Warning: Undefined array key "options" in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಓದು ಎಷ್ಟು ಮುಖ್ಯವೋ ಕ್ರೀಡೆಯೂ ಮಕ್ಕಳಿಗೆ ಅಷ್ಟೆ ಮುಖ್ಯ : ನ್ಯಾಯಾಧೀಶ ಗಿರೀಶ್ ಬಿ.ಕೆ.

Facebook
Twitter
Telegram
WhatsApp

 

ವರದಿ : ಕೆ.ಎಂ.ಮುತ್ತುಸ್ವಾಮಿ ಕಣ್ಣನ್

ಚಿತ್ರದುರ್ಗ, (ಡಿ.31): ಮಕ್ಕಳನ್ನು ಬರೀ ಓದಿಗಷ್ಟೆ ಸೀಮಿತಗೊಳಿಸದೆ ಕ್ರೀಡೆಯಲ್ಲಿಯೂ ಪಾಲ್ಗೊಳ್ಳುವಂತೆ ಪೋಷಕರು ಹಾಗೂ ಶಿಕ್ಷಕರುಗಳು ಪ್ರೋತ್ಸಾಹಿಸಬೇಕೆಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ನ್ಯಾಯಾಧೀಶರಾದ ಗಿರೀಶ್ ಬಿ.ಕೆ. ತಿಳಿಸಿದರು.

ಯುವ ನ್ಯಾಯವಾದಿ ಪ್ರತಾಪ್‌ಜೋಗಿ ತಮ್ಮ ಹುಟ್ಟುಹಬ್ಬದ ಅಂಗವಾಗಿ ತಮಟಕಲ್ಲಿನಲ್ಲಿರುವ ಶ್ರೀಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿರುವ ಸಮುದಾಯ ಭವನದಲ್ಲಿ ಶ್ರೀ ಆಂಜನೇಯಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಹಾಗೂ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮಕ್ಕಳಿಗೆ ಶುಕ್ರವಾರ ಹಮ್ಮಿಕೊಳ್ಳಲಾಗಿದ್ದ ಪುಸ್ತಕ, ಪೆನ್ನು, ಮಾಸ್ಕ್, ಕ್ರೀಡಾ ಸಾಮಾಗ್ರಿಗಳ ವಿತರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.

ಶಿಕ್ಷಣದ ಜೊತೆ ಮಕ್ಕಳು ಆಟಗಳಲ್ಲಿ ಪಾಲ್ಗೊಂಡಾಗ ದೈಹಿಕವಾಗಿ ಸದೃಢರಾಗಿರುತ್ತಾರೆ. ಓದು ಎಷ್ಟು ಮುಖ್ಯವೋ ಕ್ರೀಡೆಯೂ ಮಕ್ಕಳಿಗೆ ಅಷ್ಟೆ ಮುಖ್ಯ. ದಿನದ ೨೪ ಗಂಟೆಯೂ ಮಕ್ಕಳನ್ನು ಓದು ಓದು ಎಂದು ಪೀಡಿಸುತ್ತಿದ್ದರೆ ಮಾನಸಿಕ ರೋಗಿಗಳಾಗುವ ಸಾಧ್ಯತೆಗಳಿರುತ್ತವೆ. ಆರೋಗ್ಯಕರ ದೇಹದಲ್ಲಿ ಸದೃಢವಾದ ಮನಸ್ಸಿರುತ್ತದೆ. ಅದಕ್ಕಾಗಿ ನಾಲ್ಕು ಗಂಟೆ ಓದಿದರೆ ನಾಲ್ಕು ಗಂಟೆಗಳ ಕಾಲ ಆಟಗಳಲ್ಲಿ ತೊಡಗಬೇಕು. ಇದಕ್ಕೆ ಶಿಕ್ಷಕರ ಹಾಗೂ ಪೋಷಕರುಗಳ ಸಹಕಾರ ಮುಖ್ಯ ಎಂದು ಹೇಳಿದರು.

