ವರದಿ ಮತ್ತು ಫೋಟೋ ಕೃಪೆ
ಸುರೇಶ್ ಪಟ್ಟಣ್,
ಮೊ : 98862 95817
ಸುದ್ದಿಒನ್, ಚಿತ್ರದುರ್ಗ,ಜ.11 : ಶ್ರೀ ಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಮಹೋತ್ಸವವು ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ವಾಲ್ಮೀಕಿ ಮೈದಾನದಲ್ಲಿ ಇದೇ ಜನವರಿ 14 ಮತ್ತು 15 ರಂದು ನಡೆಯಲಿದೆ ಈ ಕಾರ್ಯಕ್ರಮಕ್ಕೆ ರಾಜ್ಯದ ವಿವಿಧ ಜಿಲ್ಲೆಗಳಿಂದ ಅಲ್ಲದೆ ದೇಶದ ವಿವಿಧ ಮೂಲೆಗಳಿಂದ ಭಕ್ತಾಧಿಗಳು ಜಾತಿ, ಧರ್ಮ, ಜನಾಂಗದ ಬೇದ ಇಲ್ಲದೆ ಆಗಮಿಸಲಿದ್ದಾರೆ ಎಂದು ಸಂಸದರಾದ ಗೋವಿಂದ ಕಾರಜೋಳ ತಿಳಿಸಿದರು.
ಚಿತ್ರದುರ್ಗ ನಗರದ ಅವರ ನಿವಾಸದಲ್ಲಿ ಭಾನುವಾರ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, 12ನೇ ಶತಮಾನದಲ್ಲಿ ಬಸವಣ್ಣರವರ ಸಮಕಾಲಿನರಾದ ಶ್ರೀ ಗುರು ಸಿದ್ದರಾಮೇಶ್ವರರು ಮಹಾರಾಷ್ಟ್ರದ ಸೊಲ್ಲಾ ಪುರದಲ್ಲಿ ಜನನವಾಗಿ ಹಲವಾರು ಉಪಯುಕ್ತವಾದ ಕಾರ್ಯಕ್ರಮಗಳಾದ ಕಟ್ಟಡ ನಿರ್ಮಾಣ ಕೆರೆಗಳನ್ನು ನಿರ್ಮಿಸುವುದರ ಮೂಲಕ ಜನರಿಗೆ ದಾರಿ ದೀಪವಾಗಿದ್ದಾರೆ. ಇವರ ಜಯಂತಿಯನ್ನು ಹೊಳಲ್ಕೆರೆಯಲ್ಲಿ ಅದ್ದೂರಿಯಾಗಿ ಆಚರಣೆಯನ್ನು ಮಾಡಲಾಗುತ್ತದೆ. ಇದಕ್ಕೆ ಬೇಕಾದ ಎಲ್ಲಾ ರೀತಿಯಾದ ತಯಾರಿಯನ್ನು ಸಹಾ ಮಾಡಲಾಗಿದೆ ಎಂದರು.
ಜ. 14 ರ ಬೆಳಗ್ಗೆ ಜಿ.ಬಸಪ್ಪ ಮಹಾಮಂಟಪದಲ್ಲಿ ಧ್ವಜಾರೋಹಣ ನಡೆಯಲಿದೆ. 10.30 ಕ್ಕೆ ನಡೆಯುವ ಉದ್ಘಾಟನಾ ಸಮಾರಂಭದಲ್ಲಿ ನಾಡಿನ ಹರಗುರು ಚರಮೂರ್ತಿಗಳು ಭಾಗವಹಿಸಲಿದ್ದು, ಬಿಜೆಪಿ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಸಚಿವರಾದ ಈಶ್ವರ ಖಂಡ್ರೆ ನೊಳಂಬ ಇತಿಹಾಸ ಹಾಗೂ ಸಂಘದ ಸಾಕ್ಷ್ಯ ಚಿತ್ರ ಬಿಡುಗಡೆ ಮಾಡಲಿದ್ದಾರೆ. ನೊಳಂಬ ಸಂಚಿಕೆಯನ್ನು ಮಾಜಿ ಸಂಸದರಾದ ಬಸವರಾಜ್ ಬಿಡುಗಡೆ ಮಾಡುವರು. ಮಾಧ್ಯಾಹ್ನ 2.30 ಕ್ಕೆ ಸಾಹಿತ್ಯ ಗೋಷ್ಟಿ ನಡೆಯಲಿದ್ದು, ಸಂಸದ ಗೋವಿಂದ ಕಾರಜೋಳ ಉದ್ಘಾಟಿಸಲಿದ್ದಾರೆ. ಮಾಜಿ ಸಚಿವರಾದ ಜೆ.ಸಿ.ಮಾಧುಸ್ವಾಮಿ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಸಿದ್ದರಾಮ ಸಾಹಿತ್ಯ ಪ್ರಶಸ್ತಿಯನ್ನು ಕತ್ತಿಗೆ ಚನ್ನಪ್ಪ ಅವರಿಗೆ ಸಂಸದರಾದ ಖೋಟಾ ಶ್ರೀನಿವಾಸ್ ಪೂಜಾರಿ ಪ್ರಧಾನ ಮಾಡಲಿದ್ದಾರೆ ಎಂದರು.
