿಂದ ವೈಕುಂಠ ಧ್ವಾರವನ್ನು ಸಿಂಗರಿಸಲಾಗಿತ್ತು. ನೂರಾರು ಭಕ್ತರು ಸಾಲಾಗಿ ವೈಕುಂಠ ದ್ವಾರದ ಮೂಲಕ ಸಾಗಿ ವೆಂಕಟೇಶ್ವರಸ್ವಾಮಿಯ ದರ್ಶನ ಪಡೆದರು.
ಬಗೆ ಬಗೆಯ ಹೂವು ಹಾರ ಹಾಗೂ ಹಸಿರು ಪತ್ರೆಗಳಿಂದ ಸ್ವಾಮಿಯನ್ನು ಕಣ್ಮನಸೆಳೆಯುವಂತೆ ಅಲಂಕರಿಸಲಾಗಿತ್ತು.
ಭಕ್ತರಿಗೆ ಪ್ರಸಾದ ವಿನಿಯೋಗಿಸಲಾಯಿತು.
ವೆಂಕಟೇಶ್ವರಸ್ವಾಮಿ ದೇವಸ್ಥಾನದ ಕಾರ್ಯಕಾರಿ ಸಮಿತಿಯ ಕಾರ್ಯದರ್ಶಿ ಡಿ.ತಿಮ್ಮಣ್ಣ, ಜಂಟಿ ಕಾರ್ಯದರ್ಶಿ ಡಿ.ಎಸ್.ವೆಂಕಟೇಶ್, ಖಜಾಂಚಿ ಆರ್.ಯಾದವಮೂರ್ತಿ ಸೇರಿದಂತೆ ಭಕ್ತ ಮಂಡಳಿಯವರು ವೈಕುಂಠ ಏಕಾದಶಿಯಲ್ಲಿ ಹಾಜರಿದ್ದು, ಸ್ವಾಮಿಯ ಕೃಪೆಗೆ ಪಾತ್ರರಾದರು.
ಬೆಂಗಳೂರು: ರಾಜ್ಯಾದ್ಯಂತ ಮೈಕ್ರೋ ಫೈನಾನ್ಸ್ ಕಂಪನಿಗಳ ಕಿರುಕುಳ ಹೆಚ್ಚಾಗಿದೆ. ಇದರಿಂದ ಅದೆಷ್ಟೋ ಜನ ತಮ್ಮ ಪ್ರಾಣವನ್ನೇ ಕಳೆದುಕೊಂಡಿದ್ದಾರೆ. ಸಾಲ ಕೊಟ್ಟ…
ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 07 : ಇಂದಿನ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಶೇಂಗಾ, ಕಡಲೆ, ಮೆಕ್ಕೆಜೋಳ ಸೇರಿದಂತೆ ಇತರೆ…
ಬೆಂಗಳೂರು: ನಟ ಡಾಲಿ ಧನಂಜಯ್ ಮದುವೆ ಸಂಭ್ರಮದಲ್ಲಿದ್ದಾರೆ. ಚಿತ್ರದುರ್ಗದ ಅಳಿಯ ಬೇರೆ ಆಗ್ತಾ ಇದ್ದಾರೆ. ಧನ್ಯತಾ ಮೂಲತಃ ಚಿತ್ರದುರ್ಗದವರು. ಆದರೆ…
ಬೆಂಗಳೂರು: ಇಂದು ಹೈಕೋರ್ಟ್ ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದು ಸಿಎಂ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ನೀಡಿದೆ. ಈ…
ಈ ರಾಶಿಯವರಿಗೆ ಒಳ್ಳೆಯ ಉದ್ಯೋಗ ಅವಕಾಶಗಳು ಒದಗಿ ಬರಲಿವೆ, ಈ ರಾಶಿಯವರಿಗೆ ಉತ್ತಮ ಸಂಗಾತಿ ಸಿಗುವರು, ಶುಕ್ರವಾರದ ರಾಶಿ ಭವಿಷ್ಯ…
144 ವರ್ಷಗಳಿಗೊಮ್ಮೆ ಬರುವ ಮಹಾಕುಂಭಮೇಳದಲ್ಲಿ ಪುಣ್ಯ ಸ್ನಾನ ಮಾಡಿದರೆ ಕರ್ಮ ಕಳೆಯುತ್ತದೆ ಎಂದು ನಂಬಲಾಗಿದೆ. ಹೀಗಾಗಿ ಕೋಟ್ಯಾಂತರ ಮಂದಿ…