ಸಮಸ್ಯೆಗಳು ಎದುರಾದಾಗ ಕ್ರೀಡಾ ಮನೋಭಾವದಿಂದ  ಮಕ್ಕಳಲ್ಲಿ ಧೈರ್ಯ ಮೂಡುತ್ತದೆ : ಕೆ. ಮಂಜುನಾಥ್

2 Min Read

 

             ವರದಿ ಮತ್ತು ಫೋಟೋ : ಸುರೇಶ್ ಪಟ್ಟಣ್,                         ಮೊ : 87220 22817

ಚಿತ್ರದುರ್ಗ,(ಸೆ.22) : ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ನೀಡುವ ಆತ್ಮಸ್ಥೈರ್ಯ,  ಸಮಸ್ಯೆಗಳು  ಎದುರಾದಾಗ ಅವುಗಳನ್ನು ಕ್ರೀಡಾ ಮನೋಭಾವದಿಂದ ಎದುರಿಸುವ ಧೈರ್ಯ ಮಕ್ಕಳಲ್ಲಿ ಮೂಡುತ್ತದೆ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ಶಾಖೆಯ ಅಧ್ಯಕ್ಷರಾದ ಕೆ ಮಂಜುನಾಥ್ ತಿಳಿಸಿದರು.

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್ ಮತ್ತು ಸಾರ್ವಜನಿಕ ಶಿಕ್ಷಣ ಇಲಾಖೆ ಹಾಗೂ ಹಿರಿಯೂರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಇವರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಹಿರಿಯೂರು ತಾಲ್ಲೂಕು ಧರ್ಮಪುರ ಹೋಬಳಿ ಮಟ್ಟದ ಪ್ರೌಢಶಾಲೆಗಳ ಪ್ರತಿಭಾ ಕಾರಂಜಿ ಮತ್ತು ಸಾಂಸ್ಕೃತಿಕ ಉತ್ಸವ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಭಾಗದಲ್ಲಿ ಇಂತಹ ಕಾರ್ಯಕ್ರಮಗಳು ಆಯೋಜನೆ ಆಗುವುದರಿಂದ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಸ್ಪರ್ಧಾತ್ಮಕ ಯುಗದಲ್ಲಿ ಪೈಪೋಟಿ ನೀಡುವ ಆತ್ಮಸ್ಥೈರ್ಯ,  ಸಮಸ್ಯೆಗಳು  ಎದುರಾದಾಗ ಅವುಗಳನ್ನು ಕ್ರೀಡಾ ಮನೋಭಾವದಿಂದ ಎದುರಿಸುವ ಧೈರ್ಯ ಮಕ್ಕಳಲ್ಲಿ ಮೂಡುತ್ತದೆ. ಇಂತಹ ಕಾರ್ಯಕ್ರಮಗಳಿಗೆ ಮಕ್ಕಳನ್ನು ಉರಿದುಂಬಿಸಿ ಪ್ರೋತ್ಸಾಹಿಸಿ ಸಾಂಸ್ಕೃತಿಕ ಸ್ಪರ್ಧೆಗಳಲ್ಲಿ ಭಾಗವಹಿಸುವಂತೆ ಪ್ರೇರೇಪಿಸಿದರು.

