Kannada news ಚಿತ್ರದುರ್ಗ ದಾವಣಗೆರೆ ಬೆಂಗಳೂರು ರಾಜಕೀಯ ಚುನಾವಣೆ ಮಳೆ ಕ್ರಿಕೆಟ್ ಭಾರತ ಚಿನ್ನ ಬೆಳ್ಳಿ ಹವಾಮಾನ ಕ್ರಿಕೆಟ್  ಕನ್ನಡ ನ್ಯೂಸ್

ಅದ್ದೂರಿಯಾಗಿ ನಡೆದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ರಥೋತ್ಸವ

---Advertisement---

 

ವರದಿ ಮತ್ತು ಫೋಟೋ ಕೃಪೆ
ಸುರೇಶ್ ಬೆಳಗೆರೆ, ಚಳ್ಳಕೆರೆ
ಮೊ : 8431413188

ಸುದ್ದಿಒನ್, ಚಿತ್ರದುರ್ಗ, ಮಾರ್ಚ್. 06 : ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿಯಲ್ಲಿ ಪವಾಡ ಪುರುಷ ನೆಲೆಸಿರುವ ಐತಿಹಾಸಿಕ ಪ್ರಸಿದ್ಧವಾದ ಶ್ರೀ ಗುರು ತಿಪ್ಪೇರುದ್ರಸ್ವಾಮಿ ವಾರ್ಷಿಕ ದೊಡ್ಡ ಕರಥೋತ್ಸವ ಲಕ್ಷಾಂತರ ಭಕ್ತರ ನಡುವೆ ಸಡಗರ ಸಂಭ್ರಮ ನಡೆಯಿತು.

ಬೆಳಗ್ಗೆಯಿಂದಲೇ ಬಣ್ಣ ಬಣ್ಣದ ಬಾವುಟಗಳಿಂದ ರಥವನ್ನು ಸಿಂಗಾರ ಮಾಡಲಾಗಿತ್ತು. ಮಧ್ಯಾಹ್ನ 3ಕ್ಕೆ ಸ್ವಾಮಿಯ ಉತ್ಸವ ಮೂರ್ತಿಯನ್ನು ರಥದಲ್ಲಿ ಸಕಲ ಪೂಜಾ ವಿಧಿವಿಧಾನಗಳೊಂದಿಗೆ ರಥದಲ್ಲಿ ಪ್ರತಿಷ್ಠಾಪಿಸಿ ನಂತರ ಬಾವುಟ ರಾಜು ಪ್ರಕ್ರಿಯೆಯನ್ನು ನಡೆಸಲಾಯಿತು. ಮುಕ್ತಿ ಬಾವುಟ ಹರಾಜು ಪ್ರಕ್ರಿಯೆಯಲ್ಲಿ 32 ಲಕ್ಷಕ್ಕೆ ಶ್ರೀನಾಥ್ ಎನ್ನುವರು ಪಡೆದರು.. ಜನಸಾಗರದ ನಡುವೆ
ಭಕ್ತರು ಸಂಭ್ರಮದಿಂದ ರಥವನ್ನು ಎಳೆದರು. ರಥ ಸಾಗುವ ದಾರಿಯುದ್ದಕ್ಕೂ ಮಹಿಳೆಯರು, ಮಕ್ಕಳು ಬಾಳೆಹಣ್ಣು, ಕಾಳುಮೆಣಸು, ಬೆಲ್ಲದ ಚೂರನ್ನು ರಥಕ್ಕೆ ಹಾಕಿ ಹರಕೆ ಪೂರೈಸಿದರು. ಪಂಜು, ಕರಡಿ ಮಜಲು, ಡೊಳ್ಳು ವಾದ್ಯ ಹಾಗೂ ನಂದಿಕೋಲು ಕುಣಿತ ಆಕರ್ಷಿಸಿತು.

ದೊಡ್ಡ ರಥ ರಾಜ ಗಂಭೀರದಲ್ಲಿ ಸಾಗುತ್ತ ವೀರಭದ್ರನ ಓಣಿಗೆ ಬಂದಾಗ ಹರಕೆ ಹೊತ್ತ ನೂರಾರು ಯುವಕರು ಬೆಳಗ್ಗೆಯಿಂದಲೇ ಉಪವಾಸ ವ್ರತ ಕೈಗೊಂಡಿದ್ದರು. ಯುವಕರು ಶಸ್ತ್ರ ಪೂಜಾ ವಿಧಿಗಳನ್ನು ಕೈಗೊಂಡು, ಯುವಕರು ವೀರಭದ್ರ ಕುಣಿತ ಪ್ರದರ್ಶಿಸಿದರು. ಉತ್ಸವಕ್ಕೆ ಜನಪದ ಕಲಾತಂಡಗಳಾದ ಕೋಲಾಟ, ಬೊಂಬೆ ಕುಣಿತ, ಮೆರುಗು ತಂದುವು.

ಈ ಜಾತ್ರಾ ಮಹೋತ್ಸವದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಶಾಸಕ ಟ. ರಘುಮೂರ್ತಿ, ಜಿಲ್ಲಾಧಿಕಾರಿ ಕೆ ವೆಂಕಟೇಶ್ ಸೇರಿದಂತೆ ಜನಪ್ರತಿನಿಧಿಗಳು ಅಧಿಕಾರಿಗಳು ಭಕ್ತರು ಇದ್ದರು. ಪೊಲೀಸ್ ಇಲಾಖೆ ವತಿಯಿಂದ ಸೂಕ್ತ ಬಂದೋಬಸ್ತು ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು..

ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ

ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.

ವರದಿ ಮಾಡುವುದು ಹೇಗೆ?

  • ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ವಾಟ್ಸಪ್ ಮಾಡಿ: 90369 74702

ನಾವು ಏನು ಮಾಡುತ್ತೇವೆ?

  • ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
  • ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
  • ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.

suddionenews

ಕನ್ನಡ ಸುದ್ದಿಗಳ ವಿಶ್ವಾಸಾರ್ಹ ಮೂಲ — suddione.com ನಲ್ಲಿ ಓದಿ ರಾಷ್ಟ್ರೀಯ, ಅಂತರರಾಷ್ಟ್ರೀಯ, ರಾಜಕೀಯ, ಕ್ರೀಡೆ, ಮನರಂಜನೆ, ವಾಣಿಜ್ಯ, ಶಿಕ್ಷಣ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಪ್ರತಿಯೊಂದು ಪ್ರಮುಖ ಅಪ್‌ಡೇಟ್. ನೀವು ಯಾವಾಗಲೂ ಅಪ್‌ಡೇಟ್ ಆಗಿರಲು ನಾವು ವೇಗವಾದ, ನಿಖರವಾದ ಮತ್ತು ನಿಷ್ಪಕ್ಷಪಾತವಾದ ಸುದ್ದಿಗಳನ್ನು ಸರಳ ಹಾಗೂ ಸ್ಪಷ್ಟ ಭಾಷೆಯಲ್ಲಿ ನೀಡುತ್ತೇವೆ. ಸಂಪಾದಕರು: ನಾಗೇಂದ್ರ ರೆಡ್ಡಿ ಪಿ.ಎಲ್

Join WhatsApp

Join Now

Join Telegram

Join Now