ಸುದ್ದಿಒನ್, ಹಿರಿಯೂರು, ಜುಲೈ. 13 : ತಾಲ್ಲೂಕಿನ ಮಸ್ಕಲ್ ಗ್ರಾಮದಲ್ಲಿ ನಾಳೆ ಸೋಮವಾರದಿಂದ ಗ್ರಾಮದೇವತೆ ಶ್ರೀ ಕರಿಯಮ್ಮ ದೇವಿಯ ಜಾತ್ರಾ ಮಹೋತ್ಸವ ಆರಂಭವಾಗಲಿದೆ. ನಾಳೆ ಸೋಮವಾರ ಬೆಳಗ್ಗೆ 8 ಗಂಟೆಗೆ ಕರಿಯಮ್ಮ ದೇವಿಯನ್ನು ಗರ್ಭಗುಡಿಯಿಂದ ಹೊರ ತಂದು ಪಲ್ಲಕ್ಕಿಯಲ್ಲಿ ಕೂರಿಸಿಕೊಂಡು, ಕೂಡಲ ಸಂಗಮದ ವೇದಾವತಿ ನದಿಯಲ್ಲಿ ಗಂಗಾಪೂಜೆ ನೇರವೇರಿಸಿಲಾಗುತ್ತಿದೆ. ಬಳಿಕ ಗ್ರಾಮಕ್ಕೆ ಮೆರವಣಿಗೆ ಮೂಲಕ ಹಿಂದುರುಗಿ, ದೇವಸ್ಥಾನದಲ್ಲಿ ಗದ್ದಿಗೆಯಾಗುವುದು. ಮಂಗಳವಾರ ಬೆಳಗ್ಗೆ ದೇವಿಗೆ ವಿಶೇಷ ವಿವಿಧ ಹೂವುಗಳ ಅಲಂಕರಿಸಿ, ಪೂಜೆ ಸಲ್ಲಿಸಲಾಗುವುದು. ಬಳಿಕ ಮಸ್ಕಲ್, ಟಿಬಿ ಗೊಲ್ಲರಹಟ್ಟಿ, ಚಿತ್ರದೇವರಹಟ್ಟಿ, ಮಲ್ಲೇಣು, ಮಟ್ಟಿ , ಪುಟ್ಟಯ್ಯನಕಟ್ಟೆ ಗ್ರಾಮಸ್ಥರಿಂದ ಪೂಜೆ ಸಲ್ಲಿಸಿ, ಮಹಿಳೆಯರಿಂದ ತುಂಬಿಟ್ಟಿನ ಆರತಿ ಬೆಳಗುವ ಕಾರ್ಯಕ್ರಮ ನೆರವೇರಲಿದೆ.
ಮೂರು ವರ್ಷಗಳ ಬಳಿಕ ಜಾತ್ರಾ ಮಹೋತ್ಸವ ಅದ್ದೂರಿಯಾಗಿ ನಡೆಯಲಿದೆ. ಈಗಾಗಲೇ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿದೆ. ಹಬ್ಬದ ಅಂಗವಾಗಿ ಮಂಗಳವಾರ ರಾತ್ರಿ 9 ಗಂಟೆಗೆ ಮಸ್ಕಲ್, ಮಲ್ಲೇಣು ಹಾಗೂ ಚಿತ್ರದೇವರಹಟ್ಟಿ ಗ್ರಾಮದಲ್ಲಿ ಶ್ರೀ ದೇವಿ ಮಹಾತ್ಮೆ ನಾಟಕ ಪ್ರದರ್ಶನ ನಡೆಯಲಿದೆ ಎಂದು ದೇವಸ್ಥಾನಕ್ಕೆ ಸೇರಿದ ಎಲ್ಲಾ ಕೈವಾಡಸ್ಥರು ತಿಳಿಸಿದ್ದಾರೆ.
ಸಾರ್ವಜನಿಕ ಕುಂದುಕೊರತೆ ವಿಭಾಗ : ನಿಮ್ಮ ಧ್ವನಿ - ನಮ್ಮ ವೇದಿಕೆ
ನಿಮ್ಮ ಊರಿನ ಸಮಸ್ಯೆಗಳು ಇನ್ನು ಮುಂದೆ ಕೇವಲ ಚರ್ಚೆಯಾಗಬಾರದು, ಅವುಗಳಿಗೆ ಪರಿಹಾರ ಸಿಗಬೇಕು.
ವರದಿ ಮಾಡುವುದು ಹೇಗೆ?
- ನಿಮ್ಮ ಸುತ್ತಮುತ್ತಲಿನ ರಸ್ತೆ, ನೀರು, ವಿದ್ಯುತ್ ಸಮಸ್ಯೆಗಳ ಫೋಟೋ, ವಿಡಿಯೋ ಅಥವಾ ಮಾಹಿತಿ ನಮಗೆ ಕಳುಹಿಸಿ.
ನಾವು ಏನು ಮಾಡುತ್ತೇವೆ?
- ನೀವು ಕಳುಹಿಸಿದ ವರದಿಗಳನ್ನು suddione.com ನಲ್ಲಿ ಪ್ರಕಟಿಸುತ್ತೇವೆ.
- ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳ ಗಮನಕ್ಕೆ ತಂದು ಪರಿಹಾರಕ್ಕಾಗಿ ಒತ್ತಾಯಿಸುತ್ತೇವೆ.
- ನಿಮ್ಮೂರಿನ ಅಭಿವೃದ್ಧಿಗೆ ನಿಮ್ಮೊಂದಿಗೆ ಧ್ವನಿಗೂಡಿಸುತ್ತೇವೆ.
















