Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಚಿತ್ರದುರ್ಗದಲ್ಲಿ 25 ರಂದು ಬೈಕ್ ರ‌್ಯಾಲಿ : 26 ರಂದು ಶ್ರೀ ಕೃಷ್ಣಜನ್ಮಾಷ್ಟಮಿ : ಸಿ.ಟಿ.ಕೃಷ್ಣಮೂರ್ತಿ

Facebook
Twitter
Telegram
WhatsApp

 

ವರದಿ ಮತ್ತು ಫೋಟೋ ಕೃಪೆ ಕೆ.ಎಂ.ಮುತ್ತುಸ್ವಾಮಿ ಕಣ್ಣನ್,  ಮೊ : 78998 64552

ಸುದ್ದಿಒನ್, ಚಿತ್ರದುರ್ಗ, ಆಗಸ್ಟ್.18  : ಹೊಳಲ್ಕೆರೆ ರಸ್ತೆಯಲ್ಲಿರುವ ಶ್ರೀಕೃಷ್ಣ ಯಾದವಾನಂದ ಮಠದ ಹತ್ತಿರವಿರುವ ಕೃಷ್ಣ ವೃತ್ತದಲ್ಲಿ ಆಗಸ್ಟ್ 26 ರಂದು ಶ್ರೀ ಕೃಷ್ಣಜನ್ಮಾಷ್ಟಮಿ ನಡೆಯಲಿದೆ ಎಂದು ನಗರಸಭೆ ಮಾಜಿ ಅಧ್ಯಕ್ಷ ಸಿ.ಟಿ.ಕೃಷ್ಣಮೂರ್ತಿ ತಿಳಿಸಿದರು.

ಪತ್ರಕರ್ತರ ಭವನದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಆಗಸ್ಟ್ 25 ರಂದು ಬೆಳಿಗ್ಗೆ 11 ಕ್ಕೆ ಕೃಷ್ಣ ವೃತ್ತದಿಂದ ಬೈಕ್ ರ‌್ಯಾಲಿ ಹೊರಟು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಲಿದೆ. 26 ರಂದು ಬೆಳಿಗ್ಗೆ ಐದು ಗಂಟೆಯಿಂದಲೆ ಪೂಜೆ ವಿವಿಧ ಸಾಂಸ್ಕೃತಿಕ ಹಾಗೂ ಮನೋರಂಜನಾ ಕಾರ್ಯಕ್ರಮಗಳು ನಡೆಯಲಿದ್ದು, ಸ್ಥಳೀಯ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಯಾದವ ಸಮಾಜದ ಮುಖಂಡರುಗಳು ಹಾಗೂ ಜಿಲ್ಲಾಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ. ಕೇವಲ ಯಾದವ ಜನಾಂಗವಷ್ಟೆ ಅಲ್ಲ ಎಲ್ಲಾ ಜಾತಿಯವರು ಶ್ರೀಕೃಷ್ಣ ಜನ್ಮಾಷ್ಠಮಿಯಲ್ಲಿ ಭಾಗವಹಿಸಿ ಜಯಂತಿಯನ್ನು ಯಶಸ್ವಿಗೊಳಿಸುವಂತೆ ಸಿ.ಟಿ.ಕೃಷ್ಣಮೂರ್ತಿ ಮನವಿ ಮಾಡಿದರು.

ಶ್ರೀಕೃಷ್ಣ ಜನ್ಮಾಷ್ಠಮಿ ಆಚರಣಾ ಸಮಿತಿ ಅಧ್ಯಕ್ಷ ಕದರಪ್ಪ, ಆರ್.ಶಿವಣ್ಣ, ಗರಡಿ ತಿಮ್ಮಣ್ಣ, ಮೈಲಾರಪ್ಪ, ನಗರಸಭೆ ಮಾಜಿ ಸದಸ್ಯ ಡಿ.ಸಿ.ಸುರೇಶ್ ಪತ್ರಿಕಾಗೋಷ್ಟಿಯಲ್ಲಿ ಉಪಸ್ಥಿತರಿದ್ದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಡಿಸೆಂಬರ್ 01 ರಿಂದ ಬೆಂಬಲ ಬೆಲೆಯಲ್ಲಿ ರಾಗಿ ಖರೀದಿ : ಜಿಲ್ಲಾಧಿಕಾರಿ ಟಿ.ವೆಂಕಟೇಶ್

  ಚಿತ್ರದುರ್ಗ. ನ.22: ಪ್ರಸಕ್ತ ಮುಂಗಾರು ಹಂಗಾಮಿನ ರಾಗಿ ಬೆಳೆಯನ್ನು ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಖರೀದಿಸಲು ಡಿಸೆಂಬರ್ 01 ರಿಂದ ನೋಂದಣಿ ಕಾರ್ಯ ಪ್ರಾರಂಭಿಸಲಾಗುವುದು. ಡಿ.31 ರವರೆಗೆ ನೋಂದಣಿ ನಡೆಯಲಿದೆ. ಪ್ರತಿ ಕ್ವಿಂಟಾಲ್

ಸತತ ಏರಿಕೆಯತ್ತ ಸಾಗುತ್ತಿದೆ ಚಿನ್ನದ ಬೆಲೆ : ಇಂದಿನ ದರ ಹೀಗಿದೆ..!

ಚಿನ್ನದ ಬೆಲೆ ಇಳಿಕೆಯಾಯ್ತು ಎಂದು ಖುಷಿ ಪಡುತ್ತಿರುವಾಗಲೇ ಇದೇನಿದು ಒಂದೇ ಸಮನೇ ಏರುತ್ತಲೇ ಇದೆ. ಅದರಲ್ಲೂ 70-80 ರೂಪಾಯಿ ಏರುತ್ತಿದೆ. ಇಂದು ಕೂಡ ಚಿನ್ನದ ದರ ಏರಿಕೆಯಾಗಿದ್ದು, 70 ರೂಪಾಯಿ ಗ್ರಾಂಗೆ ಜಾಸ್ತಿಯಾಗಿದೆ. ಈ

ಚಿತ್ರದುರ್ಗ | ಯೋಗೀಶ್ ಸಹ್ಯಾದ್ರಿ ಬಿಜೆಪಿ ಸೇರ್ಪಡೆ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಪಟ್ಟಣ್, ಮೊ : 98862 95817 ಸುದ್ದಿಒನ್, ಚಿತ್ರದುರ್ಗ ನ. 22 : ಉಪನ್ಯಾಸಕರು ಹಾಗೂ ಸಹ್ಯಾದ್ರಿ ಇಂಗ್ಲಿಷ್ ಅಕಾಡೆಮಿ, ಅಧ್ಯಕ್ಷರಾದ ಯೋಗೀಶ್ ಸಹ್ಯಾದ್ರಿಯವರು ಬಿಜೆಪಿ

error: Content is protected !!