Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

---Advertisement---

ಅಕ್ಷರಧಾಮ ದೇವಾಲಯದಲ್ಲಿ ಋಷಿ ಸುನಕ್ ದಂಪತಿಗಳ ವಿಶೇಷ ಪೂಜೆ

---Advertisement---

 

ಜಿ20 ಶೃಂಗಸಭೆಯಲ್ಲಿ ಭಾಗವಹಿಸಲು ಭಾರತಕ್ಕೆ ಬಂದಿರುವ ಯುಕೆ ಪ್ರಧಾನಿ ರಿಷಿ ಸುನಕ್ ಮತ್ತು ಅಕ್ಷತಾ ಮೂರ್ತಿ ಭಾನುವಾರ ಬೆಳಗ್ಗೆ ದೆಹಲಿಯ ಅಕ್ಷರಧಾಮ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಜಿ20 ಶೃಂಗಸಭೆಯ ಎರಡನೇ ದಿನದ ಆರಂಭಕ್ಕೂ ಮುನ್ನ ರಿಷಿ ಸುನಕ್‌ದೇವಸ್ಥಾನಕ್ಕೆ ಭೇಟಿ ನೀಡುವ ಮುನ್ನ ಬಿಗಿ ಭದ್ರತೆ ಏರ್ಪಡಿಸಲಾಗಿತ್ತು. ಅಕ್ಷರಧಾಮದಲ್ಲಿ, ರಿಷಿ ಮತ್ತು ಅಕ್ಷತಾ ಪೂಜೆ ಸಲ್ಲಿಸಿದ ನಂತರ ದೇವಾಲಯದ ಮಾದರಿಯನ್ನು ಅವರಿಗೆ ಉಡುಗೊರೆಯಾಗಿ ನೀಡಲಾಯಿತು.

ನಾನು ಹಿಂದೂ ಎಂದು ಹೇಳಿಕೊಳ್ಳಲು ಹೆಮ್ಮೆಪಡುತ್ತೇನೆ ಎಂದು ಭಾರತಕ್ಕೆ ಬರುವ ಮುನ್ನ ಪ್ರತಿಕ್ರಿಯಿಸಿದ್ದ ರಿಷಿ, ಭಾರತಕ್ಕೆ ಬಂದ ನಂತರ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ. ಪ್ರಧಾನಿ ಮೋದಿಯವರ ಬಗ್ಗೆ ನನಗೆ ಅಪಾರ ಗೌರವವಿದೆ ಮತ್ತು ಜಿ 20 ಶೃಂಗಸಭೆಯನ್ನು ಅದ್ಧೂರಿಯಾಗಿ ಮಾಡಲು ಅವರಿಗೆ ಬೆಂಬಲಿಸುವುದಾಗಿ ರಿಷಿ ಸುನಕ್ ಹೇಳಿದ್ದಾರೆ.

ಈ ವರ್ಷ ಜನ್ಮಾಷ್ಟಮಿ ಆಚರಿಸಲು ಸಾಧ್ಯವಾಗಲಿಲ್ಲ ಎಂದು ರಿಷಿ ಸುನಕ್ ಬೇಸರ ವ್ಯಕ್ತಪಡಿಸಿದರು. ಭಾರತಕ್ಕೆ ಬಂದ ನಂತರ ದೇವಸ್ಥಾನಕ್ಕೆ ಭೇಟಿ ನೀಡುವುದಾಗಿ ಆಗಲೇ ಹೇಳಿದ್ದರು. ರಿಷಿ ಸುನಕ್ ಅವರು ಹಿಂದೂ ಎಂಬುದಕ್ಕೆ ಹೆಮ್ಮೆಪಡುತ್ತೇನೆ ಎಂದು ಹೇಳಿದರು. ಧಾರ್ಮಿಕ ನಂಬಿಕೆಗಳು ಬಹಳ ಮುಖ್ಯ.ದೇವರ ಮೇಲಿನ ನಂಬಿಕೆ ಒತ್ತಡದಿಂದ ಹೊರಬರಲು ಸಾಕಷ್ಟು ಶಕ್ತಿಯನ್ನು ನೀಡುತ್ತದೆ‌ ಎಂದರು.

ದೇವಸ್ಥಾನಕ್ಕೆ ಭೇಟಿ ನೀಡಿದ ನಂತರ, ರಿಷಿ ಸುನಕ್ ರಾಜ್‌ಘಾಟ್‌ಗೆ ತೆರಳಿದರು. ಜಿ20 ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಅವರು ಮಹಾತ್ಮ ಗಾಂಧಿ ಅವರ ಸಮಾಧಿಗೆ ಗೌರವ ಸಲ್ಲಿಸಿದರು.

ಕಳೆದ ವರ್ಷ ಅಕ್ಟೋಬರ್‌ನಲ್ಲಿ ಯುಕೆ ಪ್ರಧಾನಿಯಾಗಿ ರಿಷಿ ಸುನಕ್ ಅಧಿಕಾರ ವಹಿಸಿಕೊಂಡರು. ಅವರು ಪ್ರಧಾನಿಯಾಗಿ ಭಾರತಕ್ಕೆ ಭೇಟಿ ನೀಡುತ್ತಿರುವುದು ಇದೇ ಮೊದಲು. ಜಿ20 ಶೃಂಗಸಭೆಗಾಗಿ ಅವರು ಶುಕ್ರವಾರ ದೆಹಲಿಗೆ ಬಂದಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...