ಹಿರಿಯ ನ್ಯಾಯವಾದಿ ಬಿ.ಕೆ.ರಹಮತ್‌ವುಲ್ಲಾ ಮಾತನಾಡಿ ಇದು ಸ್ಪರ್ಧಾತ್ಮಕ ಯುಗವಾಗಿರುವುದರಿಂದ ಮಕ್ಕಳು ಓದಿನ ಕಡೆ ಹೆಚ್ಚು ಗಮನ ಕೊಡಬೇಕು. ಚಿಕ್ಕಂದಿನಲ್ಲಿಯೇ ಕಠಿಣ ಪರಿಶ್ರಮ ಪಟ್ಟಾಗ ಜೀವನದಲ್ಲಿ ಮುಂದೆ ಉನ್ನತ ಹುದ್ದೆಗಳನ್ನು ಗಳಿಸಬಹುದು. ಶಿಕ್ಷಣದ ಜೊತೆ ಸಂಸ್ಕಾರ, ಸಂಸ್ಕೃತಿ ಅತ್ಯವಶ್ಯಕವಾಗಿ ಬೇಕು. ವಿಜ್ಞಾನ ಮತ್ತು ತಂತ್ರಜ್ಞಾನ ಯುಗದಲ್ಲಿ ಮೊಬೈಲ್ ಎಷ್ಟು ಉಪಯೋಗವೋ ಅಷ್ಟೆ ಅಪಾಯಕಾರಿಯೂ ಹೌದು. ಅದಕ್ಕಾಗಿ ಮಕ್ಕಳು ಅವಶ್ಯಕತೆಗೆ ತಕ್ಕಂತೆ ಮೊಬೈಲ್ ಬಳಸುವುದು ಉತ್ತಮ ಎಂದು ತಿಳಿಸಿದರು.
ಲೋಕಾಯುಕ್ತ ಪಬ್ಲಿಕ್ ಪ್ರಾಸಿಕ್ಯೂಟರ್ ಮಲ್ಲೇಶಪ್ಪ ಮಾತನಾಡಿ ಮಕ್ಕಳು ಜೀವನದಲ್ಲಿ ಭವ್ಯವಾದ ಭವಿಷ್ಯ ರೂಪಿಸಿಕೊಳ್ಳಬೇಕಾದರೆ ಶಿಕ್ಷಣದಿಂದ ಮಾತ್ರ ಸಾಧ್ಯ. ಸಮಾಜವನ್ನು ಸರಿದಾರಿಗೆ ತರಬೇಕಾದರೆ ಮೊದಲು ಶಿಕ್ಷಣವಂತರಾಗಬೇಕು. ಸರ್ಕಾರಿ ಶಾಲೆಗಳಲ್ಲಿ ಮಕ್ಕಳಿಗೆ ಸಾಕಷ್ಟು ಸೌಲತ್ತುಗಳನ್ನು ನೀಡಲಾಗುತ್ತಿದೆ. ಎಲ್ಲವನ್ನು ಬಳಸಿಕೊಂಡು ಶಿಕ್ಷಣವಂತರಾಗಬೇಕೆAದು ಹೇಳಿದರು.

ಶ್ರೀಕೃಷ್ಣರಾಜೇಂದ್ರ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ತಿಪ್ಪೇಸ್ವಾಮಿ ಮಾತನಾಡಿ ಶ್ರೀಆಂಜನೇಯಸ್ವಾಮಿ ಗ್ರಾಮಾಂತರ ಪ್ರೌಢಶಾಲೆ ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮಕ್ಕಳಿಗೆ ತಲಾ ನಾಲ್ಕುನೂರು ಪುಸ್ತಕಗಳನ್ನು ನೀಡಲಾಗುವುದು. ಪಠ್ಯ ಪುಸ್ತಕಗಳ ಜೊತೆ ಒಳ್ಳೊಳ್ಳೆ ಪುಸ್ತಕಗಳನ್ನು ಓದಿದಾಗ ಹಿರಿಯರ ವಿಚಾರಗಳು ಗೊತ್ತಾಗುತ್ತದೆ. ಇದರಿಂದ ಜ್ಞಾನ ವೃದ್ದಿಯಾಗಲಿದೆ. ಕಥೆ, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗುವ ಪುಸ್ತಕಗಳನ್ನು ನೀಡಿದ್ದೇವೆ. ಚಿಕ್ಕಂದಿನಲ್ಲಿಯೇ ಪುಸ್ತಕಗಳನ್ನು ಓದುವ ಹವ್ಯಾಸ ರೂಢಿಸಿಕೊಂಡರೆ ಜೀವನದಲ್ಲಿ ಉತ್ತಮ ಭವಿಷ್ಯವನ್ನು ಕಂಡುಕೊಳ್ಳಬಹುದು ಎಂದರು.
ಯುವ ನ್ಯಾಯವಾದಿ ಪ್ರತಾಪ್‌ಜೋಗಿ ಮಾತನಾಡಿ ಖಾಸಗಿ ಶಾಲೆಗಳಿಗಿಂತ ಸರ್ಕಾರಿ ಹಾಗೂ ಅನುದಾನ ರಹಿತ ಶಾಲಾ ಮಕ್ಕಳಿಗೆ ಹೆಚ್ಚಿನ ಸೌಲಭ್ಯಗಳನ್ನು ನೀಡಿದಾಗ ನಿಜವಾಗಿಯೂ ಉತ್ತಮ ಅಂಕಗಳನ್ನು ಗಳಿಸುವುದರಲ್ಲಿ ಅನುಮಾನವಿಲ್ಲ. ಖಾಸಗಿ ಶಾಲೆಯ ಮಕ್ಕಳಿಗಿಂತ ಸರ್ಕಾರಿ ಶಾಲೆಯ ಮಕ್ಕಳು ಹೆಚ್ಚು ಪ್ರತಿಭಾವಂತರಿರುತ್ತಾರೆ. ಗುರುತಿಸಿ ಪ್ರೋತ್ಸಾಹಿಸಬೇಕು. ಈಗಾಗಲೆ ಎರಡು ವರ್ಷಗಳ ಕಾಲ ಕೋವಿಡ್ ಎಷ್ಟು ಬಾಧಿಸಿತು ಎನ್ನುವುದು ಎಲ್ಲರಿಗೂ ಗೊತ್ತಿದೆ. ಅದಕ್ಕಾಗಿ ಪ್ರತಿಯೊಬ್ಬರು ಕಡ್ಡಾಯವಾಗಿ ಮಾಸ್ಕ್ ಧರಿಸಿ, ಸ್ಯಾನಿಟೈಸ್ ಬಳಸಿ ಸಾಮಾಜಿಕ ಅಂತರವನ್ನು ಕಾಪಾಡಿಕೊಂಡು ಕೋವಿಡ್ ವಿರುದ್ದ ಜಾಗೃತರಾಗಿರುವಂತೆ ಮಕ್ಕಳಲ್ಲಿ ಮನವಿ ಮಾಡಿದರು.

