ಶ್ರೀಲಂಕಾ: ಸದ್ಯ ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ತಲೆದೂರಿ, ಅಲ್ಲಿನ ಜನ ಹಿಡಿಶಾಪ ಹಾಕುತ್ತಿದ್ದಾರೆ. ಸರ್ಕಾರದ ವಿರುದ್ಧ ಪ್ರತಿಭಟನೆಗಳು ನಡೆಯುತ್ತಿವೆ. ಈ ಬೆನ್ನಲ್ಲೇ ಹಣಕಾಸು ಸಚಿವರಾಗಿ ಸೋಮವಾರ ಅಧಿಕಾರ ಸ್ವೀಕರಿಸಿದ್ದ ಸಬ್ರಿ ಅಲಿ ಇದೀಗ ರಾಜೀನಾಮೆ ನೀಡಿದ್ದಾರೆ. ಒಂದೇ ದಿನಕ್ಕೆ ಸಚಿವ ಸ್ಥಾನ ತೊರೆದಿದ್ದಾರೆ.
ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಎದುರಾಗಿರುವ ಹಿನ್ನೆಲೆ ಒಂದೇ ದಿನ 26 ಸಚಿವರು ರಾಜೀನಾಮೆ ನೀಡಿದ್ದಾರೆ. ಇದೀಗ ಹಣಕಾಸು ಸಚಿವರು ರಾಜೀನಾಮೆ ನೀಡಿದ್ದು, ತಕ್ಷಣದಿಂದಲೇ ಜಾರಿಗೆ ಬರುವಂತೆ ನಾನು ರಾಜೀನಾಮೆ ನೀಡುತ್ತಿದ್ದೇನೆ ಎಂದು ಶ್ರೀಲಂಕಾ ಅಧ್ಯಕ್ಷರಿಗೆ ಪತ್ರ ಬರೆದಿದ್ದಾರೆ.
ಶ್ರೀಲಂಕಾದ ಜನತೆ ಸದ್ಯ ಸಾಕಷ್ಟು ಸಮಸ್ಯೆಗೆ ಸಿಲುಕಿದ್ದಾರೆ. ದೇಶದಲ್ಲಿ ನಾನಾ ಸಮಸ್ಯೆಗಳು ತಲೆದೂರಿದೆ. ಇಂಧನ, ಅಗತ್ಯ ವಸ್ತುಗಳ ಸಮಸ್ಯೆ ಹೆಚ್ಚಾಗಿದೆ. ವಿದ್ಯುತ್ ಕಡಿತದಿಂದಾಗಿ ಜನ ತಿರುಗಿ ಬಿದ್ದಿದ್ದಾರೆ. ಅಲ್ಲಿನ ಸರ್ಕರಾದ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.