ಚಿತ್ರದುರ್ಗ, (ಫೆ.22) : ಚಿತ್ರದುರ್ಗ ಮತ್ತು ಹಿರಿಯೂರು ತಾಲ್ಲೂಕುಗಳಲ್ಲಿ ಬರುವ ಪ್ರಾಥಮಿಕ ಕ್ರಷಿ ಪತ್ತಿನ ಸಹಕಾರ ಸಂಘಗಳ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಿಗೆ ಒಂದು ದಿನದ ವಿಶೇಷ ತರಬೇತಿ ಕಾರ್ಯಕ್ರಮವೂ ಫೆ. 23ರ ಬುಧವಾರ ಬೆಳಿಗ್ಗೆ 10.30ಕ್ಕೆ ನಗರದ ಬಿ.ಎಲ್.ಗೌಡ ಲೇಟ್‍ನ ಸಹಕಾರ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಸಹಕಾರ ಯೂನಿಯನ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನಾಗರಾಜ್ ಪಾಟೀಲ್ ತಿಳಿಸಿದ್ದಾರೆ.
ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ಅಧ್ಯಕ್ಷರಾದ ಡಿ.ಸುಧಾಕರ್ ತರಬೇತಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಜಿಲ್ಲಾ ಸಹಕಾರ ಯೂನಿಯನ್ ನಿಯಮಿತದ ಅಧ್ಯಕ್ಷರಾದ ಬಿ.ವೀರಭದ್ರಪ್ಪ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಲಿದ್ದಾರೆ.
ಕರ್ನಾಟಕ ರಾಜ್ಯ ಮಹಾ ಮಂಡಳ ಹಾಗೂ ಜಿಲ್ಲಾ ಸಹಕಾರ ಯೂನಿಯನ್‍ನ ನಿರ್ದೆಶಕರು ಆರ್.ರಾಮರೆಡ್ಡಿ, ಎಸ್.ಆರ್.ಗಿರೀಶ್, ಯೂನಿಯನ್ ನ ಉಪಾಧ್ಯಕ್ಷರಾದ ಎನ್.ಮಂಜುನಾಥ್, ನಿರ್ದೇಶಕರುಗಳಾದ ಜಿಂಕಲ್ ಬಸವರಾಜು, ಹೆಚ್.ಎಂ ರೇವಣ್ಣ, ಬಿ.ಸಿ.ಸಂಜೀವಮೂರ್ತಿ, ಜಿ.ಈ ಅಜ್ಜಪ್ಪ, ಹೆಚ್.ಎನ್.ತಿಪ್ಪೇಸ್ವಾಮಿ ಜೆ. ಶಿವಪ್ರಕಾಶ್, ಹೆಚ್.ವಿ.ಪ್ರತಾಪ್ ಸಿಂಹ, ಕೆ.ಹೆಚ್.ಜಗನ್ನಾಥ್, ಶ್ರೀಮತಿ ರತ್ನಮ್ಮ, ಮಹಾಂತೇಶ್ ಟಿ. ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‍ನ ವ್ಯವಸ್ಥಾಪಕ ನಿರ್ದೆಶಕರಾದ ಇಲ್ಯಾಸ್ ಉಲ್ಲಾ ಷರೀಫ್, ಸಹಕಾರ ಸಂಘಗಳ ಉಪ ನಿಭಂದಕರಾದ ಆರ್.ಜೆ.ಕಾಂತರಾಜ್, ಸಹಕಾರ ಸಂಘಗಳ ಲೆಕ್ಕ ಪರಿಶೋಧನಾ ಇಲಾಖೆಯ ಉಪ ನಿರ್ದೇಶಕರಾದ ಕೆ.ಮಹೇಶ್ವರಪ್ಪ ಸಹಾಯಕ ನಿಬಂಧಕರಾದ ಶ್ರೀಮತಿ ಲಾವಣ್ಯ ಭಾಗವಹಿಸಲಿದ್ದಾರೆ.
ಸಹಕಾರ ಸಂಘಗಳ ಕಾಯ್ದೆ ಕಾನೂನು ತಿದ್ದುಪಡಿಯ ಮುಖ್ಯಾಂಶಗಳು, ಸಹಕಾರ ಸಂಘಗಳಲ್ಲಿ ಹಣಕಾಸು ನಿರ್ವಹಣೆ ಮತ್ತು ಲಾಭದಾಯಕತೆ ಹಾಗೂ ಆಡಳಿತ ಮಂಡಳಿ ನಿರ್ದೇಶಕರ ಜವಾಬ್ದಾರಿ ಮತ್ತು ಕರ್ತವ್ಯಗಳ ಬಗ್ಗೆ ಕೋಲಾರದ ಬಂಗಾರುಪೇಟೆಯ ಸಹಕಾರ ಅಭೀವೃದ್ದಿ ಅಧಿಕಾರಿ ಎಂ.ಜಗದೀಶ್ ಉಪನ್ಯಾಸ ನೀಡಲಿದ್ದಾರೆ.