Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಸದಾಶಿವ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಿ : ಕರ್ನಾಟಕ ದಲಿತ ಸಂಘರ್ಷ ಸಮಿತಿ ಆಗ್ರಹ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817

ಸುದ್ದಿಒನ್, ಚಿತ್ರದುರ್ಗ. ನ.29 : ಬೆಳಗಾವಿಯಲ್ಲಿ ನಡೆಯಲಿರುವ ಅಧಿವೇಶನದಲ್ಲಿ ನಿವೃತ್ತ ನ್ಯಾಯಮೂರ್ತಿ ಸದಾಶಿವ ಆಯೋಗದ ವರದಿ ಹಾಗೂ ಕಾಂತರಾಜ್ ಆಯೋಗದ ವರದಿಯನ್ನು ಶೀಘ್ರ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ದಲಿತ ಸಂಘರ್ಷ ಸಮಿತಿ (ಡಾ.ದಾದಾಸಾಹೇಬ್ ಎನ್.ಮೂರ್ತಿ ಸ್ಥಾಪಿತ) ವತಿಯಿಂದ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು.

ಪರಿಶಿಷ್ಟ ಜಾತಿಗೆ ಉದ್ಯೋಗ, ಶಿಕ್ಷಣದಲ್ಲಿ ಕಲ್ಪಿಸಿರುವ ಶೇಕಡ 15% ರಷ್ಟು ಮೀಸಲಾತಿ ಪರಿಶಿಷ್ಟ ಪಟ್ಟಿಯಲ್ಲಿರುವ 101 ಜಾತಿಗಳಿಗೆ ಸಮನಾಗಿ ಹಂಚಿಕೆಯಾಗಿಲ್ಲ. ಈ ತಾರತಮ್ಯ ನಿವಾರಣೆಗಾಗಿ ಕಳೆದ 30 ವರ್ಷಗಳಿಂದ ಸಂಘಟನೆಯ ಹೋರಾಟದ ಫಲವಾಗಿ 2005 ರಲ್ಲಿ ಎ.ಜೆ.ಸದಾಶಿವ ಆಯೋಗ ರಚನೆಯಾಗಿತ್ತು. ಆದರೆ ಆ ವರದಿಯನ್ನು ಜಾರಿಗೊಳಿಸದೆ ಸರ್ಕಾರಗಳು ನಿರಾಸಕ್ತಿ ತೋರುತ್ತಿವೆ. ಅದೇ ರೀತಿ ಕಾಂತರಾಜ್ ಆಯೋಗದ ವರದಿಯನ್ನು ಸದನದಲ್ಲಿ ಮಂಡಿಸಿ, ಚರ್ಚೆಗೆ ಅವಕಾಶವನ್ನು ನೀಡಬೇಕು, ಜನತೆಯಲ್ಲಿ ಮೂಡಿರುವ ಗೊಂದಲವನ್ನು ನಿವಾರಣೆ ಮಾಡಬೇಕಿದೆ. ವರದಿಯನ್ನು ಜಾರಿ ಮಾಡುವುದರ ಮೂಲಕ ಎಲ್ಲಾ ಜಾತಿಯ ಜನರ ಜನಸಂಖ್ಯಾ ಆಧರಿಸಿ ಮೀಸಲಾತಿ ಹಂಚಿಕೆ ಮಾಡುವಲ್ಲಿ ಸರ್ಕಾರ ಬದ್ಧತೆ ಪ್ರದರ್ಶಿಸಬೇಕು ಎಂದು ಆಗ್ರಹಿಸಿದ್ದಾರೆ.

ನಿ.ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಉಭಯ ಸದನಗಳಲ್ಲಿ ಮಂಡಿಸಿ, ಅಂಗೀಕರಿಸಿ ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದು. ಕೇಂದ್ರ ಸರ್ಕಾರ ಚಳಿಗಾಲದ ಅಧಿವೇಶನದಲ್ಲಿ ಪರಿಶಿಷ್ಟ ಒಳ ಮೀಸಲಾತಿ ವರ್ಗಿಕರಣಕ್ಕೆ ಮುಂದಾಗಬೇಕು. 2008 ರಲ್ಲಿ ಉಷಾ ಮೆಹ್ರ ಸಮಿತಿ ನೀಡಿರುವ ವರದಿಯಂತೆ ಸಂವಿಧಾನದ ಅನುಚ್ಛೇದ 341 ಕ್ಕೆ ತಿದ್ದುಪಡಿ. 341/3ನ್ನು ಸೇರಿಸಿ ಒಳಮೀಸಲಾತಿ ಅನುಷ್ಟಾನ ಮಾಡಿ ಸಂವಿಧಾನ ಷೆಡ್ಯೂಲ್-9 ರಲ್ಲಿ ಸೇರಿಸಬೇಕೆಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ.  ಸುಪ್ರಿಂ ಕೋರ್ಟ್ 7 ನ್ಯಾಯಾಧೀಶರ ಪೀಠದಲ್ಲಿರುವ ವಿವಿಧ ರಾಜ್ಯಗಳ ಒಳಮೀಸಲಾತಿ ಪ್ರಕರಣಗಳ ಪರವಾಗಿ ಕೇಂದ್ರ ಸರ್ಕಾರ ಬಲವಾಗಿ ವಾದ ಮಂಡಿಸಿ ಒಳ ಮೀಸಲಾತಿ ವರ್ಗಿಕರಿಸಬೇಕು. ಕಾಂತರಾಜ್ ಆಯೋಗದ ವರದಿಯನ್ನು ಸದನದಲ್ಲಿ ಚರ್ಚಿಸಿ ಅಂಗೀಕರಿಸಿ ಜನಸಂಖ್ಯೆ ಗನುಗುಣವಾಗಿ ಮೀಸಲಾತಿ ಹಂಚಿಕೆಯಾಗಲಿ. ನಿ.ನ್ಯಾ. ನಾಗಮೋಹನದಾಸ್ ಆಯೋಗದ ವರದಿಯನ್ನು ಯಥಾವತ್ತಾಗಿ ಅನುಷ್ಟಾನ ಮಾಡಿ ಸಂವಿಧಾನದ ಷೆಡ್ಯೂಲ್-9 ರಲ್ಲಿ ಸೇರಿಸಬೇಕು. ಮೀಸಲಾತಿ ಪ್ರಮಾಣವನ್ನು ಶೇಕಡ 75% ಕ್ಕೆ ಹೆಚ್ಚಿಸಬೇಕು. ರಾಜ್ಯ ಹಾಗೂ ಜಿಲ್ಲೆಯಾದ್ಯಂತ ಎಲ್ಲಾ ವರ್ಗದ ವಿದ್ಯಾರ್ಥಿ ನಿಲಯಗಳನ್ನು ಹೆಚ್ಚಿಸಬೇಕು. ಹಾಗೂ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನಗಳನ್ನು ಹೆಚ್ಚಿಸಬೇಕು ಎಂದು ಆಹ್ರಹಿಸಬೇಕು ಎಂದು ಆಗ್ರಹಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ಸಿ.ಹೆಚ್.ಮಂಜುನಾಥ, ಸಂಘಟನೆಯ ವಿಭಾಗೀಯ ಕಾರ್ಯದರ್ಶಿ ನೇಹ ಮಲ್ಲೇಶ್
ತಾಲ್ಲೂಕು ಅಧ್ಯಕ್ಷ ಡಿ.ವೀರಭದ್ರಪ್ಪ, ಅಲ್ಪಸಂಖ್ಯಾತರ ವಿಭಾಗದ ಅಧ್ಯಕ್ಷ ದಾದಾಪೀರ್, ಡಿ.ಶಿವಣ್ಣ, ಜಾಕೀರ್ ಹುಸೇನ್ ಸೇರಿದಂತೆ ಇತರರು ಭಾಗವಹಿಸಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now

Leave a Comment

🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...