Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಮಾನಸಿಕ ಮತ್ತು ದೈಹಿಕ ಸಾಮರ್ಥ್ಯ ಹೆಚ್ಚಿಸಲು ಕ್ರೀಡೆ ಸಹಕಾರಿ : ಪಿ.ಜಿ.ಆರ್.ಸಿಂಧ್ಯಾ

---Advertisement---

 

ವರದಿ ಮತ್ತು ಫೋಟೋ ಕೃಪೆ
ಕೆ.ಎಂ.ಮುತ್ತುಸ್ವಾಮಿ ಕಣ್ಣನ್,
ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ಮಾನಸಿಕ ಮತ್ತು ದೈಹಿಕ ಸಾಮಥ್ರ್ಯವನ್ನು ಹೆಚ್ಚಿಸಲು ಜಲ ಸಾಹಸ ಕ್ರೀಡೆ ತುಂಬಾ ಸಹಕಾರಿ ಎಂದು ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಮುಖ್ಯ ಆಯುಕ್ತ ಪಿ.ಜಿ.ಆರ್.ಸಿಂಧ್ಯಾ ಹೇಳಿದರು.

 

ಜನರಲ್ ತಿಮ್ಮಯ್ಯ ಸಾಹಸ ಅಕಾಡಮಿ ಮತ್ತು ರಾಜ್ಯ ಸ್ಕೌಟ್ಸ್ ಮತ್ತು ಗೈಡ್ಸ್ ಸಹಯೋಗದೊಂದಿಗೆ ಹಿರಿಯೂರಿನ ವಾಣಿವಿಲಾಸಸಾಗರದಲ್ಲಿ ರೋವರ್ಸ್ ಮತ್ತು ರೇಂಜರ್ಸ್‍ಗಳಿಗೆ ಏರ್ಪಡಿಸಲಾಗಿದ್ದ ಜಲ ಸಾಹಸ ಕ್ರೀಡಾ ತರಬೇತಿ ಶಿಬಿರ ಉದ್ಘಾಟಿಸಿ ಮಾತನಾಡಿದರು.

 

ಪ್ರಕೃತಿ ಸೌಂದರ್ಯವನ್ನು ಅನುಭವಿಸುತ್ತ ಧೈರ್ಯ, ಆತ್ಮವಿಶ್ವಾಸವನ್ನು ವಿದ್ಯಾರ್ಥಿಗಳು ಹೆಚ್ಚಿಸಿಕೊಳ್ಳಬೇಕು. ನೀರು ಕೇವಲ ಜೀವನದ ಮೂಲಾಧಾರವಲ್ಲ. ಅದು ಒಂದು ಬಗೆಯ ಸಾಹಸ ಮತ್ತು ಉತ್ಸಾಹ. ಯುವ ಜನಾಂಗದಲ್ಲಿ ಅತ್ಯಂತ ಜನಪ್ರಿಯತೆ ಗಳಿಸುತ್ತಿರುವ ಜಲಸಾಹಸ ಕ್ರೀಡೆ ಇಂದಿನ ದಿನಗಳಲ್ಲಿ ಅತ್ಯಗತ್ಯವಾದುದು ಎಂದರು.

 

ಸ್ಕೌಟ್ಸ್ ಮತ್ತು ಗೈಡ್ಸ್ ಮುಖ್ಯ ಆಯುಕ್ತರಾದ ಡಿ.ಡಿ.ಪಿ.ಐ. ಮಂಜುನಾಥ್ ಮಾತನಾಡಿ ವಿದ್ಯಾರ್ಥಿಗಳು ಜಲಸಾಹಸದಲ್ಲಿ ತೊಡಗುವಾಗ ಸುರಕ್ಷತೆ ಕಡೆ ಹೆಚ್ಚಿನ ಗಮನ ಕೊಡಬೇಕು. ಶಾಲೆಯ ಪಠ್ಯಗಳಲ್ಲಿ ಸಿಗದಂತ ಅನುಭವ ಪಠ್ಯೇತರ ಚಟುವಟಿಕೆಗಳಲ್ಲಿ ದೊರಕುತ್ತದೆ. ಸ್ಪರ್ಧಾತ್ಮಕ ಯುಗದಲ್ಲಿ ಎಲ್ಲರೂ ನೀಟ್ ಪರೀಕ್ಷೆಗೆ ಓದುತ್ತಾರೆ. ಆದರೆ ನೀಟಾಗಿ ಬದುಕುವ ಸಂಸ್ಕøತಿಯನ್ನು ಮರೆಯುತ್ತಿದ್ದಾರೆ. ಯುವ ಪೀಳಿಗೆಗೆ ಇಂತಹ ಕ್ರೀಡೆಗಳು ಅತಿ ಮುಖ್ಯ ಎಂದರು.

 

ಸ್ಕೌಟ್ಸ್ ಮತ್ತು ಗೈಡ್ಸ್ ಜಿಲ್ಲಾ ಕಾರ್ಯದರ್ಶಿ ಬಿ.ಎ.ಲಿಂಗಾರೆಡ್ಡಿ ಮಾತನಾಡುತ್ತ ಪ್ರತಿಯೊಬ್ಬರು ಧೈರ್ಯವನ್ನು ಹೆಚ್ಚಿಸಿಕೊಂಡಾಗ ಜೀವನದಲ್ಲಿ ಏನನ್ನಾದರೂ ಸಾಧಿಸಬಹುದು. ಈಜು ತಜ್ಞರ ಮಾರ್ಗದರ್ಶನದಲ್ಲಿ ಜಲ ಸಾಹಸ ಕ್ರೀಡೆಯ ತರಬೇತಿ ಪಡೆದಾಗ ಅತ್ಯುತ್ತಮ ಅನುಭವವಾಗುತ್ತದೆ. ಜಿಲ್ಲೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಜಲ ಸಾಹಸ ಕ್ರೀಡಾ ತರಬೇತಿಯಲ್ಲಿ ಪಾಲ್ಗೊಳ್ಳಬೇಕೆಂದರು.
ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿ ಮಹಮದ್ ಮೊಹಸಿನ್, ದೀಪಿಕ, ಯೋಗರಾಜ್, ಪಿ.ವೈ.ದೇವರಾಜ್‍ಪ್ರಸಾದ್, ಕೆ.ಬಿ.ಮಲ್ಲೇಶಪ್ಪ ಮತ್ತಿತರರು ಜಲ ಸಾಹಸ ಕ್ರೀಡೆಯಲ್ಲಿ ಪಾಲ್ಗೊಂಡಿದ್ದರು.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now
🏫 ಅಡ್ಮಿಷನ್ ಓಪನ್
🔒

ಇಂಡಿಯನ್ ಇಂಟರ್ ನ್ಯಾಷನಲ್ ಸ್ಕೂಲ್

ಸ್ವಾಗತ...