ಸುದ್ದಿಒನ್, ಚಿತ್ರದುರ್ಗ, ಜುಲೈ.05 :ಶ್ರೀ ಅಯ್ಯಪ್ಪ ಸ್ವಾಮಿ ದೇವಸ್ಥಾನದ ರಜತಾ ಮಹೋತ್ಸವ ಹಾಗೂ ದ್ವಿತೀಯ ಮಹಾ ಕುಂಭಾಭಿಷೇಕ ಮಹೋತ್ಸವ ಅಂಗವಾಗಿ ಮೊದಲ ದಿನವಾದ ಇಂದು ಸಂಜೆ ಕೇರಳದ ತಂತ್ರಿಗಳಾದ ವಿಷ್ಣು ಭಟ್ಟಾದ್ರಿ ಪಾಡ್ ಹಾಗೂ ದೇವಸ್ಥಾನದ ಪ್ರಧಾನ ಅರ್ಚಕರಾದ ಸತೀಶ್ ಶರ್ಮ ರವರ ಸಂಗಡಿಗರಿಂದ ಸಂಧ್ಯಾಕಾಲದಲ್ಲಿ ವಿಶೇಷವಾಗಿ ದೇವಸ್ಥಾನದ ಆವರಣದಲ್ಲಿ ಆಚಾರ್ಯ ವರ್ಣಂ, ಸ್ಥಳ ಶುದ್ಧೀಕರಣ, ವಾಸ್ತುಶಾಂತಿ, ವಾಸ್ತು ಬಲಿ, ಅಂಕುರಾರ್ಪಣ ಪೂಜಾ ಕಾರ್ಯಕ್ರಮದೊಂದಿಗೆ ಪ್ರಾರಂಭಿಸಿ ವಾಸ್ತು ಹೋಮ, ತತ್ವ ಕಲಶ ಅಭಿಷೇಕ, ಬ್ರಹ್ಮಾದಿ ಪರಿಕಲಾ ಅಭಿಷೇಕಗಳು, ಅಯ್ಯಪ್ಪ ಕೇರಳದ ಚಂಡೆ ವಾದ್ಯ ಧ್ವನಿ ಮೊಳಗಿಸುವುದರೊಂದಿಗೆ ಪೂಜಾ ಕಾರ್ಯಕ್ರಮ ಪ್ರಾರಂಭ ಮಾಡಲಾಯಿತು.
ದೇವಸ್ಥಾನದ ಅಧ್ಯಕ್ಷರಾದ ಶರಣ್ ಕುಮಾರ್, ಕಾರ್ಯದರ್ಶಿ ಎಂ ಪಿ ವೆಂಕಟೇಶ್, ಉಪಾಧ್ಯಕ್ಷ ಮಲ್ಲಿಕಾರ್ಜುನ್ ಹಾಗೂ ದೇವಸ್ಥಾನದ ಸಮಿತಿ ಯವರು ಉಪಸ್ಥಿತರಿದ್ದರು. ಅಯ್ಯಪ್ಪ ಸ್ವಾಮಿ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.