ಜ.15 ರ ಬೆಳಗ್ಗೆ 7.30 ಕ್ಕೆ ಇಷ್ಟಲಿಂಗ ಪೂಜಾ ವಿಧಾನ ಹಾಗೂ ಲಿಂಗಧಾರಣ ಕಾರ್ಯಕ್ರಮ ನಡೆಯಲಿದೆ. ಬೆಳಗ್ಗೆ 10.30 ಕ್ಕೆ ಮಹಿಳಾ ಮತ್ತು ಕೃಷಿ ಗೋಷ್ಠಿಯನ್ನು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಉದ್ಘಾಟಿಸುವರು. ಸಮಥಾ ಯೋಗಿ ಸಿದ್ದರಾಮ ಕೃತಿಯನ್ನು ಸಚಿವ ಎಂ.ಬಿ.ಪಾಟೀಲ್, ಸಿದ್ದರಾಮ ಸಂಸ್ಕೃತ ಕೃತಿಯನ್ನು ಸಚಿವೆ ಲಕ್ಷ್ಮೀಹೆಬ್ಬಾಳಕರ್ ಬಿಡುಗಡೆ ಮಾಡುವರು. ಮಧ್ಯಾಹ್ನ 2.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಹರಗುರುಚರ ಮೂರ್ತಿಗಳು ಭಾಗವಹಿಸಲಿದ್ದು, ಸಮಾರೋಪ ನುಡಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿಯಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ನೊಳಂಬರ ಗಥಾ ಕಥನಾ ಕೃತಿ ಬಿಡುಗಡೆ ಮಾಡುವರು. ಮಾಜಿ ಸಚಿವ ಹೆಚ್.ಆಂಜನೇಯ ಸಿದ್ದರಾಮರ ವಚನಗಳ ಧ್ವನಿ ಮುದ್ರಿಕೆಯನ್ನು ಬಿಡುಗಡೆ ಮಾಡುವರು ಎಂದು ತಿಳಿಸಿದರು.
ಪತ್ರಿಕಾ ಗೋಷ್ಠಿಯಲ್ಲಿ ಶ್ರೀಗುರು ಸಿದ್ದರಾಮೇಶ್ವರರ 853 ನೇ ಜಯಂತಿ ಮಹೋತ್ಸವದ ಸ್ವಾಗತ ಸಮಿತಿಯ ಪ್ರಧಾನ ಕಾರ್ಯದರ್ಶಿ ಎ.ವಿ.ಶಿವರುದ್ರಪ್ಪ, ಕಾರ್ಯದರ್ಶಿ ಬಿ.ಚಂದ್ರಶೇಖರ್, ಖಂಜಾಚಿ ವಿ.ಜಿ.ಕುಬೇರಪ್ಪ, ಉಪಾಧ್ಯಕ್ಷರಾದ ಎಸ್.ರಮೇಶಪ್ಪ, ಎನ್.ಆರ್. ಮಹೇಶ್ವರಪ್ಪ, ಸಹ ಕಾರ್ಯದರ್ಶಿಗಳಾದ ಟಿ.ಆರ್.ಹಾಲೇಶಪ್ಪ, ಸೇರಿದಂತೆ ಇತರರು ಉಪಸ್ಥಿತರಿದ್ದರು.