ಯುವ ವಕೀಲ ಅಶೋಕ್‌ಬೆಳಗಟ್ಟ ಮಾತನಾಡುತ್ತ ಪುಸ್ತಕಗಳನ್ನು ಓದುವುದರಿಂದ ವಿದ್ಯಾರ್ಥಿಗಳು ಜ್ಞಾನವನ್ನು ಹೆಚ್ಚಿಸಿಕೊಳ್ಳಬಹುದು. ಕಷ್ಟಪಟ್ಟು ಓದಿದರೆ ಜೀವನದಲ್ಲಿ ಉನ್ನತ ಹುದ್ದೆಗಳನ್ನು ಗಳಿಸಬಹುದು. ಶಿಕ್ಷಣದ ಜೊತೆ ಸಂಸ್ಕಾರ, ಶಿಸ್ತು, ಗುರು-ಹಿರಿಯರನ್ನು ಗೌರವಿಸುವುದನ್ನು ಕಲಿಯಬೇಕೆಂದು ಮಕ್ಕಳಿಗೆ ಸಲಹೆ ನೀಡಿದರು.

ತಮಟಕಲ್ಲು ಗ್ರಾಮ ಪಂಚಾಯಿತಿ ಸದಸ್ಯ ಸಣ್ಣಸ್ವಾಮಿ, ಮುಖ್ಯ ಶಿಕ್ಷಕ ಗಿರೀಶ್, ಶಿಕ್ಷಕಿ ಅಶ್ವಿನಿ, ಎಂ.ಗಿರಿಸುವರ್ಣಮ್ಮ, ನಯನಜೋಗಿ, ಸಮಾಜಸೇವಾ ಕಾರ್ಯಕರ್ತೆ ಮಮತ ವೇದಿಕೆಯಲ್ಲಿದ್ದರು.
ಎರಡು ಶಾಲೆಗಳ ಶಿಕ್ಷಕರು ಹಾಗೂ ಮಕ್ಕಳು ಈ ಸಂದರ್ಭದಲ್ಲಿ ಹಾಜರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಚಳ್ಳಕೆರೆ | ಚುನಾವಣಾ ಕರ್ತವ್ಯ ನಿರತ ಎಪಿಆರ್ ಓ ಶಿಕ್ಷಕಿ ಸಾವು

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ಏಪ್ರಿಲ್.26 : ಲೋಕಸಭಾ ಚುನಾವಣೆ ಕರ್ತವ್ಯ ವೇಳೆ ಹೃದಯಘಾತದಿಂದ  ಕರ್ತವ್ಯ ನಿರತ  ಎಪಿಆರ್ ಓ  ಶಿಕ್ಷಕಿ ಯಶೋದಮ್ಮ(55)

ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ : ಮತದಾರರಿಂದ ಉತ್ತಮ ಸ್ಪಂದನೆ : ಯಾವ ಕ್ಷೇತ್ರದಲ್ಲಿ ಎಷ್ಟು ಮತದಾನವಾಗಿದೆ ?

  ಚಿತ್ರದುರ್ಗ .26: ಚಿತ್ರದುರ್ಗ ಲೋಕಸಭಾ ಕ್ಷೇತ್ರದಲ್ಲಿ ಬಿರುಸಿನ ಮತದಾನ ದಾಖಲಾಗಿದೆ‌. ಬೆಳಗಿನ 11 ಗಂಟೆವರೆಗೆ ಶೇ 21.75 % ಮತದಾನ ದಾಖಲಾಗಿದೆ. ವಿಧಾನ ಸಭಾ ಕ್ಷೇತ್ರವಾರು ಚಳ್ಳಕೆರೆ- 22.55%, ಚಿತ್ರದುರ್ಗ-23.73%,ಹಿರಿಯೂರು-20.79% , ಹೊಳಲ್ಕೆರೆ

ಚಳ್ಳಕೆರೆಯಲ್ಲಿ ಮತದಾನ ಮಾಡಿದ ಶತಾಯುಷಿ

ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಿತ್ರದುರ್ಗ, ಏಪ್ರಿಲ್. 26 : ರಾಜ್ಯದಲ್ಲಿ ಇಂದು ಲೋಕಸಭಾ ಚುನಾವಣೆ  ಮತದಾನ ಪ್ರಕ್ರಿಯೆ ಭರದಿಂದ ಸಾಗುತ್ತಿದೆ. ಯುವಕ –

error: Content is protected !!