ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿ : ನಾಳೆ ಕೆಂಡಾರ್ಚನೆ, ನಾಡಿದ್ದು ರಥೋತ್ಸವ

1 Min Read

 

ವರದಿ ಮತ್ತು ಫೋಟೋ ಕೃಪೆ
ವೇದಮೂರ್ತಿ. ಎಂ.
ಭೀಮಸಮುದ್ರ, ಚಿತ್ರದುರ್ಗ (ತಾ)
ಮೊ : 8088076203

ಸುದ್ದಿಒನ್, ಚಿತ್ರದುರ್ಗ, ಫೆಬ್ರವರಿ. 24 : ತಾಲ್ಲೂಕಿನ
ಭೀಮಸಮುದ್ರ ಸಮೀಪದ ಮುಜರೆ ಬಸಾಪುರ ಶ್ರೀ ಮಾವಿನಹಳ್ಳಿ ಬಸವೇಶ್ವರ ಸ್ವಾಮಿಯ ಕೆಂಡಾರ್ಚನೆ ನಾಳೆ (ಫೆ. 25 ರಂದು) ನಡೆಯಲಿದೆ.

ಜಾತ್ರಾ ಮಹೋತ್ಸವ ಫೆಬ್ರವರಿ 22 ರಿಂದ ಆರಂಭವಾಗಿದ್ದು, 27ರವರೆಗೆ ಜರುಗಲಿದೆ ಎಂದು ದೇವಸ್ಥಾನದ ಸಮಿತಿಯವರು ತಿಳಿಸಿದ್ದಾರೆ.

ಫೆಬ್ರವರಿ. 25 ರಂದು ಹೂವಿನ ಉತ್ಸವ ಗಜೋಸ್ತವ ಹಾಗೂ10 ಗಂಟೆಗೆ ಕೆಂಡಾರ್ಚನೆ,

ಫೆಬ್ರವರಿ 26 ರಂದು ಬೆಳಿಗ್ಗೆ 11 ಗಂಟೆಗೆ ಸಾಮೂಹಿಕ ವಿವಾಹ ಕಾರ್ಯಕ್ರಮ ಹಾಗೂ ಸಂಜೆ 4 ಗಂಟೆಗೆ ಹೂವಿನ ಅಡ್ಡ ಪಲ್ಲಕ್ಕಿ ಉತ್ಸವ, ಸಂಜೆ 5:00 ಗಂಟೆಗೆ ಸ್ವಾಮಿಯ ರಥೋತ್ಸವ ನಡೆಯಲಿದೆ. ಫೆಬ್ರವರಿ. 27 ರಂದು ಕಂಕಣ ವಿಸರ್ಜನೆ ಹಾಗೂ ಮಹಾಮಂಗಳಾರತಿ ಕಾರ್ಯಕ್ರಮ ನಡೆಯಲಿದೆ.

 

ವಿಶೇಷವಾಗಿ ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ. ಆಗಮಿಸುವ ವಧುವರರಿಗೆ ಬಟ್ಟೆ ತಾಳಿ ನೀಡಲಾಗುತ್ತದೆ. ಎಂದು ಸಮಿತಿಯ ಸದಸ್ಯರು ತಿಳಿಸಿದ್ದಾರೆ. ವಿವಾಹ ಕಾರ್ಯಕ್ರಮಕ್ಕೆ ಆಗಮಿಸುವ ವಧು-ವರರು ಹೆಸರು ನೋಂದಾಯಿಸಿಕೊಳ್ಳಬೇಕೆಂದು ದೇವಸ್ಥಾನದ ಕಾರ್ಯದರ್ಶಿ ಗಂಗಾಧರಪ್ಪ (ಮೊ : 9945054944) ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share This Article
Enable Notifications OK No thanks