ಉಡುಪಿ, ಮೇ. 24 : ಉಡುಪಿಯ ಅಮೋಘ ಸಾಂಸ್ಕೃತಿಕ- ಸಾಮಾಜಿಕ – ಸಾಹಿತ್ಯಿಕ ಸಂಸ್ಥೆಯ ಪ್ರತಿಷ್ಟಿತ “ಸಾಮರಸ್ಯ” ಪ್ರಶಸ್ತಿಯನ್ನು ಶ್ರೀಬಸವಮೂರ್ತಿ ಮಾದಾರಚನ್ನಯ್ಯ ಸ್ವಾಮೀಜಿಯವರಿಗೆ ಪ್ರಧಾನ ಮಾಡಲಾಯಿತು.
ಶನಿವಾರ ಸಂಜೆ ಉಡುಪಿಯ ಎಂ.ಜಿ.ಎಂ ಕಾಲೇಜಿನ ರವೀಂದ್ರ ಮಂಟಪದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನೆರವೇರಿತು.
ಸಮಾರಂಭದಲ್ಲಿ ಉಡುಪಿ ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ, ಬೈಂದೂರು ಶಾಸಕ ಗುರುರಾಜ ಗಂಟೆಹೊಳೆ ಖ್ಯಾತ ವಿದ್ವಾಂಸರಾದ ಡಾ.ಪಾದೇಕಲ್ಲು ವಿಷ್ಣು ಭಟ್, ಸಾಮಾಜಿಕ ಕಾರ್ಯಕರ್ತ ವಾದಿರಾಜ್, ಉಡುಪಿ ಜಿಲ್ಲೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷರಾದ ನೀಲಾವರ ಸುರೇಂದ್ರ ಅಡಿಗ, ಎಂಜಿಎಂ ಕಾಲೇಜಿನ ಪ್ರಾಚಾರ್ಯರಾದ ಪ್ರೊ. ಲಕ್ಷ್ಮಿ ನಾರಾಯಣ ಕಾರಂತ, ಲೇಖಕಿ ಶ್ರೀಮತಿ ಪಾರ್ವತಿ ಬಿ.ಐತಾಳ್ ಸೇರಿದಂತೆ ಹಲವು ಗಣ್ಯರು ಉಪಸ್ಥಿತರಿದ್ದರು.


















