Notice: Undefined index: options in /home/nagendra/public_html/content/plugins/elementor-pro/modules/theme-builder/widgets/site-logo.php on line 124

ಸ್ಟ್ರಾಂಗ್ ಮ್ಯಾನ್ ಆಫ್ ಯೂನಿವರ್ಸಿಟಿ ಟೈಟಲ್ ಪಡೆದ ಶ್ರೀ ಮಂಜುನಾಥ ಸ್ವಾಮಿ ಕಾಲೇಜು ವಿದ್ಯಾರ್ಥಿ

Facebook
Twitter
Telegram
WhatsApp

ದಾವಣಗೆರೆ : ಭಾರ ಎತ್ತುವ ಹಾಗೂ ದೇಹದಾರ್ಢ್ಯ ಸ್ಪರ್ಧೆಯಲ್ಲಿ ಮಂಜುನಾಥ ಮತ್ತು ಮುಕ್ತಿ ಎಂಬ ವಿದ್ಯಾರ್ಥಿಗಳು ಕ್ರಮವಾಗಿ ಮೊದಲ ಮತ್ತು ಎರಡನೇ ಸ್ಥಾನ ಪಡೆದಿದ್ದಾರೆ.

ಶ್ರೀ ಮಂಜುನಾಥ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಹಾಗೂ ದಾವಣಗೆರೆ ವಿಶ್ವವಿದ್ಯಾಲಯದ ಸಹಯೋಗದಲ್ಲಿ ನಿನ್ನೆ (ಮಂಗಳವಾರ) ನಡೆದ ಭಾರ ಎತ್ತುವ, ದೇಹದಾರ್ಢ್ಯ ಅಂತರ್ ಕಾಲೇಜು ಸ್ಪರ್ಧೆ ನಡೆಯಿತು.

ಈ ಸ್ಪರ್ಧೆಯಲ್ಲಿ ಶ್ರೀ ಮಂಜುನಾಥಸ್ವಾಮಿ ಪ್ರಥಮ ದರ್ಜೆ ಕಾಲೇಜಿನ ಮೊದಲ ಬಿಎ ವಿದ್ಯಾರ್ಥಿ ಮಂಜುನಾಥ್ ,ಡಿ ಫವರ್ ಲಿಪ್ಟಿಂಗ್ ನಲ್ಲಿ, 59ಕೆಜಿ ವಿಭಾಗದಲ್ಲಿ ಮೊದಲನೇ ಸ್ಥಾನ ಪಡೆದು ಸ್ಟ್ರಾಂಗ್ ಮ್ಯಾನ್ ಆಫ್ ಯೂನಿವರ್ಸಿಟಿ ಎಂದು ಬಾಡಿ ಬಿಲ್ಡಿಂಗ್ ನಲ್ಲಿ , 60 ಕೆಜಿ ವಿಭಾಗದಲ್ಲಿ ಮೊದಲನೇ ಸ್ಥಾನ ಪಡೆದು ಮಿಸ್ಟರ್ ಡಿವಿಜಿ ಯೂನಿವರ್ಸಿಟಿ ಟೈಟಲ್ ಪಡೆದಿದ್ದಾರೆ.

ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಮೊದಲನೇ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿರುವ ಮುಕ್ತಿ, ಭಾರ ಎತ್ತುವ ಸ್ಪರ್ಧೆಯ 45 ಕೆಜಿ ವಿಭಾಗದಲ್ಲಿ ಮೊದಲನೆ ಸ್ಥಾನ, ಪವರ್ ಲಿಪ್ಟಿಂಗ್ ನಲ್ಲಿ 47 ಕೆಜಿ ವಿಭಾಗದಲ್ಲಿ 2ನೇ ಸ್ಥಾನ ಪಡೆದಿದ್ದಾರೆ.

ಈ ಇಬ್ಬರು ವಿಜೇತರನ್ನು ಮಂಜುನಾಥ ಸ್ವಾಮಿ ಪ್ರಥಮ ದರ್ಜೆ ಕಾಲೇಜು ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಉಪನ್ಯಾಸಕರ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂಧನೆ ಸಲ್ಲಿಸಿದರು.

Facebook
Twitter
Telegram
WhatsApp
suddionenews

suddionenews

Leave a Comment

Top Stories

ಸಿಇಎನ್ ಪೊಲೀಸರ ದಾಳಿ : ಅಂತರ್ ರಾಜ್ಯ ಗಾಂಜಾ ಪೆಡ್ಲರ್ ಬಂಧನ

ಸುದ್ದಿಒನ್, ಚಿತ್ರದುರ್ಗ, ನವೆಂಬರ್. 22 : ಆಂದ್ರಪ್ರದೇಶದ ವಿಶಾಖಪಟ್ಟಣಂ ನಿಂದ ಗಾಂಜಾವನ್ನು ತಂದು ಚಿತ್ರದುರ್ಗ ನಗರಕ್ಕೆ ಬಂದು ಗಾಂಜಾ ಮಾರಾಟ ಮಾಡುತ್ತಿದ್ದ ಡ್ರಗ್ಸ್‌ ಪೆಡ್ಲರ್‌ನನ್ನು ಸಿಇಎನ್ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬಿಹಾರದ ಹರಿ ಓಂಕುಮಾರ್(24

ಪೆಟ್ರೋಲ್ ಬಂಕಿನಲ್ಲಿ ವಂಚನೆ ಆರೋಪ : ಗ್ರಾಹಕರು ಹಾಗೂ ಸಿಬ್ಬಂದಿಗಳ ನಡುವೆ ಮಾತಿನ ಚಕಮಕಿ

  ವರದಿ ಮತ್ತು ಫೋಟೋ ಕೃಪೆ ಸುರೇಶ್ ಬೆಳಗೆರೆ ಮೊ : 97398 75729 ಸುದ್ದಿಒನ್, ಚಳ್ಳಕೆರೆ, ನವೆಂಬರ್. 22 : ಬೈಕ್ ಗಳಿಗೆ ಪೆಟ್ರೋಲ್ ಹಾಕುವ ವೇಳೆ ಗ್ರಾಹಕರಿಗೆ ಇಲ್ಲಿನ ಸಿಬ್ಬಂದಿ ವಂಚನೆ

ಅಕ್ರಮ ಕಸಾಯಿ ಖಾನೆ ಬಂದ್ ಮಾಡಿ : ದಾದಾ ಪೀರ್ ಆಗ್ರಹ : ವಿಡಿಯೋ ವೈರಲ್..!

ಸುದ್ದಿಒನ್, ಹಿರಿಯೂರು : ಅಕ್ರಮವಾಗಿ ಕಸಾಯಿ ಖಾನೆ ನಡೆಸುತ್ತಿರುವವರ ವಿರುದ್ಧ ದಾದಾ ಪೀರ್ ಎಂಬುವವರು ತಮ್ಮ ಆಕ್ರೋಶ ವ್ಯಕ್ತಪಡಿಸಿದ್ದಾರೆ. ದಾದಾ ಪೀರ್ 6ನೇ ವಾರ್ಡ್ ನಲ್ಲಿ ವಾಸಿಸುವವ ವ್ಯಕ್ತಿಯಾಗಿದ್ದಾರೆ. ಕಸಾಯಿ ಖಾನೆಯಿಂದ ಮಕ್ಕಳು ಅನಾರೋಗ್ಯಕ್ಕೆ

error: Content is protected !!