ಹಿರಿಯೂರು ಕ್ಷೇತ್ರ ಸಮನ್ವಯಾಧಿಕಾರಿಗಳಾದ ತಿಪ್ಪೇರುದ್ರಪ್ಪ ಪ್ರಾಸ್ತಾವಿಕವಾಗಿ ಮಾತನಾಡಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳಲ್ಲಿರುವ ಕಲಾಪ್ರತಿಭೆಯನ್ನು ಗುರುತಿಸಿ ಪೋಷಿಸುವ ವೇದಿಕೆ ಇದಾಗಿದೆ. ಇದನ್ನು ಸ್ಪೂರ್ತಿಯಿಗಿ ಬೆಳೆಸಲು ಎಲ್ಲರೂ ಶ್ರಮಿಸಬೇಕಾಗಿದೆ ಹೇಳಿ ಎರಡು ವರ್ಷಗಳ ಕರೋನಾ ಮಹಾಮಾರಿಯ ಅಟ್ಟಹಾಸದ ನಂತರ ಶಿಕ್ಷಣ ಇಲಾಖೆಯ ಇಂತಹ ಪ್ರಮುಖ ಪಠ್ಯೇತರ ಕಾರ್ಯಕ್ರಮಗಳನ್ನು ಆಯೋಜಿಸುವ ಮೂಲಕ ಶಿಕ್ಷಕರಲ್ಲಿ ಮತ್ತು ಮಕ್ಕಳಲ್ಲಿ ಹೊಸ ಚೈತನ್ಯ, ಹೊಸ ಹುರುಪು, ಹೊಸ ಆಶಯ, ಹೊಸ ಹುಮ್ಮಸ್ಸು,  ಮೂಡಿಸಿ ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸಲು ಉತ್ತಮ ವೇದಿಕೆಯಾಗಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀಮತಿ ಶ್ರೀಲತಾ ಶಿವಕುಮಾರ್ ವಹಿಸಿದ್ದರು.ಹರಿಯಬ್ಬೆ ಪ್ರೌಢಶಾಲೆಯ ಪ್ರಭಾರಿ ಪ್ರಾಂಶುಪಾಲರಾದ ಆರ್ ಶಿವಕುಮಾರ್ ಸ್ವಾಗತಿಸಿದರು.

ಕಾರ್ಯಕ್ರಮದಲ್ಲಿ ಬಿ.ಎಚ್.ವೆಂಕಟೇಶ್ ಮಾಜಿ ತಾಲ್ಲೂಕು ಪಂಚಾಯಿತಿ ಅಧ್ಯಕ್ಷರು, ಮಾಜಿ ಅಧ್ಯಕ್ಷರು ರೈತ ಸೇವಾ ಸಹಕಾರ ಸಂಘ, ಮಾಜಿ ಸದಸ್ಯರು ಭೂ ನ್ಯಾಯ ಮಂಡಳಿ ಹಿರಿಯೂರು ತಾಲ್ಲೂಕುರವರು,
ಎಸ್ ಡಿ ಎಂ ಸಿ ಅಧ್ಯಕ್ಷರಾದ ಮಹೇಶ್ ಹಾಗೂ ಸದಸ್ಯರು,  ಇಅಔ ಗಳಾದ ಲೋಹಿತ್, ಶಶಿಧರ್, ಹರೀಶ್ ಪ್ರೌಢಶಾಲಾ ಮುಖ್ಯ ಶಿಕ್ಷಕರ ಸಂಘದ ಜಿಲ್ಲಾ ಸಂಘದ ಕಾರ್ಯದರ್ಶಿಗಳಾದ   ಮಂಜುನಾಥ, ಪ್ರೌಢಶಾಲಾ ಸಹ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ  ವೆಂಕಟೇಶ್, ಅಕ್ಷರ ದಾಸೋಹ ಅಧಿಕಾರಿ  ಮಹೇಶ್ವರ ರೆಡ್ಡಿ, ಹಾಲಿ ಹಾಗೂ ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ  ಜಿ.ಪರಮೇಶ್ವರ ಮತ್ತು ಸದಸ್ಯರು,ಹರಿಯಬ್ಬೆ ಹೋಬಳಿ ವ್ಯಾಪ್ತಿಯಲ್ಲಿ ಬರುವ ಪ್ರೌಢಶಾಲಾ ಶಿಕ್ಷಕರು ಮತ್ತು ಶಿಕ್ಷಕಿಯರು, ಹರಿಯಬ್ಬೆ ಪ್ರೌಢಶಾಲೆಯ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Share This Article
Leave a Comment

Leave a Reply

Your email address will not be published. Required fields are marked *