Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಒತ್ತಡದಿಂದ ಹೊರಬರಬೇಕಾದರೆ ಆಧ್ಯಾತ್ಮದ ಪಾಲನೆ ಬಹಳ ಮುಖ್ಯ :  ಶ್ವೇತಾ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್
ಮೊ : 78998 64552

ಚಿತ್ರದುರ್ಗ, (ಡಿ.17): ಆಧುನಿಕ ಯುಗದಲ್ಲಿ ಎಲ್ಲರನ್ನು ಒಂದಲ್ಲ ಒಂದು ರೀತಿಯಲ್ಲಿ ಕಾಡುತ್ತಿರುವ ಒತ್ತಡದಿಂದ ಹೊರಬರಬೇಕಾದರೆ ಆಧ್ಯಾತ್ಮದ ಪಾಲನೆ ಬಹಳ ಮುಖ್ಯ ಎಂದು ಅಭಿಯಂತರರಾದ ಶ್ವೇತಾ ತಿಳಿಸಿದರು.

ರಿದ್ದಿ ಫೌಂಡೇಶನ್ ಟ್ರಸ್ಟ್ ವತಿಯಿಂದ ಪತ್ರಕರ್ತರ ಭವನದಲ್ಲಿ ಶನಿವಾರ ನಡೆದ ರಿದ್ದಿ ವಿಶ್ವಜಿತ್ ಅನುಭೂತಿ ಶಿಬಿರ ಉದ್ಘಾಟಿಸಿ ಒತ್ತಡ ಮುಕ್ತತೆ ಹಾಗೂ ಯಶಸ್ಸು ಎಂಬ ವಿಚಾರ ಸಂಕಿರಣ ಕುರಿತು ಮಾತನಾಡಿದರು.

ಕೆಲವೊಮ್ಮೆ ಜೀವನದಲ್ಲಿ ಎದುರಾಗುವ ಸಮಸ್ಯೆಗಳಿಂದ ಒತ್ತಡಕ್ಕೆ ಒಳಗಾಗಬೇಕಾಗುತ್ತದೆ. ಆಗ ನಾನಾ ರೀತಿಯ ಕಾಯಿಲೆಗಳು ಮನುಷ್ಯನನ್ನು ಕಾಡುವುದು ಸಹಜ. ವೈದ್ಯರ ಬಳಿ ಹೋಗಿ ತಪಾಸಣೆ ಮಾಡಿಸಿಕೊಂಡಾಗ ದೀರ್ಘ ಕಾಲದವರೆಗೆ ಮಾತ್ರೆ, ಔಷಧಿಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಮಾನಸಿಕ ಹಾಗೂ ದೈಹಿಕವಾಗಿ ಆರೋಗ್ಯದಿಂದ ಇರಬೇಕಾದರೆ ಮನಸ್ಸಿಗೆ ಶಾಂತಿ ಬೇಕು. ಅದಕ್ಕಾಗಿ ಆಧ್ಯಾತ್ಮದ ಕಡೆ ಒಲವು ಮೂಡಿಸಿಕೊಳ್ಳುವುದು ಒಳಿತು ಎಂದು ಹೇಳಿದರು.

ಪ್ರಕೃತಿ ಅನೇಕ ಸ್ವಾಭಾವಿಕ ಸಂಪತ್ತುಗಳನ್ನು ನೀಡಿದೆ. ಅವುಗಳ ಮಹತ್ವ ಅರಿತು ಸದುಪಯೋಗಪಡಿಸಿಕೊಂಡಾಗ ಒತ್ತಡರಹಿತ ಜೀವನ ಕಂಡುಕೊಳ್ಳಬಹುದು. ಜೀವನಕ್ಕೆ ಆಧ್ಯಾತ್ಮಿಕ ಬುನಾದಿ ಹಾಕಿದಾಗ ಮಾನಸಿಕವಾಗಿ ಆತ್ಮಸ್ಥೈರ್ಯ ತುಂಬುತ್ತದೆ. ಹಾಗಾಗಿ ರಿದ್ದಿ ಫೌಂಡೇಶನ್‍ನ ಶಿಬಿರವನ್ನು ಸದುಪಯೋಗಪಡಿಸಿಕೊಳ್ಳಿ ಎಂದು ವಿನಂತಿಸಿದರು.

ರಿದ್ದಿ ಫೌಂಡೇಶನ್ ಟ್ರಸ್ಟ್‍ನ ಕೋಶಾಧಿಕಾರಿ ಶ್ರೀಮತಿ ಶೋಭ ಅಧ್ಯಕ್ಷತೆ ವಹಿಸಿದ್ದರು.

ವಾಣಿಜ್ಯೋದ್ಯಮಿ ಸುರೇಶ್‍ಬಾಬು, ಚಿನ್ನ ಬೆಳ್ಳಿ ವರ್ತಕರ ಸಂಘದ ಅಧ್ಯಕ್ಷ ಕೆ.ಕೃಷ್ಣಪ್ಪ, ಪತ್ರಕರ್ತ ಟಿ.ತಿಪ್ಪೇಸ್ವಾಮಿ ಸಂಪಿಗೆ, ನವರತ್ನ ಸಗಟು ವ್ಯಾಪಾರಿ ಮುಖೇಶ್, ವಾಣಿಜ್ಯೋದ್ಯಮಿ ದರ್ಶನ್, ಪೊಲೀಸ್ ಅಧಿಕಾರಿ ರೇವತಿ ವೇದಿಕೆಯಲ್ಲಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಮೂರನೇ ಬಾರಿಗೆ ಸೋತ ನಿಖಿಲ್ ಕುಮಾರಸ್ವಾಮಿ…!

ಸುದ್ದಿಒನ್ | ಮಹಾರಾಷ್ಟ್ರ ಮತ್ತು ಜಾರ್ಖಂಡ್ ವಿಧಾನಸಭಾ ಚುನಾವಣೆಗಳ ಜೊತೆಗೆ ದೇಶಾದ್ಯಂತ ವಿವಿಧ ರಾಜ್ಯಗಳ 48 ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಿತು. ಕರ್ನಾಟಕದಲ್ಲಿ ಮೂರು ಸ್ಥಾನಗಳಿಗೆ ನಡೆದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಸಂಡೂರು ಕ್ಷೇತ್ರದಿಂದ ಅನ್ನಪೂರ್ಣ

ಮಹಾರಾಷ್ಟ್ರದಲ್ಲಿ ಯಾರಾಗಲಿದ್ದಾರೆ ನೂತನ ಸಿಎಂ ?

ಸುದ್ದಿಒನ್ | ಮಹಾರಾಷ್ಟ್ರದಲ್ಲಿ ಬಿಜೆಪಿ ಹೆಚ್ಚಿನ ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದೆ. ಹಾಗಾದರೆ ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿ ಯಾರಾಗಲಿದ್ದಾರೆ ಎಂಬ ಚರ್ಚೆ ನಡೆಯುತ್ತಿದೆ. ಈ ಬಗ್ಗೆ ಬಿಜೆಪಿ ಮುಖಂಡ ಪ್ರವೀಣ್ ದಾರೇಕರ್ ಪ್ರತಿಕ್ರಿಯಿಸಿದ್ದಾರೆ. ದೇವೇಂದ್ರ ಫಡ್ನವೀಸ್

ಸಿಎಂ ಸಿದ್ದರಾಮಯ್ಯ ಅವರ ಪ್ರಚಾರದಿಂದ ಗೆಲುವು : ಬಿಜೆಪಿ ಸೋಲಿನ ಬಗ್ಗೆ ಜನಾರ್ದನ ರೆಡ್ಡಿ ಫಸ್ಟ್ ರಿಯಾಕ್ಷನ್

ಬಳ್ಳಾರಿ: ಇಂದು ಸಂಡೂರು ವಿಧಾನಸಭಾ ಕ್ಷೇತ್ರದಲ್ಲೂ ಫಲಿತಾಂಶ ಬಂದಿದ್ದು, ಕಾಂಗ್ರೆಸ್ ಅಭ್ಯರ್ಥಿ ಅನ್ನಪುರ್ಣ ತುಕರಾಂ ಗೆಲುವು ಸಾಧಿಸಿದ್ದಾರೆ. ಸಂಜೆ ವೇಳೆಗೆ ಅಧಿಕೃತ ಅನೌನ್ಸ್ ಆಗಲಿದೆ. ಬಿಜೆಪಿ ಅಭ್ಯರ್ಥಿಯನ್ನು ಗೆಲ್ಲಿಸುವುದಕ್ಕಾಗಿ ಜನಾರ್ದನ ರೆಡ್ಡಿ ಅವರು ಸಾಕಷ್ಟು

error: Content is protected